Thursday, September 29, 2022

ಕಾಪು: ಫ್ರಿಡ್ಜ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌-ಸುಟ್ಟು ಭಸ್ಮವಾದ ಸೊತ್ತುಗಳು

ಕಾಪು: ಮನೆಯೊಂದರಲ್ಲಿ ಫ್ರಿಡ್ಜ್‌ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮನೆಯ ಸೊತ್ತುಗಳು ಸುಟ್ಟು ಭಸ್ಮಗೊಂಡ ಘಟನೆ ಇಂದು ಬೆಳಿಗ್ಗೆ ಕಾಪುವಿನ ಪೊಲಿಪುವಿನಲ್ಲಿ ಸಂಭವಿಸಿದೆ.


ದಿನೇಶ್ ಪೂಜಾರಿ ಅವರ ವಸತಿ ಸಂಕೀರ್ಣದ ಮೇಲಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗುರುರಾಜ್ ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ ಬಳಿಕ ಪೇಟೆಗೆ ಸಾಮಾನು ಖರೀದಿಸಲು ತೆರಳಿದ್ದರು.


ಆ ಸಂದರ್ಭ ಅಗ್ನಿ ಅವಘಡ ಸಂಭವಿಸಿದ್ದು, ಮನೆಯ ಬಟ್ಟೆ ಬರೆ ಸಹಿತ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.


ಸ್ಥಳೀಯರು ಹಾಗೂ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...