DAKSHINA KANNADA
ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನಂತೆ 25 ಲಕ್ಷ ರೂ ಪರಿಹಾರ ನೀಡಿ-ಮಾಜಿ ಸಚಿವ ರೈ
Published
2 years agoon
By
Adminಮಂಗಳೂರು: ‘ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹೀಗೆ ಹಿಂಸೆಯನ್ನು ಪ್ರಚೋದಿಸಿಲ್ಲ. ಯುವಕನ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕು’ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಸುಳ್ಯದಲ್ಲಿ ಇತ್ತೀಚೆಗೆ ಮೃತಪಟ್ಟ ಮುಸ್ಲಿಂ ಯುವಕನ ಸಾವಿನ ಪ್ರಕರಣದ ಬಗ್ಗೆ ಮಾತನಾಡಿದ ಅವರು ‘ಅಮಾಯಕ ಯುವಕ ಗುಂಪು ಥಳಿತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದಿರೋದು ಒಬ್ಬ ಸಚಿವರ ಊರಲ್ಲೇ.
ಕನಿಷ್ಟ ಪಕ್ಷ ಅವರು ಆ ಮೃತನ ಕುಟುಂಬಕ್ಕೆ ಭೇಟಿ ಕೊಟ್ಟು ಕೂಡಾ ಮಾತನಾಡಿಲ್ಲ. ಮೊದಲೇ ಸರ್ಕಾರ ಹೊಲಸಾಗಿದೆ. ಇನ್ನು ಮತ್ತೆ ಕೂಡಾ ಹೊಲಸಾಗುತ್ತೆ. ಬಿಜೆಪಿಯವರ ರೀತಿ ಕಾಂಗ್ರೆಸ್ ನವರ ಮೇಲೆ ಎಫ್ ಐ ಆರ್ ದಾಖಲಾಗಿಲ್ಲ. ಅವನಿಗೂ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
ಇನ್ನು ಇದೇ ವೇಳೆ ಮಾಜಿ ಸಚಿವ ಈಶ್ವರಪ್ಪನಿಗೆ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್‌ಚಿಟ್ ನೀಡಿರುವುದರ ಬಗ್ಗೆ ಮಾತನಾಡಿ ‘ಸಾಯುವಾಗ ಯಾರೂ ಕೂಡಾ ಸುಳ್ಳು ಡೆತ್‌ನೋಟ್ ಬರೆದಿಟ್ಟು ಸಾಯುವುದಿಲ್ಲ. ಸಂತೋಷ್ ಪಾಟೀಲ ಹತ್ಯೆ ಪ್ರಕರಣದಲ್ಲಿ ನ್ಯಾಯ ಸಿಗಬಹುದು ಎಂದು ನಂಬಿಕೆಯಿಂದ ಕಾಯುತ್ತಿದ್ದ ಅವರ ಕುಟುಂಬದ ನೋವನ್ನು ಈ ಸರ್ಕಾರ ಇದೀಗ ಇನ್ನಷ್ಟು ಜಾಸ್ತಿ ಮಾಡಿದೆ.
ಈಶ್ವರಪ್ಪನಿಗೆ ಕ್ಲೀನ್‌ಚಿಟ್ ಕೊಟ್ಟಿರುವುದನ್ನು ನಾನು ಖಂಡಿಸುತ್ತೇನೆ. ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಸಾವಿಗೆ ನ್ಯಾಯ ಸಿಕ್ಕಿಲ್ಲ. ಈ ಪ್ರಕರಣವನ್ನು ಮುಂದುವರೆಸಬೇಕು ಎಂದು ಹೇಳಲು ನಾನು ಇಷ್ಟಪಡುತ್ತೇನೆ’ ಎಂದು ವಾಗ್ದಾಳಿ ನಡೆಸಿದರು.
ಹಾಗಾಗಿ ಇದು ಸತ್ಯಕ್ಕೆ ಸಂದ ಜಯ ಎನ್ನುವವರು ನಾಚಿಕೆ ಮಾನ ಮರ್ಯಾದೆ ಇಲ್ಲದವರು. ಇವತ್ತು ಇ.ಡಿ ತನಿಖೆ ಅಗಬೇಕಾಗಿರುವುದು ಈಶ್ವರಪ್ಪನ ಮನೆಯ ಮೇಲೆ.
ಅವನು ಪ್ರಚಂಡ ಭ್ರಷ್ಟಾಚಾರಿ. ಒಟ್ಟಾರೆ ಸಂತೋಷ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು ಎಂದು ನಾನು ಆಗ್ರಹಿಸುತ್ತೇನೆ’. ರಾಜಕೀಯ ಪ್ರಭಾವದಿಂದ ಈಶ್ವರಪ್ಪನಿಗೆ ಕ್ಲೀನ್ ಚಿಟ್ ಸಿಕ್ಕಿದೆ’ ಎಂದು ಕಿಡಿಕಾರಿದರು.
ಈಶ್ವರಪ್ಪರನ್ನು ತನಿಖೆಯಿಂದ ಹೊರಗಿಡಲಾಗಿತ್ತು. ರಾಜಕೀಯ ಪ್ರಭಾವದಿಂದ ಕ್ಲೀನ್ ಚಿಟ್ ಸಿಕ್ಕಿದೆ. ಇದರ ಬಗ್ಗೆ ಮೊದಲೇ ಸಚಿವರು ಪರೋಕ್ಷವಾಗಿ ಹೇಳಿದ್ದರು.
ಈಗ ಅಧಿಕೃತ ಆಗಿದೆ ಅಷ್ಟೆ. ಜಾರ್ಚ್ ಪ್ರಕರಣಕ್ಕೂ ಇದಕ್ಕೂ ಹೋಲಿಕೆ ಮಾಡಬಾರದು. ಜಾರ್ಜ್ ಅವರಿಗೆ ನರೇಂದ್ರ ಮೋದಿ ಸರಕಾರದ ಸಿಬಿಐ ಕ್ಲೀನ್ ಚಿಟ್ ನೀಡಿತ್ತು.
ಈಶ್ವರಪ್ಪ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ