Connect with us

DAKSHINA KANNADA

ದಕ್ಷಿಣ ಕನ್ನಡಕ್ಕೆ ತುಂತುರು ಮಳೆಯ ಸಿಂಚನ -ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ

Published

on

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇಂದು ಮುಂಜಾನೆಯಿಂದಲೇ ಎಲ್ಲೆಡೆ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸದ್ದು ಕೇಳಿ ಬರ್ತಾ ಇದೆ.

ಇನ್ನು ಹನಿ ಹನಿ ಮಳೆಯಾಗುತ್ತಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಕಡಲ ತೀರಕ್ಕೆ ತೆರಳದಂತೆ ಈಗಾಗಲೇ ಮುನ್ಸೂಚನೆ ನೀಡಲಾಗಿದೆ.

ಒಂದು ವಾರದ ಹಿಂದೆಯೇ ಭಾರೀ ಮಳೆ ಆಗಮನವಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿತ್ತಾದರೂ ಮಳೆ ಅಷ್ಟೊಂದು ಗತಿಯಲ್ಲಿ ಬಂದಿರಲಿಲ್ಲ.

ಇನ್ನೊಂದೆಡೆ ಮಂಗಳೂರಿಗೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲೂ ನೀರಿನ ಇಳಿಮುಖವಾಗಿದೆ. ಮಂಗಳೂರಿಗೆ ಜಲಕ್ಷಾಮದ ಭೀತಿಯೂ ಇದ್ದು, ಜನತೆ ಮಳೆ ಆಗಮನಕ್ಕೆ ಕಾಯುತ್ತಿದ್ದಾರೆ.

ಭಾರೀ ಮಳೆ ಮುನ್ಸೂಚನೆ ನಡುವೆ ನಾಳೆ ಶಾಲಾರಂಭಗೊಳ್ಳಲಿದೆ. ಇನ್ನು ಪ್ರತೀ ವರ್ಷ ಕಡಲ್ಕೊರೆತ ತೀವ್ರವಾಗುವ ಉಳ್ಳಾಲದ ಸೀ ಗ್ರೌಂಡ್‌, ಸೋಮೇಶ್ವರ, ಉಚ್ಚಿಲ ಮತ್ತು ಬೈಕಂಪಾಡಿ ಪ್ರದೇಶದಲ್ಲಿ ಮಂಗಳೂರು ಶಾಸಕ, ಸ್ಪೀಕರ್‌ ಯು ಟಿ ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರೊಂದಿಗೆ ತೆರಳಿ ವೀಕ್ಷಣೆ ನಡೆಸಿದ್ದಾರೆ.

ಮುಂಬರುವ ಮಳೆಗಾಲದ ಅನಾಹುತಗಳನ್ನು ತಪ್ಪಿಸಲು ಅವರು ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನವನ್ನೂ ನೀಡಿದ್ದಾರೆ.

ಇನ್ನು ಪ್ರತೀ ವರ್ಷ ಕೃತಕ ನೆರೆ ಬಾಧಿಸುವ ಪಂಪ್ವೆಲ್‌ ಮತ್ತು ಕೂಳೂರು, ಕೊಟ್ಟಾರದ ಬಳಿ ರಾಜಕಾಲುವೆಗಳನ್ನು ಸ್ವಛ್ಚಗೊಳಿಸಲಾಗಿದ್ದು ನೆರೆನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending