Connect with us

    ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿರುವಾಗ ಹಳಿ ತಪ್ಪಿದ ಶ್ರಮಿಕ್ ರೈಲು

    Published

    on

    ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿರುವಾಗ ಹಳಿ ತಪ್ಪಿದ ಶ್ರಮಿಕ್ ರೈಲು

    ಮಂಗಳೂರು: ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಶ್ರಮಿಕ್ ರೈಲಿನ ಎಂಜಿನ್ ಹಳಿ ತಪ್ಪಿದ ಘಟನೆ ಮಂಗಳೂರಿನ ಪಡೀಲ್ ಬಳಿ ರಾತ್ರಿ (ಮೇ 19) ಸುಮಾರು 2 ಗಂಟೆ ಸುಮಾರಿಗೆ ನಡೆದಿದೆ.

    ಕೇರಳದ ತ್ರಿಶೂರ್ ನಿಂದ ಜೈಪುರ್ ಗೆ ತೆರಳುವ ಶ್ರಮಿಕ್ ಸ್ಪೆಷಲ್ ಎಕ್ಸಪ್ರೆಸ್ ಮಂಗಳೂರಿನ ಪಡೀಲ್ ಸಮೀಪ ರಾತ್ರಿ 2ರ ಸಂದರ್ಭ ಹಳಿ ತಪ್ಪಿದೆ.

    ಈ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ನಂತರ ಮುಂಜಾನೆ 4ರ ವೇಳೆಗೆ ಕಾರ್ಮಿಕರ ಪ್ರಯಾಣಕ್ಕೆ ಬದಲಿ ಎಂಜಿನ್ ವ್ಯವಸ್ಥೆ ಮಾಡಿ ರೈಲು ಪ್ರಯಾಣ ಮುಂದುವರೆಸಲಾಗಿದೆ.

    ಸದ್ಯಕ್ಕೆ ಹಳಿ ತಪ್ಪಿರುವ ರೈಲ್ವೆ ಎಂಜಿನ್ ತೆರವು ಕಾರ್ಯ ಪ್ರಗತಿಯಲ್ಲಿದ್ದು, ಬಹುತೇಕ ಪೂರ್ಣಗೊಂಡಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ

    Published

    on

    ಉಡುಪಿ: ಇಲ್ಲಿನ ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರ ಸಂಪೂರ್ಣ ಕತ್ತಲನ್ನು ಆವರಿಸಿದೆ. ಕಳೆದ ಒಂದು ವರ್ಷದಿಂದ ವಿದ್ಯುತ್ ಬಿಲ್ ಬಾಕಿ ಉಳಿಸಿರುವ ಕಾರಣ ಪ್ರವಾಸಿ ಮಂದಿರಕ್ಕೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.  ಬಿಲ್ ಪಾವತಿ ಮಾಡುವಂತೆ ಹಲವು ಬಾರಿ ನೋಟೀಸ್ ನೀಡಿದರೂ ಯಾವುದೇ ಸ್ಪಂದನೆ ದೊರಕದ ಕಾರಣ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ಒಂದು ವರ್ಷದಿಂದ 3 ಲಕ್ಷ ರೂಪಾಯಿ ಗೂ ಅಧಿಕ ಮೊತ್ತವನ್ನು ಬಾಕಿ ಉಳಿಸಿಕೊಂಡಿದ್ದರು ಎನ್ನಲಾಗಿದೆ. ಇನ್ನು ಬ್ರಹ್ಮಗಿರಿಯ ಈ ಪ್ರವಾಸಿ ಮಂದಿರಲ್ಲಿ ರಾಜಕಾರಣಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಳಿದುಕೊಳ್ಳುತ್ತಿದ್ದರು. ಉಸ್ತುವಾರಿ ಸಚಿವರು ಬಂದಾಗಲೂ ಇದೇ ಪ್ರವಾಸಿ ಮಂದಿರದಲ್ಲಿ ಉಳಿದುಕೊಂಡಿದ್ದಾರೆ. ಹಲವು ಪತ್ರಿಕಾಗೋಷ್ಟಿಗಳು ಕೂಡಾ ಇದೆ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಆದರೆ ಒಂದು ವರ್ಷದಿಂದ ವಿದ್ಯುತ್ ಬಿಲ್‌ನ್ನು ಕಟ್ಟದೇ ಇರುವುದು ಮಾತ್ರ ವಿಪರ್ಯಾಸ.

    ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ

    ಸರಕಾರದ ಆರ್ಥಿಕ ದಿವಾಳಿತನಕ್ಕೆ ಇದೊಂದು ನಿದರ್ಶನ-ಯಶಪಾಲ್‌
    ಯಶ್‌ಪಾಲ್ ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಹಿನ್ನೆಲೆ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಅಧಿಕಾರಿಗಳು ಕಡಿತಗೊಳಿಸಿದ್ದಾರೆ. ಪಡುಬಿದ್ರಿ ಗ್ರಾ. ಪಂ.ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್ ಕಡಿತಗೊಳಿಸಲು ಕೂಡ ಮೆಸ್ಕಾಂ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದಲ್ಲಿ ಹಣವಿಲ್ಲ. ರಾಜ್ಯ ಸರಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ಸ್ಪಷ್ಟ ನಿದರ್ಶನ ಬೇಕಿಲ್ಲ ಎಂದು ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಎಕ್ಸ್ ಮೂಲಕ ತಿಳಿಸಿದ್ದಾರೆ.

    ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಪ್ರತಿಕ್ರಿಯೆ ನೀಡಿದ್ದು, ಸರಕಾರದ ಹಣ ಬಿಡುಗಡೆಯಾಗುವಾಗ ವಿಳಂಬವಾದ ಕಾರಣ ಬಿಲ್ ಬಾಕಿಯಾಗಿರಬಹುದು. ಸಂಪರ್ಕ ಕಡಿತಗೊಳಿಸಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸರಕಾರ ಹಣ ಮಂಜೂರುಗೊಳಿಸಿದ ಕೂಡಲೇ ಪಾವತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ

    Published

    on

    ಉಡುಪಿ :  ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅ*ಗ್ನಿ ಅವಘ*ಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

    ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

    ತಕ್ಷಣ  ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅ*ಗ್ನಿಶಾಮಕ ದಳದ ತಂಡ ಬೆಂ*ಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂ*ಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

     

    Continue Reading

    LATEST NEWS

    ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ

    Published

    on

    ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.


    ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ‌. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್​​ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
    ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
    ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.

    Continue Reading

    LATEST NEWS

    Trending