ವಿಶೇಷ ರೈಲು ಮೂಲಕ ಕಾರ್ಮಿಕರನ್ನು ಸ್ವ ಊರುಗಳಿಗೆ ಕಳುಹಿಸಿದ ದ.ಕ. ಜಿಲ್ಲಾಡಳಿತ..!
ವಿಶೇಷ ರೈಲು ಮೂಲಕ ಕಾರ್ಮಿಕರನ್ನು ಸ್ವ ಊರುಗಳಿಗೆ ಕಳುಹಿಸಿದ ದ.ಕ. ಜಿಲ್ಲಾಡಳಿತ..!
ಮಂಗಳೂರು : ನಿನ್ನೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ವಲಸೆ ಕಾರ್ಮಿಕರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ದಕ್ಷಿಣಕನ್ನಡ ಜಿಲ್ಲಾಡಳಿತ ಇಂದು ಏಕಾಏಕಿ ವಿಶೇಷ ರೈಲು ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಊರಿಗೆ ಕಳುಹಿಸುವ ಕೊಡುವ ವ್ಯವಸ್ಥೆ ಮಾಡಿತ್ತು.
ಆದರೆ ಈ ನಡುವೆ ಪ್ರತಿಯೊಬ್ಬ ವಲಸೆ ಕಾರ್ಮಿಕರಿಂದಲೂ ರೈಲ್ವೆ ಪ್ರಯಾಣದ ವೆಚ್ಚ 1 ಸಾವಿರ ರೂಪಾಯಿ ಹಣವನ್ನು ಪಡೆದಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಕೇಂದ್ರ ಸರಕಾರ ಈಗಾಗಲೇ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ಸಂಪೂರ್ಣ ಉಚಿತ ಎಂದು ಘೋಷಣೆ ಮಾಡಿದೆ.
ಅದರೆ ನಂತರವೂ ದಕ್ಷಿಣಕನ್ನಡ ಜಿಲ್ಲೆ ಕಾರ್ಮಿಕರಿಂದ ರೈಲ್ವೆ ಟಿಕೆಟ್ ಗೆ ಹಣ ಪಡೆದಿರುವುದು ಕೆಲವೊಂದು ಸಂಶಯಕ್ಕೆ ಎಡೆಮಾಡಿದೆ.
ಸರ್ಕಾರ ರೈಲಿನ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಹೊರ ರಾಜ್ಯದ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರು.
ನಿನ್ನೆ ವದಂತಿ ನಂಬಿ ಮಂಗಳೂರು ರೈಲು ನಿಲ್ದಾಣಕ್ಕೆ ಸಾವಿರಾರು ವಲಸೆ ಕಾರ್ಮಿಕರು ಆಗಮಿಸಿದ್ದರು. ಅವರನ್ನು ಸಮಾಧಾನಪಡಿಸಿ ಮನೆಗೆ ಕಳುಹಿಸಲಾಗಿತ್ತು.
ಈ ಹಿನ್ನಲೆ ಇಂದು ಮಂಗಳೂರಿನಿಂದ ಜಾರ್ಖಂಡ್ಗೆ ಹೊರಟ ಕಾರ್ಮಿಕರು ಇಂದು ಸಂಜೆ 7 ಗಂಟೆಗೆ ಮೊದಲ ರೈಲು ಜಾರ್ಖಂಡ್ಗೆ ಪ್ರಯಾಣ ಬೆಳೆಸಿದ್ದು, 1240 ವಲಸೆ ಕಾರ್ಮಿಕರು ಊರಿಗೆ ಪ್ರಯಾಣ ಬೆಳೆಸಿದರು.
ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರಿಗೆ ರೈಲು ವ್ಯವಸ್ಥೆ ಮಾಡುವಂತೆ ಪತ್ರ ಬರೆದಿದ್ದರು.
ಇಂದು ಜಾರ್ಖಂಡ್ಗೆ ಮೊದಲ ರೈಲು ವ್ಯವಸ್ಥೆ ಮಾಡಲಾಗಿದ್ದು, ಇದರಲ್ಲಿ ಸೇವಾ ಸಿಂಧುವಿನಲ್ಲಿ ನೋಂದಾಯಿಸಿದ ವಲಸೆ ಕಾರ್ಮಿಕರನ್ನು ಮಾತ್ರ ಜಿಲ್ಲಾಡಳಿತ ಕಳುಹಿಸಿದೆ.
ವಲಸೆ ಕಾರ್ಮಿಕರನ್ನು 25 ಕೆಎಸ್ಆರ್ಟಿಸಿ ಬಸ್ ಮೂಲಕ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಕರೆದುಕೊಂಡು ಬಂದು ರೈಲಿಗೆ ಕಳುಹಿಸಲಾಗಿದೆ.ಅದಕ್ಕೂ ಮೊದಲು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಇವರ ಆರೋಗ್ಯ ತಪಾಸಣೆ ಮಾಡಲಾಗಿತ್ತು.
ಆದರೆ ಪ್ರತಿಯೊಂದು ವಲಸೆ ಕಾರ್ಮಿಕರಿಂದ ಜಾರ್ಖಾಂಡ್ ನ ಟಿಕೆಟ್ ವೆಚ್ಚ 960 ರುಪಾಯಿ ಆಗಿದ್ದು ಬರಮಾಡಿಕೊಂಡ ಬಸ್ ದರ 40 ರುಪಾಯಿ ಸೇರಿಸಿ ಒಟ್ಟು ವೆಚ್ಚ 1,000 ವೆಚ್ಚವನ್ನು ಜಿಲ್ಲಾಡಳಿತ ಪಡೆದುಕೊಂಡಿರುವ ಈಗ ವಿವಾದಕ್ಕೇ ಎಡೆ ಮಾಡಿದೆ.
ಕೇಂದ್ರ ಸರಕಾರದ ಸ್ಪಷ್ಟ ಆದೇಶವಿದ್ದರೂ ಜಿಲ್ಲಾಡಳಿತ ಯಾಕೆ ವಲಸೆ ಕಾರ್ಮಿಕರಿಂದ ಹಣ ಪಡೆದಿದೆ ಎನ್ನುವುದನ್ನು ಜಿಲ್ಲಾಡಳಿತವೇ ಸ್ಪಷ್ಟಪಡಿಸಬೇಕಿದೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.