Sunday, May 16, 2021

ಆಕ್ಸಿಜನ್ ಕೊರತೆ ನೀಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಕೊಡುಗೆ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಎರಡನೇ ಸೋಂಕಿನ ಅಲೆ ತೀವ್ರಗೊಳ್ಳುತ್ತಿರುವಂತೆಯೇ ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಯೂ ದುಪ್ಪಟ್ಟಾಗ ತೊಡಗಿದೆ. ಈ ನಡುವೆ ರೋಗಿಗಳಿಗೆ ಉಸಿರಾಟಕ್ಕೆ ಪೂರಕವಾಗಬಲ್ಲ ಆಕ್ಸಿಜನ್‌ ಕೊರತೆಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆಯಿಂದ ಜಿಲ್ಲಾಡಳಿತಕ್ಕೆ ಆಕ್ಸಿಜನ್‌ ಸರಬರಾಜು ಕೂಡಾ ಹೆಚ್ಚಳಗೊಂಡಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಿಗೆ ಉಚಿತ ಆಕ್ಸಿಜನ್ ಒದಗಿಸುವ ಟ್ಯಾಂಕರ್ ನ್ನು ಸಂಸದ‌ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

ಶಾಸಕ ವೇದವ್ಯಾಸ ಕಾಮತ್‌, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ,  ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...