Tuesday, February 7, 2023

ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶ್ರೀ ರಾಮ ಸೇನಾ ವರಿಷ್ಟ ಪ್ರಮೋದ್ ಮುತಾಲಿಕ್ ಘೋಷಣೆ..!

ಉಡುಪಿ: ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದಾರೆ.


‘ನಾನು ಬಿಜೆಪಿ, ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳ ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟ.

ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ. ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು’ ಎಂದು ಅವರು ಕರೆ ನೀಡಿದ್ದಾರೆ.

ಕಾರ್ಕಳದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡುತ್ತಿದ್ದೇನೆ.

ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂಗಳಿಗೆ ನೋವಾಗಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವದ ಪರ ಮತ್ತು ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದರು.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು ವಿಷಾಹಾರ ಸೇವನೆ ಪ್ರಕರಣ: ಅಸ್ವಸ್ಥ ವಿದ್ಯಾರ್ಥಿನಿಯರು ಚೇತರಿಕೆ..!

ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ಶಕ್ತಿನಗರದ ಹಾಸ್ಟೆಲ್‌ನಲ್ಲಿ ನಿನ್ನೆ ನಡೆದ ವಿಷಾಹಾರ ಸೇವನೆ ಪ್ರಕರಣದ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.ಇದೀಗ ಬಹುತೇಕ ಎಲ್ಲರೂ ಚೇತರಿಸಿಕೊಂಡಿದ್ದು, ಕೆಲವರನ್ನು ಇಂದು ಆಸ್ಪತ್ರೆಯಿಂದ...

ಪಾಂಗಾಳದ ಯುವಕ ಶರತ್‌ ಶೆಟ್ಟಿ ಕೊಲೆ ಪ್ರಕರಣ :ಪೊಲೀಸರಿಗೆ ಸಿಕ್ಕಿದೆ ಮಹತ್ವದ ಸಿಸಿಟಿವಿ ಫೂಟೇಜ್‌ ಸುಳಿವು..!

ರವಿವಾರ ಸಂಜೆ ಊರಿನ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದ ಶರತ್‌ ಶೆಟ್ಟಿ ಅವರನ್ನು ಮಾತುಕತೆಗೆಂದು ಕರೆದು ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ.ಉಡುಪಿ : ರವಿವಾರ...

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅಧಿಕಾರ ಸ್ವೀಕಾರ..!

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಮಾಡಿದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ...