Connect with us

    DAKSHINA KANNADA

    ಮಂಗಳೂರು: ವೆಂಕಟರಮಣ ದೇವಳದಲ್ಲಿ ‘ಶ್ರೀ ರಾಮ ಪಟ್ಟಾಭಿಷೇಕ’

    Published

    on

    ಮಂಗಳೂರು: ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸುಂದರಕಾಂಡ ಹವನ ನಡೆಯುತ್ತಿದೆ.

    ಇದರ ಪ್ರಯುಕ್ತ ” ಶ್ರೀ ರಾಮ ಪಟ್ಟಾಭಿಷೇಕ ” ನಡೆಯಿತು. ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಕೋಲಾಟ , ಭರತನಾಟ್ಯ ಸೇವೆಗಳು ನಡೆದವು.
    ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಪಟ್ಟಾಭಿಷೇಕ ನೆರವೇರಿತು.


    ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು.

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ

    Published

    on

    ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending