ಶ್ರೀಮದ್ ಕೇಶವೇಂದ್ರ 350ನೇ ಪುಣ್ಯತಿಥಿ ಆರಾಧನಾ ಮಹೋತ್ಸವ-ಸಹಸ್ರ ಕುಂಭಾಭಿಷೇಕ
Published
5 years agoon
By
Adminಶ್ರೀಮದ್ ಕೇಶವೇಂದ್ರ 350ನೇ ಪುಣ್ಯತಿಥಿ ಆರಾಧನಾ ಮಹೋತ್ಸವ-ಸಹಸ್ರ ಕುಂಭಾಭಿಷೇಕ
ಕುಂದಾಪುರ: ಬಸ್ರೂರು ಶ್ರೀ ಕಾಶೀ ಮಠ ಸಂಸ್ಥಾನದ ದ್ವಿತೀಯ ಯತಿವರ್ಯರಾದ ಶ್ರೀಮದ್ ಕೇಶವೇಂದ್ರ ತೀರ್ಥ ಸ್ವಾಮೀಜಿಯವರ 350ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಬಸ್ರೂರು ಶ್ರೀ ಕಾಶೀಮಠದ, ಶ್ರೀ ವೆಂಕಟರಮಣ ದೇವರಿಗೆ ಹಾಗೂ ಶ್ರೀಮದ್ ಕೇಶವೇಂದ್ರ ತೀರ್ಥ ಹಾಗೂ ಶ್ರೀಮದ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ವೃಂದಾವನಗಳಿಗೆ, ತಂತ್ರ ಸಾರೋಕ್ತ ರೀತಿಯ ಸಹಸ್ರ ಕುಂಭಾಭಿಷೇಕ ಗುರುವಾರ (ಮಾರ್ಚ್ 12) ರಂದು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತದಿಂದ ನಡೆಯಿತು.
ಬಳಿಕ ಮಹಾ ವಿಷ್ಣುಯಾಗದ ಮಹಾ ಪೂರ್ಣಾಹುತಿ ನಡೆಯಿತು.
ಸಹಸ್ರ ಕುಂಭಾಭಿಷೇಕದ ನಂತರ ಗುರುವರ್ಯರು ಶ್ರೀ ದೇವರಲ್ಲಿ ಹಾಗೂ ಉಭಯ ವೃಂದಾವನದಲ್ಲಿ ಶಿಷ್ಯಕೋಟಿಯ ಅಭಿವೃದ್ಧಿಗೆ ಪ್ರಾರ್ಥಿಸಿದರು.
ನಂತರ ನೆರೆದ ಸರ್ವ ಸಮಾಜ ಬಾಂಧವರಿಗೆ ಪ್ರಸಾದ ವಿತರಣೆ ನಡೆಯಿತು.
ಮಧ್ಯಾಹ್ನ ಮಹಾಪೂಜೆಯ ನಂತರ ರಜತ ಪುಷ್ಪ ರಥ ಹಾಗೂ ರಜತ ಪಲ್ಲಕ್ಕಿ ಉತ್ಸವ ನಡೆಯಿತು.
ಸಂಸ್ಥಾನದ ಆರಾಧ್ಯ ದೇವರಾದ ವ್ಯಾಸ ರಘುಪತಿ ಹಾಗೂ ಶ್ರೀ ವೆಂಕಟರಮಣ ದೇವರಿಗೆ ಮಹಾ ಪ್ರಾರ್ಥನೆ ಸಲ್ಲಿಸುವ ಮೂಲಕ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು.
ನಂತರ ವೈದಿಕರಿಂದ ಮಂಡಲ ರಚನೆ, ಸಹಸ್ರ ಕಲಶಗಳ ಅಭಿಮಂತ್ರಣೆ ನಡೆಯಿತು.
ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮಕ್ಕೆ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಮುಂಬೈ ಹಾಗೂ ಕೇರಳ ಸೇರಿದಂತೆ ವಿವಿಧ ಬಾಗಗಳಿಂದ ಸಹಸ್ರಾರು ಸಮಾಜ ಬಾಂಧವರು ಭಾಗವಹಿಸಿದ್ದರು.
You may like
LATEST NEWS
ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್
Published
6 hours agoon
09/01/2025By
NEWS DESK4ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
LATEST NEWS
ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!
Published
6 hours agoon
09/01/2025By
NEWS DESK2ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
LATEST NEWS
ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Published
6 hours agoon
09/01/2025By
NEWS DESK4ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.