Connect with us

    DAKSHINA KANNADA

    ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಶ್ರೀಮುರಳಿ

    Published

    on

    ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀ ಮರಳಿ ಭೇಟಿ ನೀಡಿದರು. ಕ್ಷೇತ್ರದ ವತಿಯಿಂದ ಮುರಳಿ ಅವರನ್ನು ವೆಂಕಟರಮಣ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ನಂತರ ಮಾತನಾಡಿದ ಶ್ರೀ ಮುರಳಿ ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ, ಮುಂದಿನ ತಿಂಗಳು ನಾನು ಬಾಲ್ಯದಲ್ಲಿ ಕಟೀಲಿಗೆ ಭೇಟಿ ನೀಡಿದ್ದೇನೆ ಇದೀಗ ಮತ್ತೆ ಅವಕಾಶ ಸಿಕ್ಕಿದೆ, ಭಗೀರ ಚಿತ್ರ ಬಿಡುಗಡೆಯಾಗುತ್ತದೆ, ಕರಾವಳಿಯ ನಟರು ಕನ್ನಡ ಚಿತ್ರರಂಗ ದಲ್ಲಿ ಮಿನುಗುತ್ತಿದ್ದಾರೆ. ಈ ಬಗ್ಗೆ ಅತೀವ ಸಂತಸವಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವೂ ಮುಂದುವರಿಯಬೇಕು ಎಂದರು.

    ಕಟೀಲು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ದೇವಾಲಯ ಪಟ್ಟಣವಾಗಿದೆ. ಇದು ಮಂಗಳೂರಿನಿಂದ ಸುಮಾರು 26 ಕಿ.ಮೀ ದೂರದಲ್ಲಿದ್ದು ಹಿಂದೂ ಧರ್ಮದ ಪವಿತ್ರ ದೇವಾಲಯಗಳಲ್ಲೊಂದಾಗಿದೆ. ಇಲ್ಲಿಯ ಪ್ರಮುಖ ಆಕರ್ಷಣೆ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯವಾಗಿದೆ. ಪವಿತ್ರವಾದ ನಂದಿನಿ ನದಿಯ ಮಧ್ಯದಲ್ಲಿ, ಐತಿಹಾಸಿಕ ದೃಶ್ಯಾವಳಿಗಳ ಒಳಗೊಂಡ ಹಚ್ಚ ಹಸಿರಿನ ವನಸಿರಿಯ ಮಧ್ಯೆ ಇರುವ ಪವಿತ್ರ ದೇವಾಲಯವಾಗಿದೆ.


    ಪವಿತ್ರ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ಆಲಯದಲ್ಲಿ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನವರಾತ್ರಿ ಉತ್ಸವದ ಭಾಗವಾಗಿ ‘ಲಲಿತ ಪಂಚಮಿ’, ‘ಮಹಾನವಮಿ’,’ವಿಜಯದಶಮಿ’ ಹಾಗೂ ‘ಮಧ್ವ ಜಯಂತಿ’ಯನ್ನು ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ  ಅಭಿಲಾಷ್ ಶೆಟ್ಟಿ ಕಟೀಲು, ವಿಕೇಶ್ ಕೋಟ್ಯಾನ್ ಜಲ್ಲಿಗುಡ್ಡೆ, ಕಾರ್ತಿಕ್ ರಾವ್, ಮತ್ತಿತರರು ಭಾಗಿಯಾಗಿದ್ದರು.

    DAKSHINA KANNADA

    ಅಕ್ರಮ ಹಾಲುಮಡ್ಡಿ ಸಾಗಾಟ: ನಾಲ್ವರು ಆರೋಪಿಗಳ ಬಂಧನ

    Published

    on

    ಪುತ್ತೂರು : ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ಸಾಗಿಸುತ್ತಿದ್ದ ಪ್ರಕರಣವನ್ನು ಪುತ್ತೂರು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು ಬಳಸಿದ ಸಲಕರಣೆ ಹಾಗೂ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ವಿಟ್ಲ ಸಮೀಪದ ಕೆದಿಲ ನಿವಾಸಿಗಳಾದ ಅಲಿ ಹೈದರ್‌, ಉಮ್ಮರ್‌ ಫಾರೂಕ್‌, ಮಹಮ್ಮದ್‌ ಹಸೈನಾರ್‌ ಮತ್ತು ಉಮ್ಮರ್‌ ಫಾರೂಕ್‌ ಬಂಧಿತ ಆರೋಪಿಗಳು.

    ಇದನ್ನೂ ಓದಿ : ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಶ್ರೀಮುರಳಿ

    ವಿಟ್ಲ ಬಳಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಆರೋಪಿಗಳು ಹಾಲು ಮಡ್ಡಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಾಳಿ ಕಾರ್ಯಾಚರಣೆ ನಡೆಸಿದರು. ವಲಯ ಅರಣ್ಯಾಧಿಕಾರಿ ಕಿರಣ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಪ್ರಕಾಶ್‌ ಬಿ.ಟಿ., ಗಿರೀಶ್‌ ಎಚ್‌.ಪಿ., ಗಸ್ತು ಅರಣ್ಯಪಾಲಕ ಸತೀಶ್‌ ಡಿ’ಸೋಜಾ, ಚಾಲಕರಾದ ರಾಜೇಶ್‌, ತೇಜ ಪ್ರಕಾಶ್‌ ಮತ್ತು ಸಿಬಂದಿ ಭಾಗವಹಿಸಿದ್ದರು.

     

    Continue Reading

    DAKSHINA KANNADA

    ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ ಡ್ರ*ಗ್‌ ಮಾಫಿಯಾ ಕಿಂಗ್‌ ಪಿನ್ ಅರೆಸ್ಟ್

    Published

    on

    ಮಂಗಳೂರು : ಡ್ರ*ಗ್ಸ್ ಜಾಲದ ಬೆನ್ನು ಹತ್ತಿ ಬೇಟೆಯಾಡಿದ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಆರು ಕೋಟಿ ರೂ. ಮೌಲ್ಯದ ಡ್ರ*ಗ್ಸ್ ವಶಪಡಿಸಿಕೊಂಡಿದ್ದಾರೆ. ಡ್ರ*ಗ್‌ ಫ್ರೀ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಕೈಗೊಂಡ ಕಟ್ಟು ನಿಟ್ಟಿನ ಕ್ರಮಕ್ಕೆ ಇದೊಂದು ದೊಡ್ಡ ಗೆಲುವಾಗಿದೆ. ಈ ಕಾರ್ಯಾಚರಣೆಯ ವಿಚಾರವಾಗಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

    ಸೆಪ್ಟಂಬರ್ 29 ರಂದು ಪಂಪ್‌ವೆಲ್ ಬಳಿಯ ಲಾಡ್ಜ್‌ ಒಂದರಲ್ಲಿ ಹೈದರ್ ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸರು ಡ್ರಗ್ ಸಮೇತ ಬಂಧಿಸಿದ್ದರು. ಬಳಿಕ ಈ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದ್ದು, ಸಿಸಿಬಿ ಪೊಲೀಸರು ಆರೋಪಿಗೆ ಡ್ರ*ಗ್ ಪೂರೈಕೆ ಮಾಡುವ ಜಾಲದ ತನಿಖೆ ಆರಂಭಿಸಿದ್ದರು.

    ಆರೋಪಿಯಿಂದ ಹಲವು ಮಾಹಿತಿ ಪಡೆದುಕೊಂಡ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿದ್ದ ನೈಜೇರಿಯಾ ಮೂಲದ ಪೀಟರ್ ಅಕೆಡಿ ಬೆಲನೋವು ಎಂಬಾತನ ಮನೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಒಟ್ಟು 6 ಕೋಟಿ ಮೌಲ್ಯದ 6 ಕೆಜಿ 310 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.

    ಇದನ್ನೂ ಓದಿ :  ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ; 5 ವರ್ಷದ ಮಗು ದಾರುಣ ಸಾ*ವು

    ಈತ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಿಗೆ ಈ ಮಾ*ದಕ ವಸ್ತು ಪೂರೈಕೆ ಮಾಡುತ್ತಿದ್ದ ಎಂಬ ವಿಚಾರ ಕೂಡ ತಿಳಿದು ಬಂದಿದೆ. ಈತನ ಮೇಲೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮಾ*ದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಈ ಹಿಂದೆಯೇ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಮುಮ್ತಾಜ್ ಅಲಿ ಸಾ*ವಿನ ಹಿಂದೆ ಹನಿಟ್ರ್ಯಾಪ್ ಕೈವಾಡ! ಏನಂದ್ರು ಕಮಿಷನರ್?

    Published

    on

    ಮಂಗಳೂರು : ಮಂಗಳೂರು ಉತ್ತರದ ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಜ್ ಆಲಿ ಆತ್ಮಹ*ತ್ಯೆ ಪ್ರಕರಣದಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಮ್ತಾಜ್ ಅಲಿ ಅವರನ್ನು ಕೆಲವೊಂದು ವ್ಯಕ್ತಿಗಳು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದು, ಈಗಾಗಲೇ 50 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದರು. ಈ ವಿಚಾರವನ್ನು ವಾಯ್ಸ್‌ ಮೆಸೇಜ್ ಮೂಲಕ ತಮ್ಮ ಕುಟುಂಬ ಸದಸ್ಯರಿಗೆ ಕಳುಹಿಸಿದ್ದ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದರು.

    ಇದೀಗ ಅವರ ಮೃತ ದೇಹ ಪತ್ತೆಯಾಗಿದ್ದು, ಅವರ ಆತ್ಮಹತ್ಯೆಗೆ ಬ್ಲ್ಯಾಕ್‌ ಮೇಲ್‌ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮುಮ್ತಾಜ್ ಆಲಿ ಅವರ ವಾಯ್ಸ್ ಮೆಸೇಜ್ ಆಧಾರದಲ್ಲಿ ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ : ನವಜಾತ ಶಿಶುವಿನ ಬಾಯಿಗೆ ಮೆಣಸಿನ ಪುಡಿ ಹಾಕಿದ ಪಾಪಿ ತಾಯಿ

    ರೆಹಮತ್‌ ಎಂಬಾಕೆ ಮುಮ್ತಾಜ್‌ ಆಲಿ ಅವರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿದ್ದು, ಅಬ್ದುಲ್ ಸತ್ತಾರ್, ಶಾಫೀ, ಮುಸ್ತಾಫ, ಶೋಯಿಬ್ ಹಾಗೂ ಸಿರಾಜ್‌ ಎಂಬವರು ಮುಮ್ತಾಜ್ ಆಲಿ ಅವರನ್ನು ಹಣಕ್ಕಾಗಿ ಪೀಡಿಸಿದ್ದಾರೆ. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಮುಮ್ತಾಜ್ ಅಲಿ ಅವರು ಮರ್ಯಾದೆಗೆ ಅಂಜಿ ಈ ಆತ್ಮಹ*ತ್ಯೆ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಇಲಾಖೆ ಹೆಚ್ಚಿನ ತನಿಖೆ ನಡೆಸಲಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

     

    Continue Reading

    LATEST NEWS

    Trending