LATEST NEWS
ಭ್ರಷ್ಟಾಚಾರದ ಆರೋಪ: ಶೃಂಗೇರಿ ತಹಶೀಲ್ದಾರ್ ಅರೆಸ್ಟ್- ಕಾರು ಚಾಲಕ ಸೂಸೈಡ್
Published
3 years agoon
By
Adminಚಿಕ್ಕಮಗಳೂರು: ಭ್ರಷ್ಟಾಚಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅಂಬುಜಾ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಆತ್ಮಹತ್ಯೆಗೆ ಶರಣಾದ ಚಾಲಕನನ್ನ ವಿಜೇತ್(26) ಎಂದು ಗುರುತಿಸಲಾಗಿದೆ.
ಶೃಂಗೇರಿ ತಾಲೂಕಿನ ಹೆಗ್ತೂರು ಮೂಲದ ವಿಜೇತ್ ತಮ್ಮ ಮನೆಯ ಸಮೀಪದ ಅಡಿಕೆ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈತ ಅವಿವಾಹಿತನಾಗಿದ್ದು, ಇತ್ತೀಚೆಗಷ್ಟೆ ಆತನ ತಂಗಿ ಮದುವೆ ನಿಶ್ಚಯವಾಗಿತ್ತು ಎಂದು ಮೂಲಗಳು ತಿಳಿಸಿವೆ.
ಕಳೆದ 20 ದಿನಗಳ ಹಿಂದಷ್ಟೆ ಶೃಂಗೇರಿ ತಹಶೀಲ್ದಾರ್ ಅಂಬುಜಾ ಕೂಡ ಭ್ರಷ್ಟಾಚಾರದಡಿ ಬಂಧನಕ್ಕೊಳಗಾಗಿದ್ದರು.
ಇದೇ ಜ.6ರಂದು ಹಕ್ಕುಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಂಬುಜಾ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ ಎಸಿಬಿ ಬಲೆಗೆ ಬಿದ್ದಿದ್ದರು.
ಹಕ್ಕುಪತ್ರ ನೀಡಲು ಶೃಂಗೇರಿಯ ಪ್ರವಾಸಿ ಮಂದಿರದಲ್ಲಿ 25 ಸಾವಿರ ಲಂಚ ಪಡೆದುಕೊಳ್ಳುವಾಗ ಗ್ರಾಮ ಲೆಕ್ಕಾಧಿಕಾರಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದಿದ್ದರು.
ಪ್ರಕರಣ ಸಂಬಂಧ ಅಂಬುಜಾ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪರನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಇದಾದ ಸುಮಾರು 25 ದಿನಗಳ ಬಳಿಕ ತಹಶೀಲ್ದಾರ್ ಡ್ರೈವರ್ ವಿಜೇತ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದು,
ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿಜೇತ್ ಸಾವಿಗೆ ಶೃಂಗೇರಿ ತಹಶೀಲ್ದಾರ್ ಕಚೇರಿಯಲ್ಲಿನ ಬ್ರೋಕರ್ ಗಳ ಹಾವಳಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಳೆದೊಂದು ತಿಂಗಳಿಂದ ಶೃಂಗೇರಿ ತಾಲೂಕು ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಬೆಳಕಿಗೆ ಬಂದಿತ್ತು. ತಹಶೀಲ್ದಾರ್ ಕಚೇರಿಯಲ್ಲಿ ಬ್ರೋಕರ್ ಹಾವಳಿಯೂ ಮಿತಿಮೀರಿತ್ತು.
ತಹಶೀಲ್ದಾರ್ ಕಚೇರಿಯಲ್ಲಿನ ಬ್ರೋಕರ್ ಗಳ ಹಾವಳಿಯಿಂದಲೇ ವಿಜೇತ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದು, ಈ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ವಿಜೇತ್ ಸಾವಿಗೆ ತಹಶೀಲ್ದಾರ್ ಅಂಬುಜಾ ಹಾಗೂ ಹಿರಿಯ ಅಧಿಕಾರಿಗಳೇ ನೇರಹೊಣೆ. ಹಾಗಾಗಿ ಪ್ರಕರಣದ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿ ಸ್ಥಳೀಯರು ರಾತ್ರೋರಾತ್ರಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಮಾಯಕನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
DAKSHINA KANNADA
ಮಹಾ ಕುಂಭಮೇಳದಲ್ಲಿ ಯು.ಟಿ. ಖಾದರ್; ನಾಗಾಸಾಧುಗಳು, ಅಘೋರಿಗಳ ಭೇಟಿ
Published
7 minutes agoon
26/01/2025By
NEWS DESK3ಮಂಗಳೂರು/ಪ್ರಯಾಗ್ ರಾಜ್ : ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಕರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ.
ಅವರು ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು.
ಉತ್ತರಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ ಕುಂಭಮೇಳದಲ್ಲಿ ಪಾಲ್ಗೊಂಡ ಖಾದರ್, ನಾಗಾಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅವರು ಅಲಹಾಬಾದ್‌ನಲ್ಲಿ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ ದರ್ಗಾ ಶರೀಪ್ಗೂ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ನಾನು ಮತ್ತು ಮಿತ್ರರು ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದೇವೆ. ತುಂಬಾ ಖುಷಿಯಾಗಿದೆ. ಉತ್ತಮ ಅನುಭವ ಪಡೆದುಕೊಂಡೆ. ದೇಶದ ವಿವಿಧ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಲು ವಿಶೇಷ ಅವಕಾಶ ಲಭಿಸಿತು. ಇದು ವಿಶ್ವಾಸಭರಿತ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಖಾದರ್ ಹೇಳಿದ್ದಾರೆ.
LATEST NEWS
ಕುಂಭಮೇಳದ ಸುಂದರಿ ಮೊನಾಲಿಸಾಳ ಆರೋಗ್ಯ ಸ್ಥಿತಿ ಗಂಭೀರ !!
Published
8 minutes agoon
26/01/2025By
NEWS DESK2ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಕೋಟ್ಯಂತರ ಮಂದಿಯ ನಡುವೆ, ರುದ್ರಾಕ್ಷಿ ಸರ ಮಾರಾಟ ಮಾಡುತ್ತಿದ್ದ 16 ವರ್ಷದ ಹುಡುಗಿ ಮೊನಾಲಿಸಾ ಎಲ್ಲರನ್ನು ತನ್ನತ್ತ ಸೆಳೆಯುವ ಮೂಲಕ ರಾತ್ರೋ ರಾತ್ರಿ ಇಡೀ ದೇಶದ ಗಮನ ಸೆಳೆದಿದ್ದಳು. ಸೋಷಿಯಲ್ ಮೀಡಿಯಾಗಳಲ್ಲಿ ಈಕೆಯದ್ದೇ ಕಾರುಬಾರು. ಆದರೆ ಕೆಲವು ದಿನಗಳ ಹಿಂದೆ ಮೊನಾಲಿಸಾ ಕುಂಭಮೇಳದಿಂದ ಹೊರ ನಡೆದಿದ್ದಳು. ಆದರೆ ಮೊನಾಲಿಸಾ ಇದೀಗ ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾಳೆ ಎಂಬ ಸುದ್ದಿ ಹರಿದಾಡುತ್ತಿದೆ.
ಮೊನಾಲಿಸಾ ಕುಟುಂಬ ಇತ್ತೀಚೆಗೆ ಒಂದು ಪುಟ್ಟ ಮನೆಯನ್ನು ಕಟ್ಟಿದೆ. ಆ ಮನೆ ಕಟ್ಟಲು ಸಾಲ ಮಾಡಿಕೊಂಡಿದೆ. ಆ ಸಾಲವನ್ನು ತೀರಿಸಲು ಮೊನಾಲಿಸಾ ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಿ ಸ್ವಲ್ಪ ಹಣ ಸಂಪಾದನೆ ಮಾಡುತ್ತಿದ್ದಳು. ತುಂಬಾ ಸಾಲ ಮಾಡಿಕೊಂಡಿದ್ದ ತಂದೆಗೆ ಸಹಾಯ ಮಾಡಲು ಮೊನಾಲಿಸಾ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಿ ದಿನಕ್ಕೆ 500 ರಿಂದ 1000 ರೂಪಾಯಿ ಸಂಪಾದನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಆದರೀಗ ಸೆಲ್ಫಿಗಾಗಿ ಬಂದ ಜನ ರುದ್ರಾಕ್ಷಿ ಮಾಲೆ ಖರೀದಿ ಮಾಡದೆ ಫೋಟೋ ಕ್ಲಿಕ್ಕಿಸಿಕೊಂಡು ಎಸ್ಕೇಪ್ ಆಗುತ್ತಿದ್ದಾರೆ. ಆಕೆಯ ಸಮಯ ವ್ಯರ್ಥ ಮಾಡುವುದು ಮಾತ್ರವಲ್ಲದೆ ಆಕೆಯ ಹಿಂದೆ ಬಿದ್ದು ಆಕೆಯ ಕೆಲಸಕ್ಕೂ ತೊಂದರೆ ಕೊಡುತ್ತಿದ್ದಾರೆ.
ಇದರಿಂದಾಗಿ ಮೊನಾಲಿಸಾ ಸಾಲ ತೀರಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ಹಾಸಿಗೆ ಹಿಡಿದಿದ್ದಾಳೆ ಎನ್ನಲಾಗುತ್ತಿದೆ. ಫೋಟೋ ತೆಗೆಸಿಕೊಳ್ಳಲು ಜನ ಧಮ್ಕಿ ಹಾಕುತ್ತಿದ್ದು, ಆಕೆಯ ಮನೆಗೆ ಬಂದು ತೊಂದರೆ ಕೊಡುತ್ತಿದ್ದು ಮೊನಾಲಿಸಾ ಸಿಕ್ಕಪಟ್ಟೆ ಭಯಗೊಂಡಿದ್ದಾಳೆ. ಭಯದಲ್ಲೇ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಮೊನಾಲಿಸಾ ಆರೋಗ್ಯ ಹದಗೆಡುತ್ತಿದ್ದು ಕುಟುಂಬಸ್ಥರಿಗೆ ಆಕೆಯ ಆರೋಗ್ಯದ ಬಗ್ಗೆ ಚಿಂತೆ ಹೆಚ್ಚಾಗಿದೆ.
LATEST NEWS
76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ
Published
19 minutes agoon
26/01/2025By
NEWS DESK2ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರೆ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.
ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹುತಾತ್ಮ ಯೋಧರಿಗೆ ಮೋದಿ ಗೌರವ
76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.
ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣಗೊಳ್ಳುತ್ತಿದೆ. ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, 10,000 ಗಣ್ಯರು ಪಾಲ್ಗೊಂಡಿದ್ದಾರೆ. ಅಲ್ಲದೇ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.
LATEST NEWS
ಅಪಘಾ*ತದಲ್ಲಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ನಿ*ಧನ
ಹೆಡ್ ಕಾನ್ಸ್ಸ್ಟೆಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಪದಕ
ನಟ ಅನಂತ್ನಾಗ್ ಸೇರಿ ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ
ಗೂಗಲ್ ಮ್ಯಾಪ್ ಅವಾಂತರ: ನೇಪಾಳಕ್ಕೆ ಹೋಗಬೇಕಿದ್ದ ಫ್ರಾನ್ಸ್ ಪ್ರವಾಸಿಗರಿಬ್ಬರು ತಲುಪಿದ್ದು ಎಲ್ಲಿಗೆ ?
ಇಸ್ರೇಲ್ನ 4 ಮಹಿಳಾ ಸೈನಿಕರ ಬದಲಾಗಿ 200 ಹಮಾಸ್ ಖೈದಿಗಳ ಬಿಡುಗಡೆ!
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ
Trending
- BIG BOSS4 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS6 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS3 days ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS6 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?