Connect with us

    bangalore

    ಸಿದ್ದರಾಮಯ್ಯ, ಡಿಕೆಶಿ ಜತೆ 8 ಸಚಿವರಿಂದ ಇಂದು ಪ್ರಮಾಣ ವಚನ

    Published

    on

    ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರು ಇಂದು ಪ್ರಮಾಣ ವಚನ ಸ್ವಿಕರಿಸಲಿದ್ದಾರೆ.

    ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸಿದ್ದರಾಮಯ್ಯ ಅವರು 24ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾನ ವಚನ ಸ್ವೀಕಾರ ಮಾಡಲಿದ್ದಾರೆ. ಹಾಗೂ ಉಪ ಮುಖ್ಯ ಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಜೊತೆಗೆ 8 ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

    ಡಾ.ಜಿ ಪರಮೇಶ್ವರ್, ಕೆ. ಎಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    Click to comment

    Leave a Reply

    Your email address will not be published. Required fields are marked *

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    bangalore

    ಪರಿಷತ್‌ನಲ್ಲಿ 17 ಸದಸ್ಯರ ಪ್ರಮಾಣ ವಚನ..!

    Published

    on

    ಬೆಂಗಳೂರು : ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಹಾಗೂ ಸಂಸದೀಯ ಸಚಿವ ಹೆಚ್​ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಒಟ್ಟು 17 ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್​ಗೆ 11 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ 6 ಮಂದಿ ಆಯ್ಕೆಯಾಗಿದ್ದಾರೆ.

    ವಿಧಾನಸಭೆಯಿಂದ ವಿಧಾನ ಪರಿಷತ್​​ಗೆ ಆಯ್ಕೆಯಾದವರು

    ಕಾಂಗ್ರೆಸ್​ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್, ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್​ನಿಂದ ಜವರಾಯಿಗೌಡ ಆಯ್ಕೆಯಾಗಿದ್ದಾರೆ.

    ಶಿಕ್ಷಕ ಹಾಗೂ ಪಧವಿದರ ಕ್ಷೇತ್ರದಿಂದ ಆಯ್ಕೆಯಾದವರು

    ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗೆದ್ದ ಚಂದ್ರಶೇಖರ್ ಬಸವರಾಜ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಾಮೋಜಿಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​ನಿಂದ ಡಿ ಟಿ ಶ್ರೀನಿವಾಸ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಎಸ್​ಎಲ್ ಭೋಜೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಕೆ ವಿವೇಕಾನಂದ ಪ್ರಮಾಣ ವಚನ ಸ್ವೀಕರಿಸಿದರು.

    Continue Reading

    bangalore

    ಬೆಂಗಳೂರು ನಮ್ಮ ಮೆಟ್ರೋದಲ್ಲಿ ಕಪಲ್ ‘ರೊಮ್ಯಾನ್ಸ್..’! ಪ್ರಿಯತಮಗೆ ಚುಂಬಿಸಿದ ಯುವತಿ.!!ವೀಡಿಯೋ ವೈರಲ್

    Published

    on

    ಬೆಂಗಳೂರು:  ಅಗಾಗ ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳ ಆಲಿಂಗನದ ವೀಡಿಯೋ ವೈರಲ್ ಆಗುತ್ತಲೇ ಇದೆ.  ಇದೀಗ ಬೆಂಗಳೂರಿನಲ್ಲಿಯೂ ಇಂಥದ್ದೇ ಒಂದು ಘಟನೆ ಮರುಕಳಿಸಿದೆ. ಕಪಲ್ಸ್ ಇಬ್ಬರು ಒಬ್ಬರನೊಬ್ಬರು ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    bangalore metro

    ಬೆಂಗಳೂರು ನಮ್ಮ ಮೆಟ್ರೋದ ಬಾಗಿಲಿನ ಬಳಿ ಯುವತಿ-ಯವಕರಿಬ್ಬರೂ ನಿಂತುಕೊಂಡಿದ್ದು ಒಬ್ಬರನೊಬ್ಬರು ತಬ್ಬಿಕೊಂಡಿದ್ದಾರೆ. ಯುವತಿ ಯುವಕನ ಕೆನ್ನೆಗೆ ಮುತ್ತು ನೀಡಿದ್ದಾಳೆ. ಈ ದೃಶ್ಯವನ್ನು ಮೆಟ್ರೋದಲ್ಲಿದ್ದ ಪ್ರಯಾಣಿಕರೋರ್ವರ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

    ಈ ವಿಡಿಯೋವನ್ನು KPSB 52 ಎಂಬ ಎಕ್ಸ್​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದು ‘ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ’ ಎಂದು ಪ್ರಶ್ನಿಸಿದ್ದಾರೆ. ಇನ್ನು ಮೆಟ್ರೋದಲ್ಲಿದ್ದ ಇತರ ಪ್ರಯಾಣಿಕರು ಈ ಜೋಡಿಯ ರೋಮ್ಯಾನ್ಸ್‌ನಿಂದಾಗಿ ಮುಜುಗರಕ್ಕೊಳಗಾಗಿದ್ದಾರೆ.

    Read More..; 15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

    ದೆಹಲಿಯಲ್ಲೂ ನಡೆದಿತ್ತು ಈ ಘಟನೆ:

    ಈ ಹಿಂದೆ ದೆಹಲಿಯ ಮೆಟ್ರೋ ಸ್ಟೇಷನ್‌ ನಲ್ಲಿ ದಂಪಂತಿ ರೊಮ್ಯಾನ್ಸ್ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ದಂಪತಿ ಮೈಮರೆತು ರೋಮ್ಯಾನ್ಸ್ ಮಾಡಿಕೊಂಡು ತಮ್ಮದೇ ಲೋಕದಲ್ಲಿ ಮುಳುಗಿ ಹೋಗಿದ್ದರು. ಅಲ್ಲದೇ ಇಬ್ಬರೂ ಲಿಪ್‌ಲಾಕ್‌ ಕೂಡಾ ಮಾಡಿದ್ದಾರೆ. ದಂಪತಿಯ ಸರಸಸಲ್ಲಾಪವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬ ವೀಡಿಯೋ ಮಾಡಿದ್ದಾನೆ. ಇನ್ನು ದೆಹಲಿಯಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು ಜನರನ್ನು ಮುಜುಗರಕ್ಕೆ ಒಳಪಡಿಸುತ್ತಿದೆ. ಈ ಬಗ್ಗೆ ಮೆಟ್ರೋ ಆಡಳಿತ ಮಂಡಳಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಜನರು ಮಾತ್ರ ಕ್ಯಾರೇ ಅನ್ನುತ್ತಿಲ್ಲ.

     

     

    Continue Reading

    LATEST NEWS

    Trending