DAKSHINA KANNADA
ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಸಿದ್ದರಾಮಯ್ಯರವರು ಸುಳ್ಳು ಹೇಳುತ್ತಿದ್ದಾರೆ-ಸಿ.ಟಿ. ರವಿ ಆರೋಪ..!
ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳಿಕೆ ನೀಡಿದ್ದು, ಈ ಬಗ್ಗೆ ಅವರದ್ದೇ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಫ್ಯಾಕ್ಟ್ ಚೆಕ್ ಮಾಡಲಿ ಎಂದು ಸಿ.ಟಿ.ರವಿ ಆರೋಪಿಸಿದರು.
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಿನ್ನೆ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುವಾಗ ಮನುಸ್ಮೃತಿಯನ್ನು ಸಂವಿಧಾನವಾಗಿ ಬಳಸಲು ಕೆಲವರಿಂದ ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ನೀಡಿರುವ ಹೇಳಿಕೆಗೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸಿ.ಟಿ. ರವಿ ಅವರು ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಮತ್ತೆ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಹಲವು ಮಂದಿ ರಾಜರು ಆಳ್ವಿಕೆ ನಡೆಸಿದ್ದಾರೆ.
ಆದರೆ ಯಾವ ರಾಜರೂ ಮನುಸ್ಮೃತಿಯನ್ನು ಸಂವಿಧಾನವಾಗಿ ಮಾಡಿಲ್ಲ.
ಸದ್ಯ ಯಾವ ರಾಜ್ಯವೂ ಮನುಸ್ಮೃತಿಯನ್ನು ಆಡಳಿತದ ಭಾಗ ಮಾಡಿದ್ದೆವು ಎಂದು ಹೇಳಿಲ್ಲ.
ಹೀಗಿರುವಾಗ ಸಿದ್ದರಾಮಯ್ಯ ಯಾವ ಆಧಾರದ ಮೇಲೆ ಈ ಹೇಳಿಕೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಫ್ಯಾಕ್ಟ್ ಚೆಕ್ ಮಾಡ ಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳಿಕೆ ನೀಡಿದ್ದು, ಈ ಬಗ್ಗೆ ಅವರದ್ದೇ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಫ್ಯಾಕ್ಟ್ ಚೆಕ್ ಮಾಡಲಿ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಬರುತ್ತದೆ. ಕಾಕತಾಳೀಯ ಎಂಬಂತೆ ಈಗಲೂ ಬರ ಬಂದಿದೆ.
ದಲಿತರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಚಿವ ಸುಧಾಕರ್ ಅವರನ್ನು ಸಂಪುಟದಿಂದ ಕೈ ಬಿಟ್ಟು ತನಿಖೆ ನಡೆಸಬೇಕೆಂದು ಸಿ.ಟಿ.ರವಿ ಒತ್ತಾಯಿಸಿದರು.
DAKSHINA KANNADA
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ಮೆಸೇಜ್; ಯುವಕರಿಂದ ಹಲ್ಲೆ
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.
ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ.
ಸ್ಥಳೀಯ ಯುವತಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದು ಬಂದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ.
ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ತಾರಾನಾಥ ಮುಗೇರ ನಿಗೂಢ ಸಾ*ವು ಪ್ರಕರಣಕ್ಕೆ ಟ್ವಿಸ್ಟ್; ಅಕ್ಕನಿಂದಲೇ ಹ*ತ್ಯೆ!
ಮಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ಸಾ*ವಿಗೀಡಾಗಿದ್ದ ಕಟೀಲು ಗಿಡಿಗೆರೆ ನಿವಾಸಿಯ ಸಾ*ವು ಆತ್ಮಹ*ತ್ಯೆಯಲ್ಲ ಕೊ*ಲೆ ಎಂಬುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕಟೀಲು ಗಿಡಿಗೆರೆ ನಿವಾಸಿ ತಾರಾನಾಥ ಮುಗೇರ (40) ಎಂಬವರ ಶ*ವ ಅವರ ಮನೆಯಿಂದ ಸುಮಾರು 100ಮೀ. ದೂರದಲ್ಲಿ ಭಾನುವಾರ ಅ.27ರಂದು ಪತ್ತೆಯಾಗಿತ್ತು. ಪ್ರಕರಣದ ಸಂಶಯದ ಸುಳಿವುಗಳ ಜಾಡು ಹಿಡಿದು ತನಿಖೆ ಮುಂದುವರಿಸಿದ ಬಜಪೆ ಪೊಲೀಸರು ತಾರಾನಾಥರ ದೊಡ್ಡಪ್ಪನ ಮಗಳನ್ನು ಬಂಧಿಸಿದ್ದಾರೆ.
ದೇವಕಿ (42) ಬಂಧಿತ ಆರೋಪಿ. ದೇವಕಿ ಅವಿವಾಹಿತೆಯಾಗಿದ್ದು, ವಿಚಾರಣೆಯ ವೇಳೆ ಆಕೆಯ ಮೇಲೆ ಸಂಶಯ ದೃಢಪಟ್ಟ ಹಿನ್ನೆಲೆ ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕೊ*ಲೆಯಾಗಿದ್ದು ಹೇಗೆ ?
ತಾರಾನಾಥರಿಗೆ ಕುಡಿತದ ಚಟವಿತ್ತು. ಆತ ಮನೆಯವರಿಗೂ ಹಾಗೂ ಆರೋಪಿ ದೇವಕಿಗೂ ಕಿರುಕು*ಳ ನೀಡುತ್ತಿದ್ದ ಎನ್ನಲಾಗಿದೆ. ಹೆದರಿಸುವ ಸಲುವಾಗಿ ತಾರಾನಾಥ ತನ್ನ ಮನೆಯ ಪಕ್ಕವೇ ಇರುವ ದೊಡ್ಡಪ್ಪನ ಮನೆಯ ಬಟ್ಟೆ ಒಣಗಿಸಲು ಕಟ್ಟಿದ್ದ ಕೇಬಲನ್ನು ತಂದು ಕುತ್ತಿಗೆಗೆ ಬಿಗಿದುಕೊಂಡಿದ್ದ ವೇಳೆ ದೇವಕಿ ಅದನ್ನು ಜೋರಾಗಿ ಬಿಗಿದಾಗ ಆತ ಮೃ*ತಪಟ್ಟಿದ್ದರು ಎನ್ನಲಾಗಿದೆ.
ಇದನ್ನೂ ಓದಿ : ಕಡಬ : ಶಸ್ತ್ರಚಿಕಿತ್ಸೆ ನಡೆಯುತ್ತಿರುವಾಗಲೇ ಹೃ*ದಯಾಘಾತದಿಂದ ವ್ಯಕ್ತಿ ಸಾ*ವು
ಶನಿವಾರ ರಾತ್ರಿ 7 ಗಂಟೆಯ ಬಳಿಕ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಜೋಡಿಸಿ ಇಟ್ಟಿದ್ದ ಚಪ್ಪಲಿ, ಸ್ಥಳ ಮಹಜರು ವೇಳೆ ಧೃಡಪಟ್ಟ ಅಂಶಗಳಿಂದ ಪ್ರಕರಣದ ಸುಳಿವು ಸಿಕ್ಕಿತ್ತೆನ್ನಲಾಗಿದೆ. ಪ್ರಕರಣದಲ್ಲಿ ತಾರಾನಾಥನ ಸಹೋದರನನ್ನು ಕೂಡ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು.
DAKSHINA KANNADA
ದೀಪಾವಳಿ ಹಬ್ಬದ ಪ್ರಯುಕ್ತ ಕ್ಯಾಥೋಲಿಕ್ ಸಭೆಯಿಂದ ರಾಮಕೃಷ್ಣ ಮಿಷನ್ ಆಶ್ರಮಕ್ಕೆ ಭೇಟಿ
ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರಿನ ಧರ್ಮಪ್ರಾಂತ್ಯದ ಲೇ ಫೇಯ್ತ್‌ಫುಲ್ ಕಮಿಷನ್‌ನ ಪ್ರಮುಖ ಸದಸ್ಯರು, ಕ್ಯಾಥೋಲಿಕ್ ಸಭಾದ ಮುಖಂಡರು ಮತ್ತು ಇತರ ಪ್ರತಿನಿಧಿಗಳೊಂದಿಗೆ ಮೋರ್ಗಾನ್ಸ್ ಗೇಟ್‌ನಲ್ಲಿರುವ ರಾಮಕೃಷ್ಣ ಮಿಷನ್ ಆಶ್ರಮಕ್ಕೆ ಭೇಟಿ ನೀಡಿದರು.
ಆಶ್ರಮದ ಮುಖ್ಯಸ್ಥ ಶ್ರೀ ಜಿತಕಾಮನಂದಗಿ ಸ್ವಾಮೀಜಿ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ ಮಾತನಾಡಿ, ಓಂ ಅಸತೋ ಮಾ ಸದ್ ಗಮಯ ತಮಸೋ ಮಾ ಜ್ಯೋತಿರ್ ಗಮಯ ಮೃತ್ಯೋರ್ ಮಾಮ್ರತಂ ಗಮಯ ಓಂ ಶಾಂತಿಃ ಶಾಂತಿಃ ಶಾಂತಿಃ” ಎಂಬಂತೆ ನಮ್ಮನ್ನು ಅಸತ್ಯದಿಂದ ಸತ್ಯದ ಕಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಮತ್ತು ಸಾವಿನಿಂದ ಅಮರತ್ವಕ್ಕೆ ಕರೆದೊಯ್ಯಿರಿ. ಈ ಸಂದೇಶವು ಇಂದಿನ ಸಮಾಜದಲ್ಲಿ ಸಹೋದರತ್ವ, ಶಾಂತಿ ಮತ್ತು ಸಂತೋಷವನ್ನು ಹರಡುವ ಹಂಚಿಕೆಯ ಗುರಿಯನ್ನು ಒತ್ತಿಹೇಳುತ್ತದೆ ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ದಿಲ್‌ರಾಜ್ ಆಳ್ವ ದೀಪಾವಳಿಯ ಮೌಲ್ಯಗಳನ್ನು ಪ್ರತಿಧ್ವನಿಸುವ ಸ್ಮರಣೀಯ ಅನುಭವವನ್ನು ಹಂಚಿಕೊಂಡರು. ಧರ್ಮಪ್ರಾಂತ್ಯದ ಲೇ ಫೇತ್‌ಫುಲ್ ಆಯೋಗದ ಕಾರ್ಯದರ್ಶಿ ರೆ.ಫಾ. ಜೆ.ಬಿ.ಕ್ರಾಸ್ತಾ, ಮಂಗಳೂರು ಧರ್ಮಪ್ರಾಂತ್ಯದ ಕೆಥೋಲಿಕ್ ಸಭಾದ ಅಧ್ಯಕ್ಷ ಅಲ್ವಿನ್ ಡಿಸೋಜಾ, ಪ್ರಸಿದ್ಧ ಸಾಮಾಜಿಕ ಸಂಯೋಜಕ ಡಾ. ಮಿಥುನ್ ಸಿಕ್ವೇರಾ, ಆರೋಗ್ಯ ಸೇವಾ ಕ್ಷೇತ್ರದ ಸ್ವಯಂಸೇವಕ ಬಸವರಾಜು ಉಪಸ್ಥಿತರಿದ್ದರು.
ಇದನ್ನೂ ಓದಿ : ಬಲಗೈ ಬಿಟ್ಟು ಎಡಕೈಗೆಯೇ ಯಾಕೆ ವಾಚ್ ಕಟ್ಟುವುದು ಗೊತ್ತಾ ?
ಸ್ವಾಮೀಜಿಯೊಂದಿಗೆ ಸಾಂಕೇತಿಕ ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡು ಸಮುದಾಯಗಳ ನಡುವೆ ಐಕ್ಯತೆ ಸಾರಲಾಯಿತು.
- LATEST NEWS6 days ago
ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ ʼಡಿಜಿಟಲ್ ಕಾಂಡೋಮ್ʼ !! ಬಳಕೆ ಹೇಗೆ ?
- BIG BOSS7 days ago
BBK 11 : ಸೃಜನ್ ಲೊಕೇಶ್ ಜೊತೆ ಬಂದ ಹೊಸ ಕಾರಲ್ಲಿ ಹೊರ ಹೊಗೋದು ಯಾರು ಗೊತ್ತಾ ??
- LATEST NEWS6 days ago
ರೀಲ್ಸ್ ರಾಣಿ ಪತಿ ಕೊ*ಲೆಯಲ್ಲಿ ಮತ್ತೊಂದು ಟ್ವಿಸ್ಟ್ : ಪ್ರತಿಮಾ ಬಳಸಿದ್ದ ವಿಷ ಯಾವುದು ಗೊತ್ತಾ ?
- BIG BOSS7 days ago
BBK 11 : ಹನುಮಂತನ ನಿಜಬಣ್ಣ ಬಯಲು ಮಾಡಿದ ಭಟ್ರು !!