Connect with us

LATEST NEWS

ಬಿಜೆಪಿಯದ್ದು ಡೋಂಗಿತನ ಹಾಗೂ ಹುಸಿ ಹಿಂದುತ್ವ ಎಂದು ಕಿಡಿಕಾರಿದ ಸಿದ್ದರಾಮಯ್ಯ

Published

on

ಬೆಂಗಳೂರು: ಬಿಜೆಪಿಯವರು ಹೇಳೋದು ಹಿಂದುತ್ವ. ಹಿಂದು ದೇವಾಲಯವನ್ನು ಇವರ ಸರ್ಕಾರವೇ ನಾಶ ಮಾಡಿದೆ. ಬಿಜೆಪಿಯದ್ದು ಡೋಂಗಿತನ ಹಾಗೂ ಹುಸಿ ಹಿಂದುತ್ವ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.


ವಿಧಾನಸೌಧದಲ್ಲಿ ಮಾತನಾಡಿದ ಅವರು, ನಂಜನಗೂಡು ದೇವಸ್ಥಾನ ನೆಲಸಮ ಸರ್ಕಾರದ ಗಮನದಲ್ಲಿ ಇತ್ತು.‌

ಸಿಎಎಸ್ ಪತ್ರ ಬರೆದಿದ್ದರು 15ರಿಂದ ಎಲ್ಲಾ ನೆಲಸಮ ಮಾಡಬೇಕು ಅಂತ ಈಗ ಸಾರ್ವಜನಿಕರಿಂದ ಒತ್ತಾಯ ಹೆಚ್ಚಾದ ನಂತರ ಸರ್ಕಾರ ಬಣ್ಣ ಬದಲಾಯಿದೆ ಎಂದು ಆರೋಪ ಮಾಡಿದರು.

ಅಲ್ಲದೆ ಸರ್ಕಾರದ ಗಮನಕ್ಕೆ ಬರದೆ ದೇವಸ್ಥಾನ ತೆರವು ಸಾಧ್ಯನಾ ಎಂದು ಪ್ರಶ್ನಿಸಿದರು.
ನಂಜನಗೂಡು ದೇವಸ್ಥಾನ ಒಡೆಯಲು ಪ್ರೇರಣೆ, ಸೂಚನೆ ಮುಖ್ಯ ಕಾರ್ಯದರ್ಶಿ ಪತ್ರವಾಗಿದೆ. ಬಿಜೆಪಿಯವರು ಹೇಳೋದು ಹಿಂದುತ್ವ.

ಹಿಂದು ದೇವಾಲಯವನ್ನು ಇವರ ಸರ್ಕಾರವೇ ನಾಶ ಮಾಡಿದೆ. ಮಾತು ರಾಮನ ಜಪ ಇಲ್ಲಿ ದೇವಸ್ಥಾನ ಕೆಡವೋದು.‌

ಗಮನಕ್ಕೆ ತರದೆ ಯಾವುದೆ ಚರ್ಚೆ ಮಾಡದೆ ನೆಲಸಮ ಮಾಡಿದ್ದು ಇವರ ಡೋಂಗಿತನ, ಹುಸಿ ಹಿಂದುತ್ವ ತೋರಿಸುತ್ತೆ.

ಇವರಿಗೆ ಹಿಂದುತ್ವ, ದೇವರು ಹಾಗೂ ದೇವಸ್ಥಾನದ ಬಗ್ಗೆ ಇವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಕಿಡಿಕಾರಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

FILM

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’

Published

on

ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.

ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:

ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.

ಸಿನಿಮಾಗಳಲ್ಲಿ ಬ್ಯುಸಿ :

ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!

ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :

ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.


‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.

Continue Reading

DAKSHINA KANNADA

ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?

Published

on

ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.

ಕಲ್ಲಂಗಡಿ ಚಿಕನ್ ಬಿರಿಯಾನಿ

ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್‌ನ villagefoodchannel_official ಪೇಜ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.

ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ

ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.

ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.

ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.

ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.

Continue Reading

LATEST NEWS

Trending