Connect with us

DAKSHINA KANNADA

ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?: ಮಾಜಿ ಸಿಎಂ ಸಿದ್ದು ಸರಣಿ ಟ್ವೀಟ್‌

Published

on

ಬೆಂಗಳೂರು: ಪ್ರಧಾನಿ ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಸಿದ್ದರಾಮಯ್ಯ ಟ್ವೀಟ್‌ಗಳ ಸುರಿಮಳೆಗೈದಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.
ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906)
ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925) ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931 ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?
ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ.
ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ.
ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು?.
ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ.
ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ.
48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು.
ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ.
ಹೀಗೆ ಸಾಲು ಸಾಲು ಟ್ವೀಟ್‌ ಮೂಲಕ ನರೇಂದ್ರ ಮೋದಿ ಹಾಗೂ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending