Wednesday, October 5, 2022

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ.

ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು ವಿಶಿಷ್ಟವಾಗಿ ಅಭಿವ್ಯಕ್ತಿಗೊಳಿಸಿದ್ದಾರೆ, ಪತ್ನಿ ಪುತ್ಥಳಿಯೊಂದಿಗೆ ಮನೆ ಗೃಹಪ್ರವೇಶ ನೆರವೇರಿಸಿದ್ದಾರೆ. ಕೊಪ್ಪಳದ ಭಾಗ್ಯನಗರದ ಉದ್ಯಮಿ ಶ್ರೀನಿವಾಸ್‌ ಗುಪ್ತಾ ಅವರೇ ಈ ವ್ಯಕ್ತಿ. ಶ್ರೀನಿವಾಸ್ ಗುಪ್ತಾ ಅವರ ಪತ್ನಿ ಕೆವಿಎನ್ ಮಾಧವಿ ಅವರಿಗೆ ತಮ್ಮ ಕನಸಿನ ಮನೆಯೊಂದನ್ನು ಕಟ್ಟಬೇಕೆಂದು ಆಸೆ ಇತ್ತು. ಅದರಂತೆ ಅವರು ಮನೆಯ ಭೂಮಿ ಪೂಜೆ ನೆರವೇರಿಸಿ, ಮನೆ ನಿರ್ಮಾಣ ಸಹ ಆರಂಭ ಮಾಡಿದ್ದರು.

ಆದರೆ 2017ರ ಜುಲೈ 5 ರಂದು ತಿರುಪತಿಗೆ ಹೋಗುವ ವೇಳೆಯಲ್ಲಿ ಕೋಲಾರದ ಬಳಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಆ ಬಳಿಕ ಮನೆ ನಿರ್ಮಾಣದ ಕೆಲಸವನ್ನು ಶ್ರೀನಿವಾಸ್ ಗುಪ್ತಾ ಅರ್ಧಕ್ಕೆ ನಿಲ್ಲಿಸಿದ್ದರು. ನಂತರ ಮಕ್ಕಳ ಒತ್ತಾಯದ ಮೆರೆಗೆ ಮನೆ ನಿರ್ಮಾಣದ ಕೆಲಸವನ್ನು ಪುನಃ ಆರಂಭ ಮಾಡಿದರು.

ಪತ್ನಿ ಅಗಲಿದ್ದರೂ ಅವರ ನೆನಪಲ್ಲೇ ಶ್ರೀನಿವಾಸ್‌ ಗುಪ್ತಾ ಕೊರಗುತ್ತಿದ್ದರು. ಸಾಯುವ ಮುನ್ನ ಹೊಸ ಮನೆ ಕಟ್ಟಿಸಬೇಕು ಎನ್ನುವುದು ಅವರ ಪತ್ನಿಯ ಮಹದಾಸೆಯಾಗಿತ್ತು. ಮನೆಯೇನೋ ನಿರ್ಮಾಣವಾಯಿತು. ಆದರೆ ಪತ್ನಿ ಅಷ್ಟೊತ್ತಿಗಾಗಲೇ ಇಹಲೋಕದ ಪಯಣ ಮುಗಿಸಿದ್ದರು.ಆಗ ಅವರ ತಲೆಗೆ ಬಂದಿದ್ದೇ ಮೇಣದ ಪ್ರತಿಮೆಯ ಯೋಚನೆ.

ಅದರಂತೆ ಬೆಂಗಳೂರು ಮೂಲದ ಕಲಾವಿದ ರಂಗಣ್ಣನವರ್‌ ಅವರನ್ನು ಸಂಪರ್ಕಿಸಿದ ಶ್ರೀನಿವಾಸ್‌ ಗುಪ್ತಾ, ಶ್ರೀಧರ್‌ ಮೂರ್ತಿ ಅವರಿಂದ ಸಿಲಿಕಾನ್‌ ವ್ಯಾಕ್ಸ್‌ನಲ್ಲಿ ಪತ್ನಿಯ ಸುಂದರ ಮೂರ್ತಿ ಮಾಡಿಸಿದ್ದಾರೆ. ಹೀಗೆ ‘ಕುಟುಂಬ ಸಮೇತರಾಗಿ’ ಅವರು ತಮ್ಮ ಕನಸಿನ ಮನೆಯ ಗೃಹ ಪ್ರವೇಶ ನಡೆಸಿದ್ದಾರೆ.

ಮಾಧವಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರು ಈ ಪ್ರತಿಮೆ ಬಂದಾಗಿನಿಂದ ತಮ್ಮ ತಾಯಿ ಎಲ್ಲಿಗೂ ಹೋಗಿಲ್ಲ. ನಮ್ಮ ಜೊತೆಗೇನೆ ಇದ್ದಾರೆ ಎನ್ನುವ ಭಾವದಲ್ಲಿ ಇದ್ದಾರೆ. ಅಷ್ಟೇ ಅಲ್ಲ ತಮ್ಮ ತಾಯಿಯ ಪ್ರತಿಮೆಯ ಪಕ್ಕಕ್ಕೆ ಕುಳಿತು ಖುಷಿ ಪಡುತ್ತಾರೆ. 4 ಅಡಿ ಎತ್ತರ ಹಾಗೂ 15 ಕೆಜಿ ತೂಕ ಹೊಂದಿದೆ. ಪತ್ನಿ ಮೇಲೆ ಗುಪ್ತಾ ಇಟ್ಟಿರುವ ಪ್ರೀತಿಗೆ ಎಲ್ಲರೂ ತಲೆದೂಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...