Sunday, December 4, 2022

ಸಿಲ್ಲಿ-ಲಲ್ಲಿ ಖ್ಯಾತಿಯ ಸುನೇತ್ರಾ ಪಂಡಿತ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಶೂಟಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಜನಪ್ರಿಯ ನಟಿ, ಡಬ್ಬಿಂಗ್ ಕಲಾವಿದೆ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತವಾಗಿ ತಲೆಗೆ ಪೆಟ್ಟು ಬಿದ್ದಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.


ಇವರು ಶೂಟಿಂಗ್ ಮುಗಿಸಿ ಮನೆಗೆ ಹೋಗುತ್ತಿರುವಾಗ ರಸ್ತೆ ಹಂಪ್ ದಾಟುವಾಗ ಸ್ಕೂಟರ್‌ನಿಂದ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಆದರೆ ಹೆಲ್ಮೆಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ತಕ್ಷಣವೇ ಇವರನ್ನು ಸ್ಥಳೀಯರು ಸಮೀಪದ ಬಿಎಂಎಸ್ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದ್ದು ಹಂಪ್ ಕಾಣದೆ ಸ್ಕೂಟರ್ ಜಂಪ್ ಆಗಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics