Connect with us

    STATE

    ಪತ್ನಿ ಮೇಲೆ ಅನುಮಾನ ; ಹೆಂಡತಿಗೆ ಬೆಂ*ಕಿ ಹಚ್ಚಿ ಆ*ತ್ಮಹತ್ಯೆಗೆ ಯತ್ನಿಸಿದ ಪಾ*ಪಿ ಪತಿ

    Published

    on

    ಮಂಗಳೂರು/ಬೆಂಗಳೂರು: ಗಂಡನು ಹೆಂಡತಿಯ ಶೀ*ಲ ಶಂಕಿಸಿ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿ ಬಳಿಕ ಆ*ತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂ*ಕಿ ಹಚ್ಚಿ ಹ*ತ್ಯೆಗೆ ಯತ್ನಿಸಿದ್ದಾನೆ.

    ಜೋಡಿಯು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಸಂಸಾರದಲ್ಲಿ ಹೊಂದಾಣಿಕೆ ಬರುತ್ತಿರಲಿಲ್ಲ. ನಿತ್ಯವೂ ಇಬ್ಬರ ಮಧ್ಯೆ ಜಗಳ ನಡೆತಿತ್ತು.‌ ಕೊನೆಗೆ ಪತಿಯೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿ ತಾನೂ ಆ*ತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ.

    ಏನಿದು ಘಟನೆ ?

    ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದ. ಮೊನ್ನೆ (ನ.28) ಸಂಜೆ ಕುಡಿಯ ಮತ್ತಿನಲ್ಲಿ ಪೆಟ್ರೋಲ್ ತಂದ ಪ್ರಭು ಪತ್ನಿ ಪ್ರಿಯಾಂಕ್ ಮೇಲೆ ಸುರಿದು ತಾನೂ ಸುರಿದುಕೊಂಡಿದ್ದ. ಬಳಿಕ ತಾನೂ ಬೆಂ*ಕಿ ಹಚ್ಚಿಕೊಂಡು ಪತ್ನಿಗೂ ಬೆಂಕಿ ಹಾಕಿದ್ದ. ಆದ್ರೆ ಬೆಂಕಿ ಉರಿ ತಾಳಲಾರದೆ ಮನೆಯಿಂದ ಹೊರಗಡೆ ಓಡಿ ಬಂದಿದ್ದ ಇಬ್ಬರನ್ನು ಸ್ಥಳೀಯರು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಇದನ್ನೂ ಓದಿ : ಕಟಪಾಡಿ: ಪತ್ನಿ ನಿ*ಧನದ ಬೆನ್ನಲ್ಲೇ ಆಘಾತದಿಂದ ಪತಿ ಸಾ*ವು

    ಈ ಬಗ್ಗೆ ಪ್ರಿಯಾಂಕಾ ಸಂಬಂಧಿ ಅರುಣ್ ಪ್ರತಿಕ್ರಿಯಿಸಿದ್ದು, “ಪ್ರಭು ಮೂಲತಃ ಬೆಳಗಾವಿಯವನು ಹಾಗೂ ಪ್ರಿಯಾಂಕ ಬೆಂಗಳೂನವಳು, ಎರಡು ವರ್ಷಗಳ ಹಿಂದೆ ಅವರು ಲವ್ ಮ್ಯಾರೇಜ್ ಆಗಿದ್ದರು. ಮದುವೆ ಆದಾಗಿನಿಂದಲೂ ಪ್ರತಿ ದಿನ ಜಗಳವಾಡುತ್ತಿದ್ದರು. ಪ್ರಭು ದಿನ ಕುಡಿದು ಪ್ರಿಯಾಂಕ ಮೇಲೆ ಹ*ಲ್ಲೆ ಮಾಡುತ್ತಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ದೂರುಗಳು ದಾಖಲಾಗಿವೆ. ಪ್ರಭು ತನ್ನ ಅಕ್ಕಂದಿರ ಮಾತು ಕೇಳಿ ಪ್ರಿಯಾಂಕ‌ ಮೇಲೆ ಅನುಮಾನ ಪಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಸಂಸಾರ ಮುಂದುವರೆಸಿದ್ದರು, ಬುಧವಾರ ಸಂಜೆ ಮತ್ತೆ ಇಬ್ಬರೂ ಜಗಳ ಆಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಭು ಪ್ರಿಯಾಂಕ ಮೇಲೆ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿದ್ದಾನೆ” ಎಂದಿದ್ದಾರೆ.

    ಸದ್ಯ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆರೋಪಿ ಪತಿ ಪ್ರಭು ವಿರುದ್ದ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಯುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಜೇನು ದಾಳಿ : 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    Published

    on

    ಉತ್ತಕನ್ನಡ : ಶಾಲಾ ಮೈದಾನದಲ್ಲಿ ಮಕ್ಕಳು ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದರು. ಈ ವೇಳೆ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಇದರಿಂದ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾನ್ ಬಾಸ್ಕೋ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.

    ಶಾಲಾ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಸುಮಾರು 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಿರಸಿಯ ಡಾನ್ ಬಾಸ್ಕೋ ಶಾಲಾ ಮೈದಾನದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶಿರಸಿ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು.

    Continue Reading

    DAKSHINA KANNADA

    ಚುನಾವಣಾ ಬಾಂಡ್‌ ಅಕ್ರಮ : ನಿರ್ಮಲಾ ಸೀತಾರಾಮನ್‌, ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್

    Published

    on

    ಮಂಗಳೂರು : ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಅರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

    ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 384( ಸುಲಿಗೆಗೆ ಶಿಕ್ಷೆ) 120 ಬಿ (ಕ್ರಿಮಿನಲ್ ಪಿತೂರಿ) 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳು ಮಾಡಿದ ಕಾರ್ಯಗಳು) ಅಡಿಯಲ್ಲಿ ಸೀತಾರಾಮನ್, ಇಡಿ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರೂ ಎಫ್ ಐಆರ್ ನಲ್ಲಿ ಕೇಳಿ ಬಂದಿತ್ತು.

    ಇದನ್ನೂ ಓದಿ : ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್

    ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಪ್ರತಿಷ್ಟಿತ ಕಂಪೆನಿಗಳಿಂದ ಸುಮಾರು 8  ಸಾವಿರ ಕೋಟಿ  ರೂ.ಗಳನ್ನು  ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ಸಂಸ್ಥಾಪಕ ಆದರ್ಶ್ ಆರ್.ಅಯ್ಯರ್ ಎಂಬವರು ದೂರು ದಾಖಲಿಸಿದ್ದರು.

    Continue Reading

    FILM

    ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !

    Published

    on

    ಮಂಗಳೂರು/ಬೆಂಗಳೂರು: ಸರಿಯಾಗಿ ಒಂದು ತಿಂಗಳ ಬಳಿಕ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ಹಿಂದಿನ ರಹಸ್ಯ ಬಹಿರಂಗಗೊಂಡಿದೆ.


    ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ತನಿಖೆಯಿಂದ ಹಲವು ಸಂಗತಿಗಳು ಬಯಲಿಗೆ ಬಂದಿವೆ. ಅವರು ಹಣ ಇಲ್ಲದೇ ಸಾಲ ಮಾಡಿಕೊಂಡಿದ್ದರು. ಸ್ನೇಹಿತರು, ಸಂಬಂಧಿಕರು ಸೇರಿ ಹಲವರ ಬಳಿ ಕೋಟ್ಯಂತರ ರೂ. ಸಾಲ ಮಾಡಿದ್ದಾರೆ.

    ಇದನ್ನೂ ಓದಿ: ತಾಯಿಯ ಆಸೆ ಈಡೇರಿಸಲು ಹೋಗಿ ಕಂಬಿ ಎಣಿಸುತ್ತಿರುವ ಮಗ !

    ಸಾಲದಿಂದ ರೋಸಿ ಹೋಗಿದ್ದ ಗುರುಪ್ರಸಾದ್, ಆನ್ ಲೈನ್ ಜೂಜಿನ ಚಟಕ್ಕೆ ಸಿಲುಕಿರುವ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಸಾಲ ಹೆಚ್ಚಾದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಸಾಲ ಕೇಳುವಾಗ ‘ಫಿಲ್ಮ್ ಮಾಡ್ತಿದ್ದೀನಿ, ಸಿನಿಮಾದಿಂದ ಖಂಡಿತ ಹಣ ಬರುತ್ತೆ, ಆಗ ಹಣ ವಾಪಸ್ ಕೊಡುತ್ತೀನಿ ಎಂದು ಹೇಳುತ್ತಿದ್ದರಂತೆ. ಹೀಗಾಗಿ ಆನ್ ಲೈನ್ ಗೇಮ್ ಗಳಲ್ಲಿ ಬೆಟ್ಟಿಂಗ್ ಆಡುತ್ತಿದ್ದರು ಎಂದು ತಿಳಿದುಬಂದಿದೆ. ಅದರಲ್ಲೂ ಗುರುಪ್ರಸಾದ್ ರಮ್ಮಿ ಸರ್ಕಲ್ ಸುಳಿಗೆ ಸಿಲುಕ್ಕಿದ್ದರು. ಸಾಲ ಹೆಚ್ಚಾದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    Continue Reading

    LATEST NEWS

    Trending