Thursday, March 23, 2023

ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ..!

ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ,ವಿಮರ್ಶಕ ಹಾಗೂ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಇಂದು ಬೆಳಗ್ಗಿನ ಜಾವಾ ನಿಧನರಾಗಿದ್ದಾರೆ.

ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ,ವಿಮರ್ಶಕ ಹಾಗೂ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಇಂದು ಬೆಳಗ್ಗಿನ ಜಾವಾ ನಿಧನರಾಗಿದ್ದಾರೆ.

ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು.

ಆದ್ರೆ ಇಂದು ಬೆಳಗ್ಗಿನ ಜಾವಾ ಮೂರು ಗಂಟೆ ಹೊತ್ತಿಗೆ ಅವರು ಇಹ ಲೋಕ ತ್ಯಜಿಸಿದ್ದಾರೆ, ಇಂದಿನ ಮಂಗಳೂರು ಉತ್ತರ ಅಂದಿನ ಸುರತ್ಕಲ್ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕರಾಗಿ 1994 ರಲ್ಲಿ ಆಯ್ಕೆಯಾಗುವ ಮೂಲಕ ಮೊತ್ತ ಮೊದಲ ಬಾರಿಗೆ ಬಿಜೆಪಿಯ ಕಮಲವನ್ನು ಅರಳಿಸಿದ್ದ ಕೀರ್ತಿ ಕುಂಬ್ಳೆ ಅವರಿಗೆ ಸಲ್ಲುತ್ತಿದೆ.

ಬಿಜೆಪಿಯಿಂದ ಟಿಕೆಟ್‌ ಪಡೆದು ಸುರತ್ಕಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಬಂದು 1994ರಿಂದ 1999 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದರು.

ಮತದಾರರಿಂದಲೇ ವಿಧಾನಸಭೆಗೆ ಆರಿಸಲ್ಪಟ್ಟ ಪ್ರಪ್ರಥಮ ಯಕ್ಷಗಾನ ಕಲಾವಿದ ಎಂಬ ಶಾಸಕರೆಂಬ ಹೆಗ್ಗಳಿಕೆ ಅವರದು.

ಈ ಅವಧಿಯಲ್ಲಿ, ರವೀಂದ್ರ ಕಲಾಕ್ಷೇತ್ರವನ್ನು ಯಕ್ಷಗಾನ ಪ್ರದರ್ಶನಕ್ಕೆ ಸರ್ಕಾರ ನಿರಾಕರಿಸಿದಾಗ, ಸನದಲ್ಲಿ ಪ್ರತಿಭಟಿಸಿ ಯಕ್ಷಗಾನಕ್ಕೆ ಅನುಮತಿ ದೊರಕಿಸಿಕೊಟ್ಟಿದ್ದರು.

ಅತ್ಯುತ್ತಮ ಯಕ್ಷಗಾನ ಕಲಾವಿದರಾಗಿದ್ದ ಕುಂಭ್ಳೆ ಸುರತ್ಕಲ್ , ಧರ್ಮಸ್ಥಳ . ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ.

ಲಯಬದ್ಧವಾದ ಮಾತುಗಾರಿಕೆಗೆ ಹೆಸರಾಗಿದ್ದ ಕುಂಭ್ಳೆ ಯಕ್ಷಗಾನ ಬಯಲಾಟ ಹಾಗೂ ತಾಳಮದ್ದಳೆ ಎರಡೂ ಪ್ರಕಾರಗಳಲ್ಲಿ ಹೆಸರಾದ ಕಲಾವಿದರಾಗಿದ್ದರು.

ಯಾವುದೇ ಬಗೆಯ ಪಾತ್ರಗಳನ್ನು ಲೀಲಾಜಾಲವಾಗಿ ಮಾಡುತ್ತಿದ್ದ ಅವರಿಗೆ ಪಾದುಕಾ ಪಟ್ಟಾಭಿಷೇಕದ ಭರತ, ವಿರಾಟ ಪರ್ವದ ಉತ್ತರ ಕುಮಾರ, ಕೃಷ್ಣ ಸಂಧಾನದ ಕೃಷ್ಣ, ದಕ್ಷಯಜ್ಞದ ಈಶ್ವರ, ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಗೋವಿಂದ ದೀಕ್ಷಿತ, ತ್ರಿಪುರ ಮಥನದ ಚಾರ್ವಾಕ ಮುಂತಾದ ಪಾತ್ರಗಳು ಬಹಳಷ್ಟು ಪ್ರಸಿದ್ಧಿಯನ್ನು ತಂದುಕೊಟ್ಟಿದ್ದವು. ಭಕ್ತಿ, ಕರುಣಾರಸದ ಪಾತ್ರಗಳನ್ನು ಹೆಚ್ಚು ಸೊಗಸಾಗಿ ಚಿತ್ರಿಸುತ್ತಿದ್ದರು.

ಇವರ ಕಲಾ ಸೇವೆಯನ್ನು ಗುರುತಿಸಿ ಅನೇಕ ಗೌರವಗಳು , ಪ್ರಶಸ್ತಿಗಳು ಸಂದಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಪಡೆದಿದ್ದಾರೆ.

ಕಾಸರಗೋಡಿನ ಕುಂಬಳೆಯಲ್ಲಿ ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಜನಿಸಿದ ಅವರು ಚಿಕ್ಕಂದಿನಲ್ಲಿಯೇ ಯಕ್ಷಗಾನದ ತೀವ್ರ ಆಸಕ್ತಿ ಬೆಳೆಸಿಕೊಂಡಿದ್ದರು.

ನಂತರ ಕೂಡ್ಲು, ಕುಂಡಾವು, ಸುರತ್ಕಲ್, ಧರ್ಮಸ್ಥಳ, ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಮಿಂಚಿದರು. ಶೇಣಿ ಗೋಪಾಲಕೃಷ್ಣ ಭಟ್‌, ಮಲ್ಪೆ ಶಂಕರನಾರಾಯಣ ಸಾಮಗ, ಮಲ್ಪೆ ರಾಮದಾಸ ಸಾಮಗ, ತೆಕ್ಕಟ್ಟೆ ಆನಂದ ಮಾಸ್ಟರ್ ಮುಂತಾದವರ ಜತೆ ತಾಳಮದ್ದಳೆಗಳಲ್ಲೂ ಮೆರೆದರು.

ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಂಘಟನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಅವರು ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಒಂದು ಅವಧಿಗೆ ಕಾರ್ಯ ನಿರ್ವಹಿಸಿದರು.

ಸುಂದರ ರಾವ್‌ ನಿಧನಕ್ಕೆ ಯಕ್ಷಗಾನ ವಲಯ ತೀವ್ರ ಶೋಕ ವ್ಯಕ್ತಪಡಿಸಿದೆ.

ಕುಂಭ್ಳೆ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೆಂದ್ರ ಹೆಗ್ಗಡೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್ , ಡಾ. ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್, ಜಿಲ್ಲಾ ಉಸ್ತುವರಿ ಸಚಿವ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಪ್ರದೀಪ್ ಕುಮಾರ್ ಕಲ್ಲೂರಾ, ಸಹಿತ ಅನೇಕ ಯಕ್ಷಗಾನ ದಿಗ್ಗಜರು, ಸಮಾಜದ ಧುರೀಣರು ಸಂತಾಪ ಸೂಚಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಮಂಗಳೂರು ಪಂಪ್‌ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...