Connect with us

NATIONAL

ಭಾವನ ಜೊತೆ ನಾದಿನಿ ರಾಸಲೀಲೆ : ಅಕ್ಕನ ಸಂಸಾರಕ್ಕೆ ಕೊಳ್ಳಿ ಇಟ್ಟ ಪಾಪಿ ತಂಗಿ..!

Published

on

ಉತ್ತರ ಪ್ರದೇಶ: ಉತ್ತರ ಪ್ರದೇಶದ ಕೆ.ಪ್ರತಾಪಗಢ್ ಎಂಬಲ್ಲಿ ನವ ವಿವಾಹಿತೆಯೊಬ್ಬಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಹೆಸರು ಸುಶೀಲಾ.

ಸಂಗ್ರಾಮ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಯಾಪುರ ಕುಸುವಾಪುರ ಗ್ರಾಮದ ನಿವಾಸಿ ಬಚಾಯ್ ಗೌತಮ್ ಅವರ ಪುತ್ರ ಅಂಕಿತ್ ಕುಮಾರ್ ಮೂರು ವರ್ಷಗಳ ಹಿಂದೆ ಸುಶೀಲಾ ಅವರನ್ನು ವಿವಾಹವಾಗಿದ್ದರು.

ಮೊದ ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು. ಬರುಬರುತ್ತಾ ಸಂಸಾರ ಭಾರವಾಗತೊಡಗಿತು.ಚೆನ್ನಾಗಿಯೇ ಇದ್ದ ಸುಶೀಲಾ ಹಾಗೂ ಅಂಕಿತ್ ನಡುವೆ ಹುಳಿ ಹಿಂಡಿದ್ದು ಸುಶೀಲಾ ತಂಗಿ ಮೋನು.

ಅಕ್ಕನನ್ನು ಮದುವೆಯಾದ ಭಾವನ ಮೇಲೆ ಮೋನು ಮೋಹ ಬೆಳೆಸಿಕೊಂಡುಬಿಟ್ಟಳು. ಅಕ್ಕನ ಜೊತೆ ಭಾವ ಚೆನ್ನಾಗಿರುವುದನ್ನು ನೋಡಿ ಒಳಗೊಳಗೇ ಕುದ್ದು ಕೆಂಡವಾದಳು. ಅವರಿಬ್ಬರನ್ನು ಹೇಗಾದರೂ ಮಾಡಿ ದೂರ ಮಾಡಬೇಕು ಅಂತ ಯೋಜನೆ ಹಾಕಿಕೊಂಡಳು.

ಭಾವ ಅಂಕಿತ್ ಜೊತೆ ಮೋನು ಅನೈತಿಕ ಸಂಬಂಧ ಶುರು ಮಾಡಿಕೊಂಡು ಬಿಟ್ಟಿದ್ದಳು. ಮನೆಯವರ ಕಣ್ಣಿಗೆ ಮಣ್ಣೆರಚಿ ಇಬ್ಬರೂ ರಾಸಲೀಲೆಯಲ್ಲಿ ತೊಡಗುತ್ತಿದ್ದರು. ಆಗಾಗ ಅಕ್ಕನ ಮನೆಗೆ ಬರುತ್ತಿದ್ದ ಮೋನು, ಭಾವನ ಜೊತೆ ಸೇರುತ್ತಿದ್ದಳು.

ತವರಿಗೆ ಹೋದರೂ ಅಷ್ಟೇ, ಅಂಕಿತ್ ಮೋನು ಜೊತೆಯಲ್ಲಿಯೇ ಇರುತ್ತಿದ್ದ. ಒಮ್ಮೆ ಅಂಕಿತ್ ಹಾಗೂ ತನ್ನ ತಂಗಿ ಮೋನು ಏಕಾಂತದಲ್ಲಿದ್ದಾಗ ಅಂಕಿತ್ ಪತ್ನಿ ಸುಶೀಲಾ ನೋಡಿದ್ದಾಳೆ. ಇರಬಾರದ ಸ್ಥಿತಿಯಲ್ಲಿ ಗಂಡ ಹಾಗೂ ತನ್ನ ತಂಗಿ ಇರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದಾಳೆ. ಇದು ತಪ್ಪು, ಇದನ್ನು ಇಲ್ಲಿಗೆ ನಿಲ್ಲಿಸಿ ಅಂತ ಇಬ್ಬರಿಗೂ ಹೇಳಿದ್ದಾಳೆ.

ಇದೇ ಕಾರಣಕ್ಕೆ ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಾ ಇತ್ತು ಎನ್ನಲಾಗಿದೆ. ತಮ್ಮಿಬ್ಬರ ಸಂಬಂಧಕ್ಕೆ ಅಡ್ಡಿಯಾದ ಸುಶೀಲಾಳನ್ನು ಕೊಲ್ಲಲೇ ಬೇಕು ಅಂತ ಅಂಕಿತ್ ಹಾಗೂ ಆತನ ನಾದಿನಿ ಪ್ಲಾನ್ ಮಾಡಿದ್ರು. ಅದರಂತೆ ಫೆಬ್ರವರಿ 9ರ ರಾತ್ರಿ ಆಕೆಯನ್ನು ಮನೆಯಲ್ಲೇ ಕತ್ತು ಹಿಸುಕಿ ಇಬ್ಬರೂ ಸಾಯಿಸಿದ್ದಾರೆ.

ಆ ರಾತ್ರಿಯೇ ಮೋನು ಅಕ್ಕನ ಮನೆಯಿಂದ ಹೊರಟು ಹೋಗಿದ್ದಾಳೆ.ಮರುದಿನ ಬೆಳಗ್ಗೆಯೇ ತನ್ನ ಹೆಂಡತಿ ಅನಾರೋಗ್ಯದಿಂದ ಸತ್ತಿದ್ದಾಗ ಅಂಕಿತ್ ಹೇಳಿದ್ದಾನೆ. ಮನೆಯವರೆಲ್ಲ ಆತನ ಮಾತು ನಂಬಿಕೊಂಡು ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ.

ಆದ್ರೆ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಸುಶೀಲಾ ತಂದೆಗೆ ಇದರಲ್ಲಿ ಸಂಶಯ ಮೂಡಿದೆ. ಆಗ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಶೀಲಾ ತಂದೆ ಕೊಟ್ಟ ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಗ ಭಾವ-ನಾದಿನಿ ಕಳ್ಳಾಟ ಬಯಲಾಗಿದೆ.

ವಿಚಾರಣೆ ವೇಳೆ ಸುಶೀಲಾಳನ್ನು ಕೊಂದಿದ್ದಾಗಿ ಹೇಳಿದ್ದಾರೆ. ಇದೀಗ ಪಾಪಿಗಳು ಜೈಲು ಸೇರಿದ್ದಾರೆ, ಪಾಪದ ಪತ್ನಿ ಬಾರದ ಲೋಕಕ್ಕೆ ಹೊರಟೇ ಹೋಗಿದ್ದಾಳೆ.

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

LATEST NEWS

ಡ್ರಗ್‌ ನೀಡಿ ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ..! ಜಾಲತಾಣದಲ್ಲಿ ಹರಿಬಿಟ್ಟ ಆ ವೀಡಿಯೋ..!

Published

on

ಆಸ್ಟ್ರೇಲಿಯಾ/ಮಂಗಳೂರು: ದಿನೇ ದಿನೇ ದೇಶ ವಿದೇಶಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿರುವುದು ವಿಪರ್ಯಾಸವೇ ಹೌದು. ಈಗಾಗಲೇ ದೇಶದೆಲ್ಲೆಡೆ ಪ್ರಜ್ವಲ್ ರೇವಣ್ಣ ಪೆಂಡ್ರೈವ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಕ್ರೂರ ಕೃತ್ಯಕ್ಕೆ ಜನ ಛೀಮಾರಿ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ಸಂಸದೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ದುರಂತ ಘಟನೆ ನಡೆದಿದೆ.

mp

ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ:

ಆಸ್ಟ್ರೇಲಿಯಾ ಸಂಸದೆ ಬ್ರಿಟ್ಟಾನಿ ಲೌಗಾ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಖುದ್ದು ಸಂಸದೆ ಪೊಲೀಸ್ ಮೆಟ್ಟಿಲೇರಿದ್ದಾರೆ. ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದರ ವೀಡಿಯೋ ಕೂಡಾ ಹರಿದಾಡ್ತಾ ಇದೆ.  ಕ್ವೀನ್ಸ್‌ಲ್ಯಾಂಡ್ ನಗರದ ಲೇಬರ್ ಪಾರ್ಟಿ ಸಂಸದೆ ಬ್ರಿಟ್ಟಾನಿ ಲೌಗಾ ಸೇರಿದಂತೆ ಹಲವು ಮಹಿಳೆಯರು ನೈಟ್‌ಔಟ್‌ ಪಾರ್ಟಿಗೆ ತೆರಳಿದ್ದರು. ಅಲ್ಲಿ ಅವರ ಅರಿವಿಗೆ ಬಾರದೇ ಮಾದಕ ವಸ್ತುಗಳನ್ನು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಲ್ಲದೆ ಸಂಸದೆ ಬ್ರಿಟ್ಟಾನಿ ಮೇಲಿನ ಲೈಂಗಿಕ ದೌರ್ಜನ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ. ಇನ್ನು ಈ ಪಾರ್ಟಿಯಲ್ಲಿದ್ದ ಇತರ ಮಹಿಳೆಯರ ಮೇಲೂ ಇದೇ ರೀತಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ವರದಿಯಾಗಿದೆ.

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ವೈದ್ಯಕೀಯ ತಪಾಸಣೆಗೆ ಒಳಗಾದ ಸಂಸದೆ ಬ್ರಿಟ್ಟಾನಿ:

ತತ್‌ಕ್ಷಣ ಸಂಸದೆ ಯೆಪ್ಪೂನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆಗೆ ಒಳಗಾಗಿದ್ದಾರೆ.ಈ ವೇಳೆ ಅವರ ದೇಹದಲ್ಲಿ ಡ್ರಗ್ಸ್‌ ಇರುವುದು ಕಂಡುಬಂದಿದೆ. ಡ್ರಗ್ಸ್ ಸೇವನೆ ಮಾಡದಿದ್ದರೂ ದೇಹದಲ್ಲಿ ಡ್ರಗ್‌ ಅಂಶ ಕಂಡುಬಂದಿರುವುದು ಹೇಗೆ? ನೈಟ್ ಔಟ್ ನಲ್ಲಿ ಸೇರಿದ್ದ ಎಲ್ಲರಿಗೂ ಮಾದಕ ವಸ್ತುಗನ್ನು ನೀಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯರನ್ನು ಮನಬಂದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಸದೆ ಆರೋಪಿಸಿದ್ದಾರೆ. ಇದೇ ರೀತಿ ನೈಟ್‌ಔಟ್‌ನಲ್ಲಿ ಸೇರಿದ್ದ ಮಹಿಳೆಯರೂ ಕೂಡಾ ಆರೋಪ ಮಾಡಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಮಹಿಳೆಯರಿಗೆ ಅರಿವಿಲ್ಲದೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದ ಕೂಡಲೇ ಕ್ವೀನ್ಸ್‌ಲ್ಯಾಂಡ್ ಪಟ್ಟಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಈ ಕುರಿತಾಗಿ ಆಸ್ಟ್ರೇಲಿಯಾ ಕೆಲ ನಾಯಕರು ಸಂಸದೆ ಬ್ರಿಟ್ಟಾನಿಗೆ ಬೆಂಬಲ ನೀಡಿದ್ದಾರೆ.

 

 

Continue Reading

LATEST NEWS

ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ.! ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Published

on

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದೆ.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ? 

ಸುದ್ದಿ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿ ಬಳಿಕ ಪಕ್ಷದ ಕಾರ್ಯಕರ್ತರ ಜತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.  ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.

ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಆರೋಪ ಮಾಡಿದೆ.

Continue Reading

LATEST NEWS

Trending