Saturday, July 2, 2022

ಧರ್ಮಸ್ಥಳದ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ಮಂಗಳೂರಿನಲ್ಲಿರುವ ಎಸ್.ಡಿ.ಎಂ ಕಾನೂನು ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸ್ವ ಸಹಾಯ ಸಂಘದ ಲಾಭ ಪಡೆದ ಬಡ ಹಾಗೂ ಮಧ್ಯಮ ವರ್ಗದ ಜನರು ಇಂದು ನೆಮ್ಮದಿ ಜೀವನದ ಜೊತೆಗೆ ಆರ್ಥಿಕವಾಗಿ ಸಬಲರಾಗಿದ್ದಾರೆ. ಅದರಲ್ಲೂ ಖಾವಂದರ ಮಾರ್ಗದರ್ಶನವನ್ನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಪಡೆದುಕೊಂಡು ಮುನ್ನಡೆದಿದೆ. ಪ್ರತೀ ವರ್ಷ ಲಾಭಾಂಶದತ್ತ ಸಾಗುತ್ತಿರುವ ಯೋಜನೆಯ ಕೆಲಸ ಕಾರ್ಯಗಳ ಬಗ್ಗೆ ನಮಗೆ ಹೆಮ್ಮೆ ಇದೆ ಎಂದರು. ಇದೇ ವೇಳೆ ಸಂಘದ ಸದಸ್ಯರಿಗೆ ಲಾಭಾಂಶದ ಚೆಕ್ಕನ್ನು ಸಚಿವರು ವಿತರಣೆ ಮಾಡಿದರು.

ಅಧ್ಯಕ್ಷತೆಯನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸತೀಶ್ ಕುಂಪಲ ವಹಿಸಿದ್ದರು. ಶಾಸಕ ಡಿ.ವೇದವ್ಯಾಸ ಕಾಮತ್, ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟ, ಲೀಡ್ ಬ್ಯಾಂಕ್‌ ಜಿಲ್ಲಾ ವ್ಯವಸ್ಥಾಪಕ ಪ್ರವೀಣ್ ಎಂ ಪಿ, ಪ್ರಾದೇಶಿಕ ಕೃಷಿ ಅಧಿಕಾರಿ ಕಿರಣ್, ಅಖಿಲ ಭಾರತ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹಾಬಲ ಚೌಟ, ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್‌ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಉದ್ಯಮಿ ಮನೆಗೆ ನುಗ್ಗಿ ಕುಡುಕನ ದರ್ಬಾರ್…

ವಿಟ್ಲ: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ.ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ ಡ್ರೈವರ್...

ಅಗ್ನಿಪಥ್‌ ರಾಜಕೀಯ ಪ್ರೇರಿತ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಲೋಬೋ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್‌ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು...

ವಿಟ್ಲ: ಅಕ್ರಮ ಗಾಂಜಾ ಸಾಗಾಟ-ಮೂವರ ಬಂಧನ

ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ ನಿವಾಸಿ...