DAKSHINA KANNADA
ಕಸಾಯಿಖಾನೆ ಗುತ್ತಿಗೆ ರದ್ದು: ವಿಶ್ವ ಹಿಂದು ಪರಿಷತ್ ಸ್ವಾಗತ
ಮಂಗಳೂರು: ಕುದ್ರೋಳಿಯ ಕಸಾಯಿಖಾನೆಯಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಟ್ಟಿಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಧಾಗೃಹದ ಗುತ್ತಿಗೆದಾರನ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ.
ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯು ಜು.20ರಂದು ಗುತ್ತಿದಾರನಿಗೆ ನೋಟೀಸು ನೀಡಿ, ಕರ್ನಾಟಕ ಜಾನುವಾರು ಪತ್ತೆ ಪ್ರತಿಬಂಧಕ ಕಾಯಿದೆ ಅನ್ವಯ ತಕ್ಷಣದಿಂದಲೇ ಗುತ್ತಿಗೆ ಆದೇಶವನ್ನು ರದ್ದು ಪಡಿಸಿದೆ ಎಂದು ತಿಳಿಸಿದ್ದಾರೆ. ಇದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಮತ್ತು ತಕ್ಷಣ ಸ್ಪಂದಿಸಿದ ಮಂಗಳೂರು ಮಹಾ ಪೌರರಾದ ಪ್ರೇಮಾನಂದ್ ಶೆಟ್ಟಿಯವರಿಗೆ ಧನ್ಯವಾದ ಸಲ್ಲಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಘಟನೆ ಹಿನ್ನೆಲೆ
ಜು.12ರಂದು ಬೆಂಗಳೂರಿನಿಂದ ಬಂದ ಖಚಿತ ಮಾಹಿತಿ ಮೇರೆಗೆ ಸರ್ಕಾರ ಅನುಮತಿ ಇರುವ ಕುದ್ರೋಳಿಯ ಕಸಾಯಿಖಾನೆಗೆ ಪಶುಸಂಗೋಪನೆ ಇಲಾಖೆಯ ದಿಪೀಕಾ ಡಿಸೋಜಾ ಹಾಗೂ ಆರೋಗ್ಯ ಇಲಾಖೆಯ 04 ಜನ ಸಿಬ್ಬಂದಿ ದಾಳಿ ನಡೆಸಿದ್ದರು. ಈ ವೇಳೆ ಕಸಾಯಿಖಾನೆಯ ಕೊಠಡಿಯೊಂದರಲ್ಲಿ 03 ವರ್ಷ ಪ್ರಾಯದ 3 ಕೋಣಗಳನ್ನು ಗುತ್ತಿಗೆದಾರರು ಕೂಡಿ ಹಾಕಿದ್ದರು. ಕಟ್ಟಿ ಹಾಕಲಾಗಿದ್ದ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ 3 ಕೋಣಗಳನ್ನು ಬಂದರು ಠಾಣಾ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಈ ಬಗ್ಗೆ ನಂ 74/2021 ಕಲಂ 4,5, 7, 12 ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಮತ್ತು 34 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!