Friday, July 1, 2022

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿ ಕೊನೆಯುಸಿರು

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡದಲ್ಲಿ ನಡೆದಿದೆ.‌


ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.

ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು.‌

ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

ಆರಾಧ್ಯ ಆಚಾರ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ಸಾವಿಗೆ ಶಾಲೆಯ ಆಡಳಿತಮಂಡಳಿ, ಶಿಕ್ಷಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥ ಶಾಲೆಗೆ ಗುರುವಾರ ರಜೆ ಸಾರಲಾಗಿತ್ತು.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...