Sunday, May 16, 2021

ನಾಡಿನಲ್ಲಿ ಕೊರೊನಾ ಅಟ್ಟಹಾಸ- ಸಾವಿಗೆ ಬಂದವರಿಗೆ ತಿಂಡಿ– ನಗುಮೊಗದ ಪ್ರಚಾರ ಫ್ಲೆಕ್ಸ್‌..!!?

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿಮೀರಿದೆ.ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಅಪಾರ ಸಾವುನೋವುಗಳು ಸಂಭವಿಸುತ್ತಿವೆ.

ಕೊರೊನಾ ಸೋಂಕಿಗೆ ಜನ ಕಂಗಲಾಗಿದ್ದಾರೆ. ಆದರೆ ಕೆಲವರು ಇದನ್ನೆ ಬಂಡವಾಳ ಮಾಡಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.

ಬೆಂಗಳೂರು ದೇಶದಲ್ಲೇ ಅಧಿಕ ಸಂಖ್ಯೆಯಲ್ಲಿ ಕೊರೊನಾ ಸೋಂಕಿನಿಂದ ಕಂಗೆಟ್ಟಿದ್ದು ರಾಜ್ಯ ರಾಜಧಾನಿಯಲ್ಲಿ ಸಾವಿನ ಸುನಾಮಿ ಎದ್ದಿದೆ.

ಬೆಂಗಳೂರು ನಗರದ ಹೊರವಲಯದಲ್ಲಿ ಕೋವಿಡ್‌ ಶವಗಳ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ಬರುವವರಿಗೆ ಕಾಫಿ, ತಿಂಡಿಯ ವ್ಯವಸ್ಥೆ ಮಾಡಿದ್ದನ್ನು ಪ್ರಚಾರಕ್ಕೆ ಬಳಸಿಕೊಂಡ ಬಿಜೆಪಿ ನಾಯಕರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಗಿಡ್ಡೇನಹಳ್ಳಿ ಬಳಿ ಹಾಕಲಾಗಿದ್ದ ಫ್ಲೆಕ್ಸ್‌ನಲ್ಲಿ ‘ಕೋವಿಡ್‌ನಿಂದ ಸಾವಿಗೀಡಾದವರವನ್ನು ‘ಸಕಲ ಸರ್ಕಾರಿ ಮರ್ಯಾದೆಯೊಂದಿಗೆ’ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ಕೆ ಬಂದವರಿಗೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ ವ್ಯವಸ್ಥೆ ಮಾಡಲಾಗಿದೆ’ ಎಂದು ಫ್ಲೆಕ್ಸ್‌ನಲ್ಲಿ ಬರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಆರ್. ಅಶೋಕ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನಗುಮೊಗದ ಭಾವಚಿತ್ರವನ್ನು ಹಾಕಲಾಗಿದೆ.

ಈ ಫ್ಲೆಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕರು ವ್ಯಾಪಕ ಟೀಕೆ ಮಾಡಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಾವಿನ ಸಂದರ್ಭದಲ್ಲಿಯೂ ಇಂತಹ ಪ್ರಚಾರ ಬೇಕಾ? ಹಾಸಿಗೆ ನೀಡದೆ ಜನರನ್ನು ಸಾಯಿಸುವ ಯೋಜನೆಗೆ ಪ್ರಚಾರ ಬೇರೆ ಕೇಡು’ ಎಂದು ಹಲವರು ಪಕ್ಷಭೇದ ಮರೆತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಈ ಫ್ಲೆಕ್ಸ್‌ ಅನ್ನು ತೆರವುಗೊಳಿಸಲಾಯಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...