LATEST NEWS
25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ಹಾವು: 5 ಮಂದಿ ಸಾವು
ತುಮಕೂರು: ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದದು, ಇದರಲ್ಲಿ ಐವರು ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ಹೀಗಾಗಿ, ಉಳಿದಿದ ಕುಟುಂಬಸ್ಥರು ತಮ್ಮ ಹೊಲಗದ್ದೆಗೆ ಹೋಗಲು ಭಯ ಪಡುತ್ತಿದ್ದಾರೆ.
ಇತ್ತೀಚೆಗಷ್ಟೇ ಈ ಕುಟುಂಬದ ಗೋವಿಂದ ರಾಜು ಎಂಬುವರು ಹೊಲದಲ್ಲಿ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದರು.
ಹೊಲದಲ್ಲಿ ಮೆಣಸಿನ ಗಿಡ ಬೆಳೆದಿದ್ದರೂ ಅದರ ಸಮೀಪ ಸುಳಿಯದಂತಾಗಿದೆ. ಇನ್ನೊಂದೆಡೆ, ಮಾನಸಿಕವಾಗಿ ಇಡೀ ಕುಟುಂಬವೇ ಜರ್ಜರಿತವಾಗಿದೆ.
ಅಲ್ಲದೇ, ಕೂಲಿ ಕಾರ್ಮಿಕರು ಸಹ ಇವರ ಹೊಲಗದ್ದೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ನಿರಂತರವಾಗಿ ಹಾವಿನ ದಾಳಿಗೆ ಒಳಗಾಗುತ್ತಿರುವ ಈ ಕುಟುಂಬ, ರಾಹು ಕೇತು ಪೂಜೆಯನ್ನು ಸಹ ಮಾಡುತ್ತದೆ. ಆದರೆ, ಯಾವುದೂ ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ.
LATEST NEWS
ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಪುತ್ತೂರು : ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.
ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.
ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
LATEST NEWS
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM7 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!