Connect with us

    LATEST NEWS

    ಹಾವು ಕಚ್ಚಿ… ಮೂವರು ಸಾ*ವು; ಇಬ್ಬರು ಗಂ*ಭೀರ

    Published

    on

    ಮಂಗಳೂರು/ಉತ್ತರಪ್ರದೇಶ: ಕಳೆದ ಮೂರೂ ದಿನಗಳಲ್ಲಿ ಐದು ಮಂದಿಗೆ ಹಾವು ಕಚ್ಚಿ ಮೂವರು ಮೃ*ತಪಟ್ಟು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಯಲ್ಲಿ ಸಾ*ವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಹಾಪುರ್‌ನಲ್ಲಿ ಬೆಳಕಿಗೆ ಬಂದಿದೆ.

    ಇಲ್ಲಿನ ಗರ್ಮುಕ್ತೇಶ್ವರ ತೆಹಸಿಲ್‌ನ ಸದರ್‌ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದ ಜನ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿ ನಿರ್ಮಾಣವಾಗಿದೆ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

     

    ಕಳೆದ ಸೋಮವಾರ (ಅ.20) ದಂದು ಹಾವಿನ ದಾಳಿ ಆರಂಭವಾಗಿದ್ದು ಸದರ್‌ಪುರ ಗ್ರಾಮದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದ ವೇಳೆ ಮೂವರಿಗೂ ಹಾವು ಕಚ್ಚಿದೆ ವಿಚಾರ ಗೊತ್ತಾಗುತ್ತಿದ್ದಂತೆ ಕೂಡಲೇ ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಾರಿಯಾಗದೆ ಮೂವರು ಮಂಗಳವಾರ (ಅ.21) ರಂದು ಕೊನೆಯುಸಿರೆಳೆದಿದ್ದಾರೆ.

    ಇದಾದ ಬಳಿಕ ಬುಧವಾರ ಮತ್ತೊಂದು ಘಟನೆಯಲ್ಲಿ ಇಬ್ಬರಿಗೆ ಹಾವು ಕಚ್ಚಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ, ಸದ್ಯ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    LATEST NEWS

    ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ವಿರುದ್ಧ ಪೊಲೀಸರಿಂದಲೇ ದೂರು

    Published

    on

    ಲೇಖಕಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯೊಂದರ ಸಂಬಂಧ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರ ಬಂಧನದ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಗಾಯಗೊಳಿಸಿದ ಬಗ್ಗೆ ಪೊಲೀಸರು ಮತ್ತೊಂದು ಕೇಸು ದಾಖಲಿಸಿದ್ದಾರೆ.

    ಡಾ.ಲಕ್ಷ್ಮೀ ಜಿ.ಪ್ರಸಾದ್ ಹಾಗೂ ಅವರ ಪುತ್ರ ಅರವಿಂದ್‌ ವಿರುದ್ಧ ಜ್ಞಾನಬಾರತಿ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ. ಸಾಹಿತಿ ಪವನಜ ಎಂಬವರು ನೀಡಿದ್ದ ಮಾನನಷ್ಟ ಮೊಕದ್ದಮೆಯ ಹಿನ್ನಲೆಯಲ್ಲಿ ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಬೆಂಗಳೂರು 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಬಂಧನ ಮಾಡಲು ಹೋದ ವೇಳೆ ತಾಯಿ ಹಾಗೂ ಮಗ ಅಡ್ಡಿ ಪಡಿಸಿದಾಗಿ ಎಫ್‌ಐಆರ್ ದಾಖಲಾಗಿದೆ.

    ಅಕ್ಟೋಬರ್ 20 ರಂದು ಸಂಜೆ ಈ ಘಟನೆ ನಡೆದಿದ್ದು, ಜ್ಞಾನಬಾರತಿ ಪೊಲೀಸ್ ಠಾಣೆಯ ಮಹಿಳಾ ಸಬ್‌ ಇನ್ಸ್‌ಪೆಕ್ಟರ್ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾದೀಶರ ಮುಂದೆ ಹಾಜರಿ ಪಡಿಸುವ ಮೊದಲು ಆರೋಪಿ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾಗಿ ಜ್ಞಾನಬಾರತಿ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಸುರೇಖ ಹಾಗೂ ಇನ್ನಿಬ್ಬರು ಸಿಬ್ಬಂದಿ ದೂರು ನೀಡಿದ್ದಾರೆ.

    ಸಾಹಿತಿಯಾಗಿರುವ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರು ಸಾಮಾಜಿಕ ಜಾಲತಾಣವೊಂದರಲ್ಲಿ ಅವಮಾನ ಮಾಡಿದ್ದಾಗಿ ಸಾಹಿತಿ ಪವನಜ ಎಂಬವರು ನ್ಯಾಯಾಲಯದಲ್ಲಿ ದೂರು ದಾಖಲಿಸಿ ಬಂಧನ ವಾರೆಂಟ್ ಮಾಡಿಸಿದ್ದರು. ಆದರೆ ಪೊಲೀಸ್ ಠಾಣೆಯಲ್ಲಿ ಮಗನನ್ನು ಕರೆಯಿಸಿ ಗಲಾಟ ಮಾಡಿ ಬೆದರಿಕೆ ಹಾಕಿ ಹೊಡೆದು ಗಾಯ ಮಾಡಿದ್ದಾರೆ ಎಂದು ಪೊಲೀಸರೇ ಕೇಸು ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Zomato ಪ್ರತಿ ಆರ್ಡರ್ ಗೆ ₹10 ಶುಲ್ಕ ಹೆಚ್ಚಳ!

    Published

    on

    ನವದೆಹಲಿ: ಆನ್ ಲೈನ್ ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್ ಫಾರ್ಮ್ ಫೀ) ₹10 ಹೆಚ್ಚಳ ಮಾಡಿದೆ.

    ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ ಹೆಚ್ಚಿರುವುದರಿಂದ ಶುಲ್ಕವನ್ನು ಏರಿಕೆ ಮಾಡಲಾಗಿದ್ದು, ಸದ್ಯ ದೆಹಲಿಯಲ್ಲಿ ₹10 ಹೆಚ್ಚು ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ. ಬೇರೆ ಬೇರೆ ನಗರದಲ್ಲಿ ಶುಲ್ಕದ ದರ ಬದಲಾಗಲಿದೆ ಎಂದಿರುವ ಕಂಪನಿ ಯಾವ ನಗರದಲ್ಲಿ ಎಷ್ಟು ಶುಲ್ಕ ಇರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಿಲ್ಲ.

    ಕಳೆದ ಏಪ್ರಿಲ್ ತಿಂಗಳಿನಲ್ಲಿಯೂ ಜೊಮಾಟೊ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು ₹4 ಏರಿಕೆ ಮಾಡಿತ್ತು. ಈಗ ಮತ್ತೆ ದರ ಏರಿಸಿ ಪ್ರಕಟಣೆ ಹೊರಡಿಸಿದೆ.

    Continue Reading

    LATEST NEWS

    ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15,000 ರೂ. ದಂಡ

    Published

    on

    ಚೆನ್ನೈ: ಬರೀ 50 ಪೈಸೆ ಅಲ್ವಾ ಎಂದು ಗ್ರಾಹಕನ ಬೇಡಿಕೆ ನಿರ್ಲಕ್ಷಿಸಿದ ಅಂಚೆ ಕಚೇರಿಯೊಂದಕ್ಕೆ 15,000 ರೂ. ದಂಡ ವಿಧಿಸಿದ ಅಪರೂಪದ ಘಟನೆ ನಡೆದಿದೆ.

    ಚೆನ್ನೈನ ಮಾನ್ಯ ಎಂಬುವರು 2023ರ ಡಿಸೆಂಬರ್‌ನಲ್ಲಿ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್ ಪೋಸ್ಟ್ ಮಾಡಲು 30 ರೂ. ನೀಡಿದ್ದರು. ಅದಕ್ಕೆ ನಿಗದಿತ ಶುಲ್ಕ 29.50 ರೂ. ಆಗಿತ್ತು. ಬಾಕಿ 50 ಪೈಸೆ ಕೊಡಲು ಸಿಬಂದಿ ಒಪ್ಪಿಲ್ಲ. ನಮ್ಮ ಕಂಪ್ಯೂಟರ್ ವ್ಯವಸ್ಥೆಯಲ್ಲಿ ಮೊತ್ತ ರೌಂಡಾಫ್ ಆಗಿದ್ದು, 30 ರೂ. ತೋರಿಸುತ್ತಿದ್ದು ಅಷ್ಟನ್ನೇ ಪಾವತಿ ಮಾಡಿ ಎಂದರು. ಅದಕ್ಕೆ ಒಪ್ಪದ ಮಾನ್ಯ ಯುಪಿಐ ಮೂಲಕ ನಿಗದಿತ ಶುಲ್ಕ ಪಾವತಿ ಮಾಡುತ್ತೇನೆ ಎಂದರೂ ಸಿಬ್ಬಂದಿ ಒಪ್ಪಿರಲಿಲ್ಲ.

    ಅಂಚೆ ಕಚೇರಿ ವಿರುದ್ಧ ಚೆನ್ನೈ ಜಿಲ್ಲಾ ಗ್ರಾಹಕ ವೇದಿಕೆಗೆ ದೂರು ನೀಡಿ, ಪ್ರತಿ ದಿನ ರೌಂಡಾಫ್ ಮಾಡುವುದರಿಂದ ಬೃಹತ್ ಮೊತ್ತ ಸಂಗ್ರಹಿಸಿದಂತಾಗುತ್ತದೆ. ಇದು ಕಪ್ಪುಹಣಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಮತ್ತು ಸರಕಾರಕ್ಕೆ ಬರುವ ಜಿಎಸ್‌ಟಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ವೇದಿಕೆ ಅಂಚೆ ಇಲಾಖೆಗೆ 15,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    Continue Reading

    LATEST NEWS

    Trending