DAKSHINA KANNADA
ಸ್ನೇಕ್ ಪ್ಲಾಂಟ್.. ಇದು ನಿಮ್ಮ ಮನೆಯಲ್ಲಿದೆಯಾ..? ಇದ್ರೆ ಏನಾಗೊತ್ತೆ ಗೊತ್ತಾ…?
Published
8 months agoon
By
Adminಸ್ನೇಕ್ ಪ್ಲಾಂಟ್… ಇಂತಹ ಒಂದು ಗಿಡದ ಬಗ್ಗೆ ಬಹುತೇಕ ಜನರಿಗೆ ಗೊತ್ತಿಲ್ಲದೇ ಇದ್ರೂ ಹೆಚ್ಚಿನ ಮನೆಯಲ್ಲಿ ಇದನ್ನ ಅಲಂಕಾರಿಕ ಗಿಡವಾಗಿ ಬೆಳೆಸ್ತಾ ಇದ್ದಾರೆ. ಹಾಗಂತ ಇದು ಹಾವುಗಳಿಂದ ರಕ್ಷಣೆ ಪಡೆಯಲಾಗಲಿ, ಹಾವುಗಳಿಗೆ ರಕ್ಷಣೆ ನೀಡುವುದಕ್ಕಾಗಿ ಈ ಗಿಡ ಉಪಯೋಗಕ್ಕೆ ಬರೋದಿಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ತಮ್ಮ ಮನೆಯಲ್ಲಿ ಈ ಸ್ನೇಕ್ ಪ್ಲಾಂಟ್ ಬೆಳೆಸಲು ಆರಂಭಿಸಿದ್ದಾರೆ.
ಮನೆಯಲ್ಲಿ ತೋಟಗಾರಿಕೆ ಟಿಪ್ಸ್‌ಗಳನ್ನು ಹೆಚ್ಚಿನ ಜನರು ಇಷ್ಟಪಡುತ್ತಾರೆ. ಕೆಲವರು ಮನೆಯ ಅಲಂಕಾರಕ್ಕಾಗಿ ಮಾತ್ರ ಒಳಾಂಗಣ ಸಸ್ಯಗಳನ್ನು ನೆಡುತ್ತಾರೆ. ಇನ್ನು ಕೆಲವರು ವಾಸ್ತು ಸಲಹೆಗಳು ಮತ್ತು ಅವರ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ಗಿಡಗಳನ್ನು ನೆಡುತ್ತಾರೆ. ಸ್ನೇಕ್ ಪ್ಲಾಂಟ್ ಕೂಡ ಅಂತಹ ಒಂದು ಆರೋಗ್ಯಕರ ವಾತಾವರಣ ನೀಡಬಲ್ಲ ಒಂದು ಗಿಡ.
ಮನೆ ಮುಂದೆ ತುಳಸಿ ಗಿಡ ನೆಟ್ಟರೆ ಅದು ಶುದ್ಧ ಆಮ್ಲಜನಕ ನೀಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಅದರಷ್ಟೇ ಶುದ್ದ ಆಮ್ಲಜನಕವನ್ನು ಪಡೆಯಲು ಜನ ಈ ಸ್ನೇಕ್ ಪ್ಲಾಂಟ್ ಬೆಳೆಯುತ್ತಿದ್ದಾರೆ. ಇದರ ಎಲೆಗಳು ಹಸಿರು ಬಣ್ಣದಲ್ಲಿ ಮತ್ತು ಕತ್ತಿ ಆಕಾರದಲ್ಲಿರುತ್ತವೆ. ನೋಡಲು ಇದು ಕೃತಕ ಸಸ್ಯದಂತೆ ಕಾಣುತ್ತದೆ. ಸದ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಈ ಸ್ನೇಕ್ ಪ್ಲಾಂಟ್ ಹೆಚ್ಚಾಗಿ ಮಾರಾಟವಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನರು ಈ ಗಿಡಗಳನ್ನು ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ. ಯಾಕೆಂದರೆ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿಡಲು ಹಾಗೂ ಒಳ್ಳೆಯ ಆಮ್ಲಜನಕವನ್ನು ಪಡೆಯಲು ಇದು ಬಹಳಷ್ಟು ಸಹಕಾರಿಯಾಗಿದೆ.
ಸ್ನೇಕ್ ಪ್ಲಾಂಟ್‌ನಿಂದ ಪರಿಸರದ ಮೇಲಾಗುವ ಪರಿಣಾಮ
ಒಳಾಂಗಣ ಗಾಳಿಯನ್ನು ಅಂದರೆ ಮನೆಯ ಒಳಗಿನ ಗಾಳಿಯನ್ನು ಫಿಲ್ಟರ್ ಮಾಡಲು ಸ್ನೇಕ್ ಪ್ಲಾಂಟ್ ಸಹಾಯ ಮಾಡುತ್ತದೆ. ರಾತ್ರಿಯಲ್ಲಿ ಇಂಗಾಲದ ಡೈಆಕ್ಸೈಡ್ ಅನ್ನು ಆಮ್ಲಜನಕವನ್ನಾಗಿ ಪರಿವರ್ತಿಸುವ ಕೆಲವೇ ಸಸ್ಯಗಳಲ್ಲಿ ಇದೂ ಕೂಡ ಒಂದು. ಮಲಗುವ ಕೋಣೆ ಅಲಂಕಾರಕ್ಕೆ ಇದು ಸೂಕ್ತವಾದ ಸಸ್ಯವೆಂದು ಪರಿಗಣಿಸಲಾಗಿದೆ. ಇದು ಅಶುದ್ಧ ಗಾಳಿಯನ್ನು ತೆಗೆದು ಹಾಕಿ ಶುದ್ದ ಗಾಳಿಯನ್ನು ನೀಡುತ್ತದೆ.
ವಾಸ್ತು ಗಿಡವಾಗಿಯೂ ಈ ಸ್ನೇಕ್ ಪ್ಲಾಂಟ್ ಬಳಕೆ
ಈ ಗಿಡಕ್ಕೆ ವಾಸ್ತು ಶಾಸ್ತ್ರದಲ್ಲಿ ವಿಶೇಷವಾದ ಮಹತ್ವ ನೀಡಲಾಗಿದ್ದು, ಇದನ್ನು ಮನೆಯ ನಿರ್ಧಿಷ್ಟ ಸ್ಥಳದಲ್ಲಿ ಇಟ್ಟರೆ ಅದೃಷ್ಟವೂ ಖುಲಾಯಿಸುತ್ತದೆ ಅನ್ನೋ ನಂಬಿಕೆ ಉತ್ತರ ಭಾರತೀಯರಲ್ಲಿ ಇದೆ. ಮನೆಯಲ್ಲಿನ ನೆಗಟಿವ್ ಎನರ್ಜಿಯನ್ನು ಹೊರ ಹಾಕಿ ಪಾಸಿಟಿವ್ ಎನರ್ಜಿ ನೀಡುತ್ತದೆ ಅನ್ನೋ ನಂಬಿಕೆ ಕೂಡಾ ಇದೆ. ನಮ್ಮ ಸುತ್ತಮುತ್ತ ಈ ಗಿಡ ಸಾಕಷ್ಟು ಕಡೆಯಲ್ಲಿ ಕಂಡು ಬರುತ್ತದೆಯಾದ್ರೂ ಇದರ ವಿಶೇಷ ಗುಣ ಗೊತ್ತಿಲ್ಲದ ಕಾರಣ ಸದ್ಯ ಬೇಲಿ ಬದಿಯಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.
Baindooru
ಕದ್ರಿ ಪಾರ್ಕ್‌ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್‌ನಿಂದ ಲಾಂಛನ ಬಿಡುಗಡೆ
Published
2 hours agoon
22/11/2024ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಬಿಡುಗಡೆ ಗೊಳಿಸಿದರು.
ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಮತ್ತು ಇದರ ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶವನ್ನು ಇಟ್ಟುಕೊಂಡು ಈ ಕಲಾ ಪರ್ಬವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಮೂರ್ತ – ಅಮೂರ್ತ, ಹಿರಿಯ – ಕಿರಿಯ ಎಂಬ ಯಾವುದೇ ಅಂತರ, ಬೇಧ ಇಲ್ಲದೇ ಎಲ್ಲಾ ಕಲಾವಿದರು ತಮ್ಮ ಕಲಾ ಪ್ರಕಾರಗಳನ್ನು ಕಲಾ ವೀಕ್ಷಕರಿಗೆ, ಕಲಾಭಿಮಾನಿಗಳಿಗೆ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸುವುದು ಪ್ರಮುಖವಾಗಿರುತ್ತದೆ. ಚಿತ್ರ ಕಲೆ, ಶಿಲ್ಪಕಲೆ ಮತ್ತು ನೃತ್ಯ ಪ್ರಕಾರಗಳ ವಿವಿಧ ರೂಪಗಳ ಅಭಿವ್ಯಕ್ತ ಹರಿವು, ಸೆಳವುಗಳ ಮೂಲಕ ಮೇಳದ ರೂಪದಲ್ಲಿ ಇಲ್ಲಿ ಆಗುತ್ತಿರುವುದು ಕಲಾ ಸಂಭ್ರಮ ಮತ್ತು ಕಲಾ ಜಂಗಮ.
ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಇರುವುದು. ಕಲಾಕೃತಿಗಳನ್ನು ಮಿತ ದರದಲ್ಲಿ ಖರೀದಿಸುವವರಿಗೆ ಉತ್ತಮ ಅವಕಾಶವಿದು.
ಲಾಂಛನದ ಅರ್ಥ :
ಈ ಕಲಾಪರ್ಬದ ಲಾಂಛನವು ಒಂದು ಸಂದೇಶವನ್ನು ನೀಡುತ್ತಿದೆ. ಇಲ್ಲಿ ಒಂದು ಕ್ಯಾನ್ವಾಸ್ ನಲ್ಲಿ 3 ಬಣ್ಣಗಳ ಸಂಗಮ ( K ) ಇಲ್ಲಿ ಕ್ಯಾನ್ವಾಸ್ ಕಲಾಕೃತಿಯ ಪ್ರತೀಕವಾದರೂ ನಮ್ಮ ಸಮಾಜವೇ ಒಂದು ರೀತಿಯ ಕ್ಯಾನ್ವಾಸ್ ಎಂಬ ಚೌಕಟ್ಟು. ಈ ಬದುಕಿನ ಚೌಕಟ್ಟಿನ ಒಳಗೆ ಎಲ್ಲರದ್ದೂ ಒಂದು ರೀತಿಯ ಬಣ್ಣದ ಬದುಕು. ನಮ್ಮ ನಿತ್ಯ ದಿನಚರಿ, ಚಟುವಟಿಕೆಗಳಿಂದ ಸಮಾಜಕ್ಕೆ, ಪ್ರಕೃತಿಗೆ ಒಂದು ಕೊಡುಗೆಯನ್ನು ನೀಡಬೇಕಾದರೆ ನಮ್ಮ ಸೀಮಿತ ಚೌಕಟ್ಟಿನಿಂದ ವಾದ ಮತ್ತು ಪಾದಗಳನ್ನು ಹೊರಗಿಡಲೇ ಬೇಕು. ಇದರ ಪ್ರತಿ ರೂಪವಾಗಿ ಕ್ಯಾನ್ವಾಸ್ ನಿಂದ ಒಂದು ಕಡೆ ಕುಂಚ ( ವಾದ…ತತ್ವ, ಸಿದ್ದಾಂತ ) ಹೊರಗೆ ಬಂದಿರುತ್ತದೆ. ಇನ್ನೊಂದು ಕಡೆ ಹೆಜ್ಜೆ ( ಪಾದ…ನಡೆ, ನಡತೆ ) ಹೊರಗೆ ಬಂದಿರುತ್ತದೆ.
ಅಂದರೆ ಕಲಾಕ್ಷೇತ್ರದಲ್ಲಿ ಆಗಲಿ, ಸಮಾಜದಲ್ಲಾಗಲಿ ನಾವು ನಮ್ಮದೇ ಸೀಮಿತ ಬಣ್ಣ, ಬದುಕು ಎಂಬ ಚೌಕಟ್ಟಿನಲ್ಲಿ ಕಂಡು ಕೊಂಡದ್ದಕ್ಕಿಂತ, ನಾವು ಚೌಕಟ್ಟು ಮೀರಿ ಹೊರ ಆಯಾಮವನ್ನು ತಲುಪಲು ಪ್ರಯತ್ನಿಸಿದರೆ ( ಖಾಸಗಿ ಬದುಕಿನಿಂದ ಸಾಮಾಜಿಕ ಬದುಕಿಗೆ ) ಉತ್ತಮವಾದ ಕಲಾಕೃತಿಯನ್ನು ಮತ್ತು ಸಮಾಜವನ್ನು ರೂಪಿಸಬಹುದು ಎಂಬುದು ಈ ಲಾಂಛನದ ಒಳಾರ್ಥ.
ಅದೇ ರೀತಿ ಕರ ಪತ್ರದಲ್ಲಿ ಬಣ್ಣದ ಹುಡುಗಿಯೊಬ್ಬಳು ಸಂಭ್ರಮಿಸುತ್ತಿದ್ದಾಳೆ. ಆಕೆಯ ಮುಖ ಬಣ್ಣದ ಪಾಲೇಟ್ ಮತ್ತು ನೀರಿನ ಹೂಜಿ, ಕೈ, ಕಾಲುಗಳು ಕುಂಚ ( ಚಿತ್ರ ಕಲಾ ಮೇಳ ಆಗಿರುವುದರಿಂದ ) ಕೆಳಗಿನ ಪಾದದ ಕುಂಚಗಳಲ್ಲಿ ಹೆಜ್ಜೆ – ಗೆಜ್ಜೆ ( ಈ ಪರ್ಬದಲ್ಲಿ ನೃತ್ಯವೂ ಇರುವುದರಿಂದ ) ಉಟ್ಟ ಲಂಗವು ಶಿಲಾ ಹಾಸುಗಳ ಪ್ರತಿರೂಪ ( ಈ ಪರ್ಬದಲ್ಲಿ ಶಿಲ್ಪ ಕಲೆಯೂ ಇರುವುದರಿಂದ ) ಎದೆ ಭಾಗದಲ್ಲಿ ಕ್ಯಾಮೆರಾ ಲೆನ್ಸ್ ( ಈ ಪರ್ಬದಲ್ಲಿ ಛಾಯಾ ಚಿತ್ರ ಪ್ರದರ್ಶನವೂ ಇರುವುದರಿಂದ ) ಇದೆಲ್ಲರ ಪ್ರತೀಕವಾಗಿ ಈ ಚಿತ್ರವನ್ನು ರಚಿಸಲಾಗಿದೆ.
ಬನ್ನಿ ಕಲಾ ಪರ್ಬ ನಿಮ್ಮದೇ…ಬಣ್ಣದ ಲೋಕದಲ್ಲಿ ಸಂಭ್ರಮಿಸೋಣ. ನಿಮ್ಮ ಬೆಂಬಲವೇ ಈ ಪರ್ಬದ ಯಶಸ್ಸು
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
21 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
LATEST NEWS
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ