Connect with us

LATEST NEWS

ಭಾರೀ ಹಿಮಪಾತ; ಕಾಶ್ಮೀರದಲ್ಲಿ ವಿಮಾನಗಳು ರದ್ದು, ರೈಲು ಸೇವೆ ಸ್ಥಗಿತ

Published

on

ನವದೆಹಲಿ: ಭಾರೀ ಹಿಮಾಪಾತದ ನಂತರ ಕಾಶ್ಮೀರದ ಜನ ದೇಶದ ಇತರ ಭಾಗಗಳಿಂದ ಸಂಪರ್ಕ ಕಡಿದುಕೊಂಡಿದ್ದಾರೆ. ಪ್ರವಾಸಿಗರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಹಾಗೂ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಕಾಶ್ಮೀರಕ್ಕೆ ಆಗಮಿಸಿದ ಪ್ರವಾಸಿಗರು ತೀವ್ರ ಹಿಮಪಾತದಿಂದ ಸಿಕ್ಕಿಬಿದ್ದರು.

ರಸ್ತೆ ಮುಚ್ಚಿದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಪಾಂಪೋರ್ ಮತ್ತು ಖಂಬಲ್ ಪ್ರದೇಶಗಳ ನಡುವೆ ಜಮ್ಮು ಕಡೆಗೆ ಹೋಗುವ ಪ್ರಯಾಣಿಕರನ್ನು ಆಡಳಿತವು ತಡೆದಿದೆ ಮತ್ತು ಶ್ರೀನಗರಕ್ಕೆ ಮರಳಲು ಸಲಹೆ ನೀಡಿದೆ. ಆದಾಗ್ಯೂ, ಇಂದು ರಾತ್ರಿ ಅಥವಾ ನಾಳೆ ರೈಲು ಬುಕಿಂಗ್ ಹೊಂದಿರುವ ಅನೇಕ ಪ್ರವಾಸಿಗರು ಜಮ್ಮುವನ್ನು ತಲುಪುವ ಮಾರ್ಗವನ್ನು ಕಂಡುಕೊಳ್ಳುವ ಭರವಸೆಯಲ್ಲಿ ರಸ್ತೆಗಳಲ್ಲಿ ಸಿಲುಕಿಕೊಂಡಿದ್ದರು.

ಬರೇಲಿಯ ಪ್ರವಾಸಿ ಮಂಜು ದೇವಿ ತಮ್ಮ ಅನುಭವವನ್ನು ಹಂಚಿಕೊಂಡರು. ಈ ಹಿಮಭರಿತ ಕಣಿವೆಗಳು ಸುಂದರವಾಗಿ ಕಾಣುತ್ತವೆ. ಆದರೆ ಈಗ ನಾವು ಸಿಲುಕಿಕೊಂಡಿದ್ದೇವೆ. ನಾವು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ನಲ್ಲಿ ಇದ್ದೇವೆ ನಮ್ಮ ರೈಲು ಬುಕ್ ಆಗಿದೆ. ಮತ್ತು ದೊಡ್ಡ ಸಮಸ್ಯೆಯೆಂದರೆ ನಮ್ಮೊಂದಿಗೆ ಸಣ್ಣ ಮಕ್ಕಳಿದ್ದಾರೆ. ಮತ್ತು ನಮಗೆ ಆಹಾರ ಸಿಗುವುದಿಲ್ಲ. ಆಡಳಿತವು ತ್ವರಿತವಾಗಿ ಕಾರ್ಯನಿರ್ವಹಿಸಬೇಕಾಗಿದೆ.” ಎಂದರು.

ಮೀರತ್ ನ ಗುಂಪು ಸೇರಿದಂತೆ ಎರಡು ದಿನಗಳ ಕಾಲ ಕಾಶ್ಮೀರಕ್ಕೆ ಭೇಟಿ ನೀಡಲು ಯೋಜಿಸಿದ್ದ ಅನೇಕ ಪ್ರವಾಸಿಗರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 13 ಜನರೊಂದಿಗೆ ಒಂದು ಗುಂಪು ಬೆಳಿಗ್ಗೆ 10 ಗಂಟೆಯಿಂದ ಸಿಕ್ಕಿಬಿದ್ದಿತ್ತು.

LATEST NEWS

ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್‌ಗಳು ದಾಖಲು

Published

on

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

 

ಹೌದು, ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ದಾಖಲಾದರೆ, ಡಿಸೆಂಬರ್ 31ರ ರಾತ್ರಿ ಕೇವಲ 513 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಸ ವರ್ಷ 2025 ರನ್ನು ರಾಜ್ಯದ ಜನರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಜನ ಜಂಗುಳಿ ನೆರೆದಿತ್ತು. ಇನ್ನೂ ಇಯರ್ ಎಂಡ್ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟವಾಗಿತ್ತು, ಅಬಕಾರಿ ಇಲಾಖೆಗೆ ಭಾರೀ ಆದಾಯ ತಂದುಕೊಟ್ಟಿದೆ.

Continue Reading

BIG BOSS

ಮೂರು ತಿಂಗಳು ದೂರ ಇದ್ದ ಅಕ್ಕನ ಗುರುತಿಸಲೇ ಇಲ್ಲ ತಮ್ಮ; ಮೋಕ್ಷಿತಾ ಕಣ್ಣೀರಿಗೆ ಕರುಳು ಕಿವುಚುತ್ತೆ

Published

on

ಕಿಚ್ಚ ಸುದೀಪ್ ಅವರು ನಡೆಸಿ ಕೊಡುವ ಕನ್ನಡದ ಬಿಗ್ ರಿಯಾಲಿಟಿ ಶೋ ಕನ್ನಡಿಗರ ಮನ ಗೆದ್ದಿದೆ. ವಾರದಿಂದ ವಾರಕ್ಕೆ ಹೆಚ್ಚು ಹೆಚ್ಚು ಜನರನ್ನು ಸೆಳೆಯುತ್ತ ಯಶಸ್ವಿಯಾಗಿ ಸಾಗುತ್ತಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳ ಕುಟುಂಬಸ್ಥರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಇದೇ ರೀತಿ ಮೋಕ್ಷಿತಾಗೆ ಬಿಗ್​ಬಾಸ್ ಬಿಗ್​ ಸರ್​ಪ್ರೈಸ್​ ಕೊಟ್ಟಿದ್ದಾರೆ. ಆದರೆ ತಮ್ಮನನ್ನು ನೋಡಿ ಅಕ್ಕ ಮೋಕ್ಷಿತಾ ಕಣ್ಣೀರು ಹಾಕಿರುವುದು ಎಲ್ಲರ ಕರುಳು ಚುರುಕ್ ಅನ್ನುತ್ತೆ.

ಹೊಸ ವರ್ಷ ಬಿಗ್​ಬಾಸ್​ ಮನೆಯಲ್ಲೂ ಅದ್ಧೂರಿಯಾಗಿ ಸೆಲೆಬ್ರೆಷನ್ ಮಾಡಲಾಗಿದೆ. ಎಲ್ಲ ಸ್ಪರ್ಧಿಗಳು ಸಖತ್ ಆಗಿಯೇ ಕುಣಿದು ಕುಪ್ಪಳಿಸುತ್ತಿದ್ದರು. ಮೋಕ್ಷಿತಾ ಕೂಡ ನಾನೇನು ಕಮ್ಮಿ ಇಲ್ಲ ಎನ್ನುವಂತೆ ಬಿಗ್​ಬಾಸ್​ಗೆ ಬಂದ ಮೇಲೆ ಪ್ರೀತಿಯ ಸಹೋದರನ್ನು ಮರೆತು ಡ್ಯಾನ್ಸ್​ ಮಾಡುತ್ತಿದ್ದರು. ಆದರೆ ಈ ವೇಳೆ ನೋಡಿ ಫುಲ್ ಶಾಕ್ ಆಗಿರೋದು. ಬಿಗ್​ಬಾಸ್​ ಮನೆಗೆ ಕುಟುಂಬ ಬರುತ್ತಿದ್ದಂತೆ ತಮ್ಮನನ್ನು ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಇಷ್ಟು ದಿನ ಬಿಟ್ಟು ಇದ್ದಿದ್ದೆ. ತುಂಬಾ ಮಿಸ್​ ಮಾಡಿಕೊಳ್ಳುತ್ತಿದ್ದೆ. ಪುಟಾಣಿ ಎಂದು ಕರೆದರೂ ವೀಲ್ ಚೇರ್ ಮೇಲಿದ್ದ ಸಹೋದರ, ಮೋಕ್ಷಿತಾರನ್ನ ಯಾರೆಂದು ಗುರುತಿಸಲಿಲ್ಲ. ಅದಕ್ಕೆ ನನ್ನನ್ನು ಮರೆತು ಹೋಗಿದ್ದಾನೆ. ಇಷ್ಟು ದಿನ ಮನೆಯಲ್ಲಿ ಇರದಿದ್ದಕ್ಕೆ ನನ್ನನ್ನು ಮರೆತು ಹೋಗಿ ಬಿಟ್ಟಿದ್ದಾನೆ ಎಂದು ಮೋಕ್ಷಿತಾ, ತಮ್ಮನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಮೋಕ್ಷಿತಾ ತಂದೆ, ತಾಯಿ ಕೂಡ ಕಣ್ಣೀರು ಹಾಕಿರುವುದು ಎಲ್ಲರನ್ನೂ ಮೂಕವಿಸ್ಮಿತರಾಗಿ ಮಾಡುತ್ತದೆ.

ಮೋಕ್ಷಿತಾ ತಮ್ಮನ ಪರಿಸ್ಥಿತಿಯನ್ನು ನೋಡಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳು ಬೆರಗಾಗಿದ್ದರು. ಗೌತಮಿಯಂತೂ ದುಃಖಿಸಿರುವುದು ಎಲ್ಲರ ಮನ ಕದಡುವಂತೆ ಇತ್ತು. ಚೈತ್ರಾ, ಮಂಜು, ರಜತ್, ಹನುಮಂತು, ತ್ರಿವಿಕ್ರಮ್, ಧನರಾಜ್ ಎಲ್ಲರ ಮುಖದಲ್ಲಿನ ಭಾವ ಕೂಡ ಏನೋ ಹೇಳುವಂತೆ ಇತ್ತು.

Continue Reading

DAKSHINA KANNADA

ಭೀ*ಕರ ಅ*ಪಘಾ*ತಕ್ಕೊಳಗಾಗಿ ದ್ವಿಚಕ್ರ ಸವಾರ ಸಾ*ವು

Published

on

ಉಳ್ಳಾಲ: ಲಾರಿಗೆ ದ್ವಿಚಕ್ರ ವಾಹನವೊಂದು ಡಿ*ಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ನಿನ್ನೆ (ಡಿ.31) ತಡರಾತ್ರಿ ಸಂಭವಿಸಿದೆ.
ದೇರಳಕಟ್ಟೆ ಸಮೀಪದ ಪನೀರ್‌ ನಿವಾಸಿ ಅಝರ್ ಮೃ*ತ ವ್ಯಕ್ತಿ ಎಂದು ತಿಳಿದು ಬಂದಿದೆ.

ಮೃ*ತ ವ್ಯಕ್ತಿ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಲಾರಿ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾನೆ. ಅಝರ್‌ನ ಮೃ*ತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Continue Reading

LATEST NEWS

Trending

Exit mobile version