LATEST NEWS
ದಲಿತ ಯುವತಿಯನ್ನು ಮದುವೆಯಾದ ಯುವಕನಿಗೆ ಸಾಮಾಜಿಕ ಬಹಿಷ್ಕಾರ
ಚಿಕ್ಕಮಗಳೂರು: ದಲಿತ ಯುವತಿಯನ್ನು ಮದುವೆಯಾದ ಕಾರಣ ಸ್ವಜಾತಿಯವರು ಯುವಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮಶೇಖರ್ ಎನ್ನುವಾತ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇದನ್ನು ಖಂಡಿಸಿ ಸ್ವಜಾತಿಯವರು ವರನ ಸಂಪೂರ್ಣ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ.
ಯುವಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು ಈ ಕುಟುಂಬದ ಜೊತೆ ಯಾರು ಮಾತಾನಾಡುವಂತಿಲ್ಲ, ಯಾವುದೇ ಕಾರ್ಯಕ್ರಮಕ್ಕೂ ಕರೆಯುವಂತಿಲ್ಲ. ಒಂದು ವೇಳೆ ಜೊತೆ ಮಾತಾನಾಡಿದರೆ ಐದು ಸಾವಿರ ದಂಡ ಎಂದು ಘೋಷಿಸಿ ಬಹಿಷ್ಕಾರ ಹಾಕಲಾಗಿದೆ ಎನ್ನಲಾಗಿದೆ.
ಸೋಮಶೇಖರ್ ಕುಟುಂಬಕ್ಕೆ ಊರಿನ ದೇವಾಲಯಕ್ಕೆ ಪ್ರವೇಶವನ್ನು ಕೊಡುತ್ತಿಲ್ಲ. ಯಾರೂ ಕೂಡ ಇವರನ್ನು ಯಾವುದೇ ಕಾರ್ಯಕ್ರಮಕ್ಕೂ ಕರೆಯಬಾರದು ಎಂದು ಆದೇಶ ಹೊರಡಿಸಿದ್ದಾರೆ.
ಉದ್ಯೋಗವನ್ನು ಕೂಡ ಕೊಡುವ ಹಾಗಿಲ್ಲ. ಬಹಿಷ್ಕಾರಗೊಂಡಿರುವ ಈ ಕುಟುಂಬದವರನ್ನು ಮಾತನಾಡಿಸಿದರೂ 5 ಸಾವಿರ ರೂ. ದಂಡ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಮಾನಸಿಕವಾಗಿ ನೊಂದಿರುವ ಸೋಮಶೇಖರ್ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಜಿಲ್ಲಾಡಳಿತದ ಮೊರೆ ಹೋಗಿದೆ.
ಈ ಬಗ್ಗೆ ಕಳೆದ ಕೆಲ ತಿಂಗಳಿನಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಸಹ ಈ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ತಮ್ಮ ಪಾಡಿಗೆ ತಾವು ಜೀವನ ಮಾಡಿಕೊಂಡು ಇರುತ್ತೇವೆ ಎಂದು ಸುಮ್ಮನಿದ್ದರೂ ಸೋಮಶೇಖರ್ ಕುಟುಂಬಕ್ಕೆ ಕಿರುಕುಳ ತಪ್ಪಿಲ್ಲ.
ಬಹಿಷ್ಕಾರ, ದೌರ್ಜನ್ಯ ನಡೆಸದಂತೆ ಕಾನೂನು ಇದ್ದರು ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
FILM
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೆಮ್ಮೆಯ ಗರಿ; ಜಪಾನ್ ನತ್ತ 777 ಚಾರ್ಲಿ!
777 ಚಾರ್ಲಿ ಭಾರೀ ಸದ್ದು ಮಾಡಿದ್ದ ಸಿನಿಮಾ. ಈ ಚಿತ್ರ ನೆಚ್ಚಿಕೊಳ್ಳದವರೇ ಇಲ್ಲ. ನಾಯಿ ಹಾಗೂ ಮನುಷ್ಯನ ನಡುವಿನ ಬಂಧವನ್ನು ಸಾರಿದ ಈ ಚಿತ್ರ ಭಾರೀ ಯಶಸನ್ನು ಬಾಚಿಕೊಂಡಿತ್ತು. ಇದೀಗ ಈ ಚಿತ್ರ ಜಪಾನ್ ನತ್ತ ಪಯಣ ಬೆಳೆಸಿದೆ.
ಜಪಾನ್ ನಲ್ಲಿ 777 ಚಾರ್ಲಿ :
ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬಂದ 777 ಚಾರ್ಲಿ ಈಗಾಗಲೇ 5 ಭಾಷೆಗಳಲ್ಲಿ ರಿಲೀಸ್ ಆಗಿತ್ತು. ಇದೀಗ ಜಪಾನ್ ಸರದಿ. ಜಪಾನೀಸ್ ಭಾಷೆಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ. ಜೂ.28 ರಂದು ಜಪಾನ್ ನಗರಗಳಲ್ಲಿ 777 ಚಾರ್ಲಿ ಬಿಡುಗಡೆ ಆಗಲಿದೆ. ಬಾಲಿವುಡ್ ಹಾಗೂ ಟಾಲಿವುಡ್ ಸಿನಿಮಾಗಳು ಈಗಾಗಲೇ ಜಪಾನ್ ನಲ್ಲಿ ಸದ್ದು ಮಾಡಿವೆ. ಇದೀಗ ಚಾರ್ಲಿ ಸರದಿ. ಚಂದನವನದ(Sandalwood) ಪಾಲಿಗಿದು ಹೆಮ್ಮೆಯ ವಿಚಾರವೇ ಸರಿ.
ಜಪಾನ್ ಚಿತ್ರರಂಗದ ದೊಡ್ಡ ಸಂಸ್ಥೆ ‘ಶೋಚಿಕೋ ಮೂವೀ’ ‘777 ಚಾರ್ಲಿ’ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಲು ಮುಂದಾಗಿದೆ. ಈ ಹಿಂದೆ ಇದೇ ಸಂಸ್ಥೆ ‘Hachi: A Dog’s Tale’ ಸಿನಿಮಾವನ್ನು ಜಪಾನಿನಲ್ಲಿ ವಿತರಣೆ ಮಾಡಿ ಯಶಸ್ಸು ಕಂಡಿತ್ತು.
2023ರಲ್ಲಿ ‘777 ಚಾರ್ಲಿ’ ಸಿನಿಮಾ ಥೈಲ್ಯಾಂಡ್ನಲ್ಲಿ ಡಬ್ ಆಗಿ ಬಿಡುಗಡೆಗೊಂಡಿತ್ತು. ಈ ಸಿನಿಮಾ ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ಜರ್ಮನಿ, ತೈವಾನ್ ಮುಂತಾದ ದೇಶಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಇದನ್ನೂ ಓದಿ : PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
ಕಿರಣ್ ರಾಜ್ ನಿರ್ದೇಶನದ 2022ರ ಜೂನ್ 10ರಂದು ಭಾರತದ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಚಾರ್ಲಿಯಾಗಿ ನಾಯಿಯ ಅಭಿನಯ ಅದ್ಭುತ ಎನಿಸಿತ್ತು. ರಕ್ಷಿತ್ ಶೆಟ್ಟಿ ಮನೋಜ್ಞವಾಗಿ ನಟಿಸಿದ್ದರು. ಚಿತ್ರದಲ್ಲಿ ಸಂಗೀತಾ ಶೃಂಗೇರಿ ಗಮನ ಸೆಳೆದಿದ್ದರು.
LATEST NEWS
ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ
ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.
ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು. ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.
ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಸಾ*ವಿನಲ್ಲೂ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.
ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ
ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ