Saturday, November 26, 2022

ಉಡುಪಿ: ಸೋಲಾರ್ ದಾರಿದೀಪದ ಬ್ಯಾಟರಿ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದ ವಿವಿಧೆಡೆಗಳಲ್ಲಿ ಪಂಚಾಯತ್ ವತಿಯಿಂದ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳ ಬ್ಯಾಟರಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಪ್ಪೂರು ಅಮ್ಮುಂಜೆ ನಿವಾಸಿ ಯಜ್ಞೇಶ್(24), ಉದ್ಯಾವರ ಮೂಲದ ಪೂರ್ಣೇಶ್ ಆಚಾರ್ಯ(22) ಬಂಧಿತ ಆರೋಪಿಗಳು.


ಆರೋಪಿಗಳು ಕಳವು ಮಾಡಿರುವ ಬ್ಯಾಟರಿಗಳನ್ನು ಮಾರಾಟ ಮಾಡಲು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ.

ಬೈಕ್ ಹಾಗೂ ಬ್ಯಾಟರಿ ಸಮೇತ‌ ಆರೋಪಿಗಳನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದು, ಮಾತ್ರವಲ್ಲದೆ ಅವರು ಬೇರೆ ಕಡೆ ಮಾರಾಟ ಮಾಡಲು ಇರಿಸಿದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬ್ಯಾಟರಿಗಳ ಕಳವಿನ ಬಗ್ಗೆ ಆರೂರು ಪಂಚಾಯತ್ ಉಪಾಧ್ಯಕ್ಷ ಗುರುರಾಜ್ ಭಟ್ ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಬ್ರಹ್ಮಾವರ ಪೊಲೀಸರು ಆರೋಪಿ ಹಾಗೂ ಸೊತ್ತು ಪತ್ತೆಯ ಬಗ್ಗೆ ಸಿಬ್ಬಂದಿಯನ್ನು ನೇಮಿಸಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷರಾದ ಅಕ್ಷಯ್ ಮಚೀಂದ್ರ ಹಾಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಸುಧಾಕರ ಎಸ್.ನಾಯ್ಕ್ ಬ್ರಹ್ಮಾವರ ಸರ್ಕಲ್ ಇನ್ ಸ್ಪೆಕ್ಟರ್ ಅನಂತ ಪದ್ಮನಾಭ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಠಾಣಾ ಪಿಎಸ್ಸೈ ರಾಜಶೇಖರ ವಂದಲಿ, ಠಾಣಾ ತನಿಖೆ ಪಿಎಸ್ಸೈ ಮುಕ್ತಾಬಾಯಿ,

ಬ್ರಹ್ಮಾವರ ಠಾಣಾ ಅಪರಾಧ ಸಿಬ್ಬಂದಿಯಾದ ವೆಂಕಟ್ರಮಣ ದೇವಾಡಿಗ, ಪ್ರವೀಣ್ ಶೆಟ್ಟಿಗಾರ್, ರಾಘವೇಂದ್ರ ಕಾರ್ಕಡ, ಉದಯ ಅಮೀನ್, ಮುಹಮ್ಮದ್ ಅಜ್ಮಲ್, ಹಾಗೂ ದಿಲೀಪ್, ಪ್ರಸಾದ್, ಸಂತೋಶ್ ರಾಥೋಡ್ ಹಾಗೂ ಕಂಪ್ಯೂಟರ್ ಸಿಬ್ಬಂದಿ ಯೋಗೀಶ್ ಮತ್ತು ಜೀಪು ಚಾಲಕ ಅಣ್ಣಪ್ಪ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...

ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಉಡುಪಿ ಶಾಸಕ ರಘುಪತಿ ಭಟ್ ತೀವ್ರ ವಿರೋಧ..!

ಸುರತ್ಕಲ್‌ನಲ್ಲಿ ಕಾರ್ಯಾಚರಿಸುತಿದ್ದ ಟೋಲ್‌ಗೇಟ್‌ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್‌ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ.ಉಡುಪಿ : ಸುರತ್ಕಲ್‌ನಲ್ಲಿ...