BANTWAL
ಬಂಟ್ಟಾಳ ಸಜೀಪದಲ್ಲಿ ರಾಡಿಯೆದ್ದ ಘನತ್ಯಾಜ್ಯ-ಘಟಕಕ್ಕೆ ಬೀಗ ಜಡಿದ ಶಾಸಕ ಖಾದರ್..!
Published
2 years agoon
By
Adminಬಂಟ್ಟಾಳ: ಬಂಟ್ವಾಳದ ಹೊರ ವಲಯದ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸದೆ ಅವೈಜ್ಞಾನಿಕ ಘನತ್ಯಾಜ್ಯ ಘಟಕದಲ್ಲಿ ಅವ್ಯವಸ್ಥೆ ಕಂಡುಬಂದಿತ್ತು. ಈ ಬಗ್ಗೆ ಸ್ಥಳೀಯರ ಅಹವಾಲಿನ ಮೇರೆಗೆ ಪರಿಶೀಲನೆ ನಡೆಸಿ ಘಟಕಕ್ಕೆ ಶಾಸಕ ಯು.ಟಿ.ಖಾದರ್ ಬೀಗ ಜಡಿದ ಘಟನೆ ನಡೆದಿದೆ.
ಈ ಹಿನ್ನೆಲೆ ಶಾಸಕ ಯು.ಟಿ.ಖಾದರ್ ಇಂದು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳೀಯರ ನಾಗರೀಕರ ಬಗ್ಗೆ ಕಿಂಚಿತ್ತೂ ಕರುಣೆ ಕಾಳಜಿ ವಹಿಸದೆ ಬಂಟ್ವಾಳ ಪುರಸಭೆಯವರು ಬೇಕಾಬಿಟ್ಟಿ ತ್ಯಾಜ್ಯ ಸುರಿಯುತ್ತಿರುವ ಘಟನೆ ಕಣ್ಣಾರೆ ಕಂಡು ದುರ್ವಾಸನೆ ಹಾಗೂ ಅವ್ಯವಸ್ಥೆಯಿಂದ ಸ್ಥಳೀಯ ನಾಗರಿಕರ ಮೇಲಾಗುವ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಶಾಸಕ ಯು.ಟಿ.ಖಾದರ್ ಘನತ್ಯಾಜ್ಯ ಘಟಕಕ್ಕೆ ಬೀಗ ಜಡಿದರು.
ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಬಂಟ್ವಾಳ 2007ರಲ್ಲಿ ಸ್ಥಳ ನಿಗದಿಪಡಿಸಲಾಗಿತ್ತು. ಆದರೆ ಘಟಕ ನಿರ್ಮಾಣ ಮಾಡಲು ಸ್ಥಳೀಯರ ಭಾರೀ ವಿರೋಧ ವ್ಯಕ್ತವಾಗಿತ್ತು.
ಆದರೆ ರಲ್ಲಿ ಹೊಸ ಸರಕಾರ ಬಂದ ನಂತರ ಅದೇ ಸ್ಥಳದಲ್ಲಿ ಘನತ್ಯಾಜ್ಯ ತೆರೆಯುವ ಬಗ್ಗೆ ಸದನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒತ್ತಾಯಿಸಿದಾಗ ಸ್ಥಳೀಯ ಶಾಸಕ ಯು.ಟಿ.ಖಾದರ್ ರವರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ನಂತರ ಸ್ಪೀಕರ್ ಹಾಗೂ ಸಚಿವರು ಮದ್ಯೆ ಪ್ರವೇಶಿಸಿ ಜಿಲ್ಲಾಡಳಿತ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು.
ಅದರಂತೆ ಅಂದಿನ ಜಿಲ್ಲಾಧಿಕಾರಿಗಳಾದ ಸಿಂಧೂ ರೂಪೇಶ್ ರವರು ಶಾಸಕರೂ ಸೇರಿದಂತೆ ಸಹಾಯಕ ಕಮೀಷನರ್ ,ಮಂಗಳೂರು ತಹಶೀಲ್ದಾರ್,ಬಂಟ್ಟಾಳ ತಹಶೀಲ್ದಾರ್,ಬಂಟ್ಟಾಳ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಜೀಪ ನಡು ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಪಡೆದು ಕೇವಲ ಒಣಕಸ ಮಾತ್ರ ಹಾಕಲು ನಿರ್ಧಾರಕ್ಕೆ ಬಂದಿದ್ದರು.
ಅದರಿಂದ ಬರುವ ಆದಾಯವನ್ನು ಸ್ಥಳೀಯ ಪಂಚಾಯತ್ ಗೆ ನೀಡುವ ಒಪ್ಪಂದ ನಡೆಸಿ ಬಂಟ್ವಾಳ ಪುರಸಭೆಗೆ ಸೂಚನೆ ನೀಡಲಾಯಿತು. ನಂತರ ಕೆಲ ಸಮಯಗಳ ಕಾಲ ಕೇವಲ ಒಣಕಸ ಮಾತ್ರ ತಂದು ಅದನ್ನು ವಿಲೇವಾರಿ ಮಾಡುವ ಕೆಲಸ ಚಾಲ್ತಿಯಲ್ಲಿತ್ತು.
ಆದರೆ ಕ್ರಮೇಣ ಹಸಿ ಕಸ ಕೂಡಾ ತರಲು ಪ್ರಾರಂಭಿಸಿ ಸತ್ತ ಪ್ರಾಣಿಗಳನ್ನು ಸಮೇತ ತಂದು ಸುರಿದು ಪಚ್ಟನಾಡಿ ತರಹ ಆಗಿ ಯಾರೂ ಕೇಳದ ಪರಿಸ್ಥಿತಿಗೆ ಬಂದು ದಿಕ್ಕು ದೆಸೆಯಿಲ್ಲದಂತಾಗಿತ್ತು.
ಈ ಬಗ್ಗೆ ಜಿಲ್ಲಾಧಿಕಾರಿಗಳು, ಬಂಟ್ವಾಳ ಶಾಸಕರು,ಪುರಸಭೆ ಮುಖ್ಯಾಧಿಕಾರಿ,ಪುರಸಭೆ ಅಧ್ಯಕ್ಷರನ್ನೂ ಸಂಪರ್ಕಿಸಿದ ಶಾಸಕ ಯು.ಟಿ.ಖಾದರ್ ಘಟಕದ ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವಂತೆ ಸೂಚನೆ ನೀಡಿದರು.
ಮುಂದಕ್ಕೆ ಯಾವುದೇ ಕಾರಣಕ್ಕೂ ಹಸಿ ಕಸ ತರಲು ಅನುಮತಿ ನೀಡಬಾರದೆಂದು ನಿರ್ಧರಿಸಿ ಇದನ್ನು ನೋಡಿಕೊಳ್ಳಲು ಸ್ಥಳೀಯರ ಕಾವಲು ಸಮಿತಿಯನ್ನು ಕೂಡಾ ನೇಮಿಸಲಾಯಿತು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?