ಮಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಭೂಪೆಂದ್ರ ಯಾದವ್, ರಾಜನಾಥ್ ಸಿಂಗ್ ಅಥವಾ ದರ್ಮೇಂದ್ರ ಪ್ರಧಾನ್ ಬಿಜೆಪಿ ವೀಕ್ಷಕರಾಗಿ ಬರುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ತಂಡ ಇಂದು ಸಂಜೆ ಅಥವಾ ನಾಳೆ ಬೆಂಗಳೂರಿಗೆ ಬರಲಿದೆ. ರಾಜೀನಾಮೆ ನಂತರ ಬಿ.ಎಸ್.ವೈ ತಮ್ಮ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಅಲ್ಲಿ ತಮ್ಮ ಆಪ್ತ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ರೇಣುಕಾಚಾರ್ಯ, ಕೆ.ಸುಧಾಕರ್, ಎಂಟಿಬಿ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು. ಈ ಸಭೆಯಲ್ಲಿ ಆಪ್ತರು ರಾಜೀನಾಮೆ ಬಗ್ಗೆ ಕಣ್ಣಿರು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.