DAKSHINA KANNADA
“ಹಲವರಿಗೆ ನಳಿನ್ ಬೆಳೆದು ಬಂದ ದಾರಿ ಗೊತ್ತಿಲ್ಲ, ಅವಕಾಶ ವಂಚಿತರು, ಅತೃಪ್ತರು ಸೇರಿ ಅಂದು ಗಲಾಟೆ ಮಾಡಿದ್ದಾರೆ”
Published
2 years agoon
By
Adminಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಕಾರ್ಯಕರ್ತರ ಗಲಾಟೆಯಲ್ಲಿ ಸ್ಥಳದಲ್ಲಿ ಉಸ್ತುವಾರಿ ಸಚಿವ ಸುನೀಲ್, ಅಂಗಾರ ಇದ್ದರೂ ಟಾರ್ಗೆಟ್ ಮಾಡಿದ್ದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರನ್ನು ಮಾತ್ರ. ಅವರ ಜೀವನದ ತ್ಯಾಗವನ್ನು ನೋಡಿದ ಯಾವ ಕಾರ್ಯಕರ್ತನು ಈ ರೀತಿ ಮಾಡುತ್ತಿರಲಿಲ್ಲ.
ಮೊದಲ ಬಾರಿ ಸಂಸದ ಸ್ಥಾನಕ್ಕೆ ಟಿಕೆಟ್ ನೀಡುವ ವೇಳೆ ಅದನ್ನು ನಿರಾಕರಿಸಿದ ಧೀಮಂತ ವ್ಯಕ್ತಿ ಅಂದರೆ ನಳಿನ್ ಮಾತ್ರ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಹೇಳಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ಳಾರೆಯಲ್ಲಿ ನಡೆದ ಕಾರ್ಯಕರ್ತರ ಗಲಾಟೆ ನಂತರ ಬಿಜೆಪಿ ರಾಜಾಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದಾರೆ. ಅಂದು ಸ್ಥಳದಲ್ಲಿ ಉಸ್ತುವಾರಿ ಸಚಿವ ಸುನೀಲ್, ಅಂಗಾರ ಇದ್ದರೂ ಟಾರ್ಗೆಟ್ ಮಾಡಿದ್ದು ನಳಿನ್ ಅವರನ್ನು ಮಾತ್ರ.
ಮರುದಿನ ಆ ಸ್ಥಳಕ್ಕೆ ಬಂದ ಓರ್ವ ರಾಜ್ಯಾಧ್ಯಕ್ಷರ ಮಂಡೆ ಒಡೆಯಬೇಕಿತ್ತು ಎಂದು ಹೇಳಿಕೆ ಕೊಟ್ಟಿದ್ದಾರೆ. ಜನರ ಆಕ್ರೋಶ ಸಹಜ ಆದರೆ ಇದು ಎಲ್ಲರ ವಿರುದ್ಧ ಆಗಬೇಕು. ಅನೇಕರಿಗೆ ನಳಿನ್ ಕುಮಾರ್ ಬೆಳೆದು ಬಂದ ದಾರಿ ಗೊತ್ತಿಲ್ಲ. ಹೀಗಾಗಿ ಇದೊಂದು ಷಡ್ಯಂತ್ರ.
ನಳಿನ್ ಕುಮಾರ್ ತನ್ನ ಯವ್ವನದ 17 ವರ್ಷವನ್ನು ಸಂಘಕ್ಕೆ ನೀಡಿದವರು. ಅವರು ಎಷ್ಟೋ ದಿನ ಬಸ್‌ಸ್ಟ್ಯಾಂಡ್‌ನಲ್ಲಿ ಮಲಗಿದ್ದಾರೆ. 5 ವರ್ಷ ಸಂಘದ ಪ್ರಚಾರಕರಾಗಿ, 7 ವರ್ಷ ಕಾರ್ಯವಾಹಕರಾಗಿ, 4 ವರ್ಷ ಧರ್ಮಜಾಗರಣದ ವಿಭಾಗ ಜವಾಬ್ದಾರಿ ಕಾರ್ಯ ನಿರ್ವಹಿಸಿದ್ದಾರೆ. 5 ವರ್ಷ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿದವರು.
ನಂತರ ಲೋಕಸಭಾ ಸಂಸದ ಸೀಟ್ ನನಗೆ ಬೇಡ ಎಂದು ಎರಡು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿದ್ದರು. ನನಗೆ ರಾಜಕೀಯ ಹಾಗೂ ಅಧಿಕಾರ ಬೇಡ ಎಂದು ಹೇಳಿದ ಧೀಮಂತ ವ್ಯಕ್ತಿ ಇದ್ರೆ ಇಡೀ ದೇಶದಲ್ಲಿ ನಳಿನ್ ಕುಮಾರ್ ಮಾತ್ರ ಎಂದು ಹೇಳಲು ಬಯಸುತ್ತೇನೆ.
ಈಗಿನ ಕಾರ್ಯಕರ್ತರು ಅವರನ್ನು ನೋಡಿದ್ದು ದೊಡ್ಡ ದೊಡ್ಡ ಕಾರುಗಳಲ್ಲಿ, ಹಿಂದೆ ಮುಂದೆ ಪೊಲೀಸ್ ಗಾಡಿ ಜೊತೆ ತಿರುಗಾಡುವುದನ್ನು ನೋಡಿದ್ದಾರೆ. ಆದರೆ ಜೀವನದ ತ್ಯಾಗವನ್ನು ನೋಡಿದ ಯಾವ ಕಾರ್ಯಕರ್ತನು ಈ ರೀತಿ ಮಾಡುತ್ತಿರಲಿಲ್ಲ. 13 ವರ್ಷದ ರಾಜಕೀಯದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲದ ಎಂಪಿ ಇದ್ರೆ ನಳಿನ್ ಕುಮಾರ್ ಮಾತ್ರ.
ಅನುದಾನ ಉಪಯೋಗಿಸಿರು ಸಂಸದರಲ್ಲಿ ದೇಶದ ಅಗ್ರಪಂಥಿಯಲ್ಲಿರುವವರು ನಳಿನ್. ಆದರೆ ಇಂದು ಸೇವೆ, ತ್ಯಾಗವನ್ನು ಎಲ್ಲರೂ ಮರೆತರು. ಅಂದಿನ ಆ ಘಟನೆಯನ್ನು ನೈಜ ಕಾರ್ಯಕರ್ತರು ಇದನ್ನು ಮಾಡಿಲ್ಲ.
ಬದಲಾಗಿ ಆಕಾಂಕ್ಷಿಗಳು, ಅವಕಾಶ ವಂಚಿತರು, ಅತೃಪ್ತರು ಸೇರಿ ಈ ಯೋಜನೆ ರೂಪಿಸಿದ್ದಾರೆ. ಇದನ್ನು ದಯವಿಟ್ಟು ಇಲ್ಲಿಗೆ ಮುಗಿಸಬೇಕು. ರಾಜೀನಾಮೆ ಕೊಟ್ಟವರನ್ನು ಪಕ್ಷಕ್ಕೆ ಮತ್ತೆ ಕರೆತರುತ್ತೇವೆ ಎಂದು ಹೇಳಿದರು.
ನಳಿನ್ ಅಂದು ಬರಲು ಲೇಟಾಗಿದ್ದು ಯಾಕೆ
ಜು.28ರಂದು ರಾತ್ರಿ 7.30ಕ್ಕೆ ಸಂಸದ ನಳಿನ್ ಕಾರ್ಯನಿಮಿತ್ತ ದೆಹಲಿಗೆ ತೆರಳಿದ್ದಾರೆ. ರಾತ್ರಿ 10.30ರ ಹೊತ್ತಿಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಇಳಿದಾಗ ಕೊಲೆ ವಿಷಯ ಗೊತ್ತಾಗಿದೆ.
ಮರುದಿನ ವಿಪ್ ಜಾರಿಯಾದ ಕಾರಣ ರಾಷ್ಟ್ರಾಧ್ಯಕ್ಷ ಹಾಗೂ ಸಂಸದೀಯ ಸಚಿವರ ಅನುಮತಿ ಕೇಳಿ ಮಧ್ಯರಾತ್ರಿ 2.30ಕ್ಕೆ ಬೆಂಗಳೂರಿಗೆ ವಾಪಾಸ್ ಬಂದಿದ್ದಾರೆ. ಮರುದಿನ ಅಂದರೆ ಜು.29 ರಂದು ಬೆಳಗ್ಗೆ 6.40ರ ಸಮಯದ ಮಂಗಳೂರು ವಿಮಾನ ಸಿಗದೆ 10.40ರ ವಿಮಾನ ಸಿಕ್ಕಿದೆ.
ಆ ಮೂಲಕ ಎಷ್ಟು ಸಾಧ್ಯವೋ ಅಷ್ಟು ಬೇಗ ಹೋಗಿದ್ದಾರೆ. ಅಂದು ಬೆಳ್ಳಾರೆ ಪೇಟೆಯಲ್ಲಿ ಪರಿಸ್ಥಿತಿ ಬಿಗಾಡಾಯಿಸಿದ್ದರಿಂದ ಮನೆಗೆ ಹೋಗಲಿಲ್ಲ.
ಬಿಟ್ಟರೆ ಬೇರೆ ಯಾವುದೇ ಕಾರಣಗಳಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
16 hours agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
DAKSHINA KANNADA
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
Published
18 hours agoon
25/11/2024By
NEWS DESK4ಮಂಗಳೂರು/ಮಸ್ಕತ್ : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.
ಈ ಸಂದರ್ಭ ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :
ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.
DAKSHINA KANNADA
‘ಕಾಂತಾರ ಚಾಪ್ಟರ್ – 1’ ಗೆ ವಿ*ಘ್ನ; ಬಸ್ ಪ*ಲ್ಟಿಯಾಗಿ 6 ಮಂದಿ ಗಂ*ಭೀರ !
Published
23 hours agoon
25/11/2024ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ.
ಕರಾವಳಿ ಭಾಗದ ಬೇರೆ ಬೇರೆ ಕಡೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕಲಾವಿದರು ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅ*ಪಘಾತ ಸಂಭವಿಸಿದೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿಬರುತ್ತಿದೆ. ಬಸ್ ಪ*ಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ.
ಪಲ್ಟಿಯಾದ ಹಿನ್ನಲೆ ಚಾಲಕನ ಮೇಲೆ ಹಲ್ಲೆಗೆ ವಾಹನದಲ್ಲಿದ್ದ ಹುಡುಗರು ಮುಂದಾಗಿದ್ದಾರೆ . ಬಸ್ ನಲ್ಲಿ ಹುಡುಗರು ವಾಹನ ಚಾಲಕ ನಿರ್ಲಕ್ಷದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಿ ಹ*ಲ್ಲೆ ನಡೆಸಿದ್ದಾರೆ. ಲೋಕಲ್ ಚಾಲಕನ ಮೇಲೆ ಹ*ಲ್ಲೆಯಾದ ಹಿನ್ನೆಲೆ ಸ್ಥಳೀಯರ ಅಕ್ರೋಶ, ರಿಷಬ್ ಶೆಟ್ಟಿ ಮಧ್ಯವರ್ತಿಯಲ್ಲಿ ಸಂಧಾನ ನಡೆದಿದ್ದು, ಎಲ್ಲರಿಗೂ ಕರೆದು ಮಾತನಾಡುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಕಾಂತಾರ ಚಿತ್ರವು ದೈವ ಹಾಗೂ ದೈವಾರಾಧನೆಗೆ ಸಂಬಂಧಿಸಿದ ಕಥಾ ಹಂದರವನ್ನುಹೊಂದಿದ್ದು, ಈ ಚಿತ್ರ ಬಿಡುಗಡೆಗೊಂಡು ಬಹಳಷ್ಟು ಮೆಚ್ಚುಗೆಯನ್ನು ಗಳಿಸಿತ್ತು. ಚಿತ್ರ ಬಿಡುಗಡೆಗೊಂಡ ಬಳಿಕ ಹಲವುಕಡೆ ದೈವದ ವೇಷವನ್ನುಅಸಭ್ಯವಾಗಿ ತೊಟ್ಟು ಅಭಿಮಾನಿಗಳು ನರ್ತಿಸಿ ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ದೈವಾರಾಧಕರು ಚಿತ್ರದ ವಿರುದ್ಧ ಅಸಮಧಾನ ಹೊಂದಿದ್ದಾರೆ.
ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ – 1’ ಮಾಡುವುದಾಗಿ ಘೋಷಿಸಿದ ಬಳಿಕ ತುಳುನಾಡಿನ್ಲಿ ತೀವ್ರ ಆಕ್ರೋಷ ಕೇಳಿ ಬಂದಿತ್ತು. ಚಿತ್ರತಂಡವು ಚಿತ್ರೀಕರಣ ನಡೆಸುವ ಈ ಸಂದರ್ಭ ಹಲವು ವಿಘ್ನಗಳು ಎದುರಾಗುತ್ತಿದ್ದು, ಇದು ದೈವದ ಕೋಪವೋ, ಇಲ್ಲ ದೈವನರ್ತಕರ ಶಾಪವಿರಬೇಕು ಎಂಬ ಗುಮನಿಗಳು ಶುರುವಾಗಿದೆ.
ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ ಈ ದು*ರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ 25 ಕಲಾವಿದರಿದ್ದರು. ಹಲವರು ಸಣ್ನ ಪುಟ್ಟ ಗಾ*ಯಗಳಿಂದ ಪಾರಾಗಿದ್ದರೆ, ಆರು ಜನರಿಗೆ ಗಂಭೀರ ಗಾ*ಯವಾಗಿದೆ. ಗಾಯಾಳುಗಳನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
LATEST NEWS
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!