DAKSHINA KANNADA
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ- ಹೆಣ್ಣುಮಕ್ಕಳ ವಿಚಾರಣೆಗೆ ಮಹಿಳಾ ರಕ್ಷಣಾ ವೇದಿಕೆ ಒತ್ತಾಯ..!
ಮಂಗಳೂರಿನ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರು ಅಮಾಯಕರು, ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಿಳಾ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಉಳ್ಳಾಲ: ಮಂಗಳೂರಿನ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರು ಅಮಾಯಕರು, ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಿಳಾ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಈ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡಿರುವ ಹೆಣ್ಣುಮಕ್ಕಳನ್ನು ಕಾನೂನಾತ್ಮಕವಾಗಿ ವಿಚಾರಣೆಗೆ ಒಳಪಡಿಸಬೇಕು.
ಆ ಹೆಣ್ಣುಮಕ್ಕಳ ಅಮಾಯಕ ತಂದೆ ತಾಯಿಂದರ ಗಮನಕ್ಕೆ ಈ ವಿಚಾರವನ್ನು ತರಬೇಕು.
ಇಂತಹ ಕೃತ್ಯಗಳು ಮತ್ತೆ ಉಳ್ಳಾಲದಲ್ಲಿ ಮರುಕಳಿಸಬಾರದು. ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು.
ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಬೇಕು ಎಂದು ಆಗ್ರಹಿಸಿ ಉಳ್ಳಾಲ ಮಹಿಳಾ ರಕ್ಷಣಾ ವೇದಿಕೆ ನಿಯೋಗ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗೆ ಮನವಿ ಸಲ್ಲಿಸಿದೆ.
ಈ ಸಂದರ್ಭ ಮಾತನಾಡಿದ ರಕ್ಷಣಾ ವೇದಿಕೆಯ ಧನಲಕ್ಷ್ಮೀ ಗಟ್ಟಿ, ಉಳ್ಳಾಲ ಬೀಚಿನಲ್ಲಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಸ್ಥಳೀಯ ಹಿಂದು ಯುವಕರು ಪ್ರಶ್ನಿಸಿದ್ದಾರೆ.
ಆದರೆ ಪೊಲೀಸರು ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿಲ್ಲ. ಆಸ್ಪತ್ರೆಯಲ್ಲಿರುವ ಯುವಕರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು.
ಹೆಣ್ಣುಮಕ್ಕಳನ್ನು, ಅವರ ಪೋಷಕರನ್ನು ಕರೆಸಿ ಸೂಕ್ತ ವಿಚಾರಣೆ ನಡೆಸಬೇಕು.
ಉಳ್ಳಾಲದಲ್ಲಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು.
ಅಮಾಯಕರ ಬಿಡುಗಡೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.
DAKSHINA KANNADA
ಜಿಲ್ಲೆಯಲ್ಲಿ ರೆಡ್ ಅಲರ್ಟ್..! ಜೂನ್ 27 ಶಾಲೆಗೆ ರಜೆ ಘೋಷಣೆ..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.
ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ 0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.
DAKSHINA KANNADA
ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ
ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.
ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.
DAKSHINA KANNADA
ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.
ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- LATEST NEWS4 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS5 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್
- DAKSHINA KANNADA3 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA7 days ago
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ