Connect with us

    LATEST NEWS

    ಹೆಣ್ಣು ಕೊಟ್ಟ ಅತ್ತೆ-ಮಾವನನ್ನೇ ಕೊಂ*ದ ಪಾಪಿ ಅಳಿಯ

    Published

    on

    ಚಿತ್ರದುರ್ಗ: ಅಳಿಯನೇ ತನ್ನ ಅತ್ತೆ ಮಾವನನ್ನು ಕೊಚ್ಚಿ ಕೊ*ಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಬೊಮ್ಮಕ್ಕನ ಹಳ್ಳಿಯಲ್ಲಿ ನಡೆದಿದೆ.

    ಅಳಿಯ ಮಂಜುನಾಥ ಕೊ*ಲೆ ಮಾಡಿದ ಆರೋಪಿ. ಹನುಮಂತಪ್ಪ ಹಾಗೂ ಆತನ ಪತ್ನಿ ತಿಪ್ಪಮ್ಮ ಕೊ*ಲೆಯಾದವರು. ಅವರದೇ ಜಮೀನಿನಲ್ಲಿ ಹ*ತ್ಯೆ ಮಾಡಲಾಗಿದೆ. ಹನುಮಂತಪ್ಪ ಹಾಗೂ ಪತ್ನಿ ತಿಪ್ಪಮ್ಮ ಜಮೀನಿಗೆ ತೆರಳಿದ್ದರು. ಜಮೀನಿನಲ್ಲಿನ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋಗಿದ್ದಾಗ ಹ*ತ್ಯೆ ಮಾಡಲಾಗಿದೆ.

    ಒಂದು ವರ್ಷದ ಹಿಂದೆ ಪುತ್ರಿ ಹರ್ಷಿತಾಳನ್ನು ಅದೇ ಗ್ರಾಮದ ತಮ್ಮ ಸಂಬಂಧಿ ಮಂಜುನಾಥ್ ಎಂಬಾತನಿಗೆ ಕೊಟ್ಟು ವಿವಾಹ ಮಾಡಿದ್ದರು. ಪಿಯುಸಿ ವ್ಯಾಸಂಗ ಮಾಡಿದ ಹರ್ಷಿತಾ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಹಾಗಾಗಿ ಹೊಲ ಮನೆ ಕೆಲಸದ ಬಗ್ಗೆ ಗಮನ ನೀಡುತ್ತಿರಲಿಲ್ಲ ಎಂದು ಪತಿ ಮಂಜುನಾಥ್ ಆಗಾಗ ಜಗಳ ಮಾಡುತ್ತಿದ್ದ.

    ಇದೇ ವಿಚಾರವಾಗಿ ಮಂಜುನಾಥ್ ತನ್ನ ಪತ್ನಿ ಹರ್ಷಿತಾಗೆ ಪದೇ ಪದೇ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ದಂಪತಿ ತಮ್ಮ ಪುತ್ರಿ ಹರ್ಷಿತಾಳನ್ನು ತವರು ಮನೆಗೆ ಕರೆತಂದಿದ್ದರು. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಕೊ*ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    ಬಾಲಕನ ಮರ್ಮಾಂಗದೊಂದಿಗೆ ಸಹಪಾಠಿಗಳ ಆಟ; ಆಸ್ಪತ್ರೆಗೆ ದಾಖಲಾದ ಬಾಲಕ

    Published

    on

    ಸುಳ್ಯ: ಹಾಸ್ಟೇಲ್ನಲ್ಲಿ ಉಳಿದು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವೆಳೆದು ಗೆಳೆಯರು ಆಟವಾಡಿದ ಪರಿಣಾಮವಾಗಿ ಮರ್ಮಾಂಗಕ್ಕೆ ಹಾನಿಯಾಗಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.


    ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕೆಲ ಸಮಯದಿಂದ ಕೊಡಗು ಸಂಪಾಜೆಯ ಹಾಸ್ಟೇಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14 ರಂದು ಇಬ್ಬರು ಸಹಪಾಠಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವು ಬಂತೆಂದು ಮನೆಗೆ ಮರಳಿದ್ದಾನೆ.
    ತಾಯಿಯೊಡನೆ ವಿಷಯ ಹೇಳಿಕೊಂಡಾಗ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ

    Continue Reading

    LATEST NEWS

    ವಿಧಾನ ಪರಿಷತ್ ಚುನಾವಣೆ: ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಡಿ.ಸಿ. ಸೂಚನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚನೆ ನೀಡಿದ್ದಾರೆ.

    ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆ ಆಗುವ ಎಲ್ಲಾ ನೀತಿ ಸಂಹಿತೆಗಳು ಈ ಚುನಾವಣೆಗೂ ಅನ್ವಯವಾಗಲಿವೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ಪ್ರಚಾರ ಸಭೆಗಳಿಗೆ ಅನುಮತಿ ಪಡೆಯಬೇಕಾಗುತ್ತದೆ. ವಿವಿಧ ಅನುಮತಿಗಳು ಒಂದೇ ಕಡೆ ಸಿಗುವಂತಾಗಲು ಏಕಗವಾಕ್ಷಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಬಿಜೆಪಿಯಿಂದ ನಿತಿನ್ ಕುಮಾರ್ ಮತ್ತು ಗುರುಚರಣ್, ಕಾಂಗ್ರೆಸ್‌ ಪಕ್ಷದ ನೀರಜ್ ಪಾಲ್, ಜೆಡಿಎಸ್‌ ನಿಂದ ಮುನೀರ್ ಮುಕ್ಕಚೇರಿ, ಆಮ್ ಆದ್ಮಿ ಪಾರ್ಟಿಯಿಂದ ಶನೋನ್ ಲಾರೆನ್ಸ್ ಮತ್ತಿತರರು ಉಪಸ್ಥಿತರಿದ್ದರು.

    Continue Reading

    LATEST NEWS

    Trending