Wednesday, January 27, 2021

ಹೆತ್ತ ತಂದೆಯನ್ನೇ ಅರೆಬೆತ್ತಲೆಯಾಗಿಸಿ ರಸ್ತೆಯಲ್ಲೇ ಬಿಟ್ಟು ಪರಾರಿಯಾದ ಮಗರಾಯ..!!

Array

ಹೆತ್ತ ತಂದೆಯನ್ನೇ ಅರೆಬೆತ್ತಲೆಯಾಗಿಸಿ ರಸ್ತೆಯಲ್ಲೇ ಬಿಟ್ಟು ಪರಾರಿಯಾದ ಮಗರಾಯ..!

ಮಂಗಳೂರು: ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಯನ್ನು ಮಗರಾಯ, ಬೆತ್ತಲೆಯಾಗಿ ರಸ್ತೆಗೆ ತಂದು ಬಿಟ್ಟು ಪರಾರಿಯಾದ ಅಮಾನವೀಯ ಘಟನೆ ನಗರ ಹೊರವಲಯದ ದೇರಳಕಟ್ಟೆಯಲ್ಲಿ ನಡೆದಿದೆ.

ಪುತ್ರನ ದೌರ್ಜನ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆತನ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ದೇರಳಕಟ್ಟೆ ಬಳಿ ಈ ಅಮಾನವೀಯ ಘಟನೆ ನಡೆದಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ತಂದೆಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಗ ಆಸ್ಪತ್ರೆ ಮುಂಭಾಗದ ಲಾಡ್ಜ್‌ ನಲ್ಲಿ ಉಳಿದುಕೊಂಡಿದ್ದ.

15 ದಿನಗಳ ಹಿಂದೆ ದೇರಳಕಟ್ಟೆಯ ಲಾಡ್ಜ್‌ ಗೆ ಈತ ಬಂದಿದ್ದ. ತಂದೆ ಮೂಲತಃ ಮುಂಬೈ ನಿವಾಸಿ ಎಂದು ತಿಳಿದು ಬಂದಿದೆ.

ಲಾಡ್ಜ್ ಮುಂಭಾಗದ ಖಾಸಗಿ ಆಸ್ಪತ್ರೆಯಲ್ಲಿ ತಂದೆಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ತಂದೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ರಸ್ತೆಗೆ ಕರೆದುಕೊಂಡು ಬಂದ ಮಗ ತಂದೆಯನ್ನೇ ತೊರೆದು ಓಡಿ ಹೋಗಿದ್ದಾನೆ.

ಇದೀಗ ಸ್ಥಳೀಯರು ವಯೋವೃದ್ದನನ್ನು ರಕ್ಷಿಸಿ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ದಾಖಲಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.