ಮೈಸೂರು: ‘ಮಹಾತ್ಮ ಗಾಂಧಿ ಬಹಳ ಒಳ್ಳೆಯವರು. ಆದರೆ, ಮಗ ಕುಡುಕನಾದ’. ಹಾಗೆಯೇ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಗುಣಗಳು ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲ ಮಕ್ಕಳಿಗೆ ಬರುವುದಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿರುವುದು ಯಡಿಯೂರಪ್ಪ. ಸರ್ಕಾರದ ಮೇಲೆ ಅವರು ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾಗುತ್ತದೆಯೇ? ಬಿಜೆಪಿಯ ಸಿದ್ಧಾಂತ, ಸರ್ಕಾರದ ನೀತಿಗಳು ಬದಲಾಗುತ್ತವೆಯೇ?’ ಎಂದು ಪ್ರಶ್ನಿಸಿದರು.‘ಈಗಲೇ ಅವರ ಮೇಲೆ ಸುಮ್ಮನೇ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ’ ಎಂದರು.