ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಸೋನವಣೆ ಖುಷಿಕೇಶ್ ಭಗವಾನ್ ಐಪಿಎಸ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ.
ಜಿಲ್ಲೆಯ ಎಸ್ಪಿಯಾಗಿರುವ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಸಿಎಂ ತವರೂರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸೋನವಣೆ ಖುಷಿಕೇಶ್ ಭಗವಾನ್ ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಉಪವಿಭಾಗದ ಎಎಸ್ ಪಿಯಾಗಿಯೂ ಕರ್ತವ್ಯ ನಿರ್ವಹಿದ್ದ್ದಾರೆ.
ಲೋಕಾಯುಕ್ತ ಎಸ್ಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು ಮತ್ತು ಇದೀಗ ಯಾದಗಿರಿ ಎಸ್ಪಿಯಾಗಿದ್ದಾರೆ.
2019 ಜನವರಿ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿಯಾಗಿ ಅಧಿಕಾರ ವಹಿಸಿದ ಬಳಿಕ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದ್ದರು ಜೊತೆಗೆ ಕರ್ತವ್ಯದ ಮೂಲಕ ಬಹಳ ದೊಡ್ಡ ಮಟ್ಟದಲ್ಲಿ ಜನ ಮೆಚ್ಚುಗೆ ಗಳಿಸಿದ್ದರು.
ಉಜಿರೆ ಬಾಲಕನ ಅಪಹರಣ ಮತ್ತು ಸುರೇಂದ್ರ ಬಂಟ್ವಾಳ್ ಕೊಲೆ ಪ್ರಕರಣ ಹೀಗೆ ಅನೇಕ ಕ್ಲಿಷ್ಟಕರ ಪ್ರಕರಣಗಳನ್ನು ಯಶಸ್ವಿಯಾಗಿ ನಿಭಾಯಿಸಿ ಜನ ಮೆಚ್ಚುಗೆ ಗಳಿಸಿದ್ದರು.