Friday, August 19, 2022

ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ, ‘ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ’ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಈ ಪುಟ್ಟ ಹುಡುಗನಿಗಿರುವಷ್ಟು ಕಾಳಜಿಯೂ ಜನಪ್ರತಿನಿಧಿ, ಅಧಿಕಾರಿಗಳಿಗೆ ಇಲ್ವಾಲ್ಲಾ ಛೇ..!

ಮಂಗಳೂರು: ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಕೋಟಿ ಗಟ್ಟಲೆ ಹಣವನ್ನು ತಂದು ಮಂಗಳೂರು ನಗರವನ್ನು ಸುಂದರೀಕರಣಗೊಳಿಸಲಾಗುತ್ತಿದೆ. ಆದರೆ ಹೊಂಡಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ.ಕಾರಿನಲ್ಲಿ ಸಂಚಾರ ಮಾಡುವವರಿಗೆ ಬೈಕಿನ ಸವಾರರ ಕಷ್ಟ...

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...