Connect with us

DAKSHINA KANNADA

ಸದ್ಯದಲ್ಲೇ ಸುರತ್ಕಲ್ ಟೋಲ್‌ಗೇಟ್ ತೆರವುಗೊಳಿಸಿ ಅಲ್ಲಿಯ ಕಾರ್ಮಿಕರಿಗೆ ಉದ್ಯೋಗ ಭದ್ರತೆ-ಪ್ರತಿಭಾ ಕುಳಾಯಿ

Published

on

ಮಂಗಳೂರು: “ಸುರತ್ಕಲ್ ಎನ್‌ಐಟಿಕೆ ಬಳಿಯಲ್ಲಿ ಅಕ್ರಮ ಟೋಲ್ ಗೇಟ್ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಟೋಲ್ ತೆರವು ಮಾಡುವುದಾಗಿ ದಿನಾಂಕದ ಮೇಲೆ ದಿನಾಂಕ ಘೋಷಣೆ ಮಾಡಿದ್ದರೂ ಟೋಲ್ ಮುಚ್ಚಲು ಅವರಿಂದ ಸಾಧ್ಯವಾಗಿಲ್ಲ. ಆದರೆ ಸದ್ಯದಲ್ಲೇ ಹೋರಾಟಕ್ಕೆ ಗೆಲುವು ಸಿಗಲಿದೆ’ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.


ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು ‘ನೂರಾರು ಸಮಾನಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಸ್ಥಾಪಿಸಿರುವ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟದ ಫಲವಾಗಿ ಕೆಲವೇ ಸಮಯದಲ್ಲಿ ಟೋಲ್ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ.

ಸದ್ಯ ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ ಮತ್ತು ಅವರ ಕುಟುಂಬದ ಜೀವನ ನಿರ್ವಹಣೆ ಕಷ್ಟವಾಗಲಿದೆ. ಇದನ್ನು ಮನಗಂಡು ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ನೀಡುವ ಭರವಸೆಯನ್ನು ನಾನು ನೀಡುತ್ತೇನೆ” ಎಂದು ಭರವಸೆ ನೀಡಿದರು.

ರಾಜಕೀಯ ಚುನಾವಣೆಯ ಬಗ್ಗೆ ಮಾತನಾಡಿ ‘ರಾಜಕೀಯದಲ್ಲಿ ಏನೆಲ್ಲ ಹುದ್ದೆಗಳು ಬರುತ್ತೋ ಅದೆಲ್ಲದಕ್ಕೂ ನಾನು ಆಕಾಂಕ್ಷಿ. ನನಗೆ ಜನಪರ ಕಾಳಜಿ ಯಾವಾಗಲೂ ಇತ್ತು. ನಾನು ಎಲ್ಲದಕ್ಕೂ ಆಕಾಂಕ್ಷಿ ಯಾಕಂದ್ರೆ ನಾನು ರಾಜಕೀಯದಲ್ಲಿ ಇನ್ನೂ ನಿವೃತ್ತಿ ತೆಗೆದುಕೊಳ್ಳಲಿಲ್ಲ. ನನ್ನಲ್ಲಿ ತುಂಬಾ ಸಮಯವಿದೆ.

ಇನ್ನು ಟೋಲ್ ತೆರವುಗೊಳ್ಳುತ್ತಿರುವುದರಿಂದ ಅವರ ಮನೆಗೆ ಆರ್ಥಿಕ ಹೊರೆ ಬೀಳುವುದನ್ನು ತಪ್ಪಿಸಲು ಯುವಕ ಯುವತಿಯರ ವಿದ್ಯಾರ್ಹತೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡಲು ಈಗಾಗಲೇ ವಿವಿಧ ಕಂಪೆನಿಗಳು ಮತ್ತು ಉದ್ಯಮಿಗಳ ಜೊತೆ ಚರ್ಚಿಸಿದ್ದೇನೆ.

ಅಷ್ಟೇ ಅಲ್ಲದೆ ಕಾರ್ಮಿಕರು ಮತ್ತವರ ಕುಟುಂಬ ಸದಸ್ಯರು ಸಂಪರ್ಕದಲ್ಲಿದ್ದು ಟೋಲ್ ತೆರವುಗೊಂಡ ತಕ್ಷಣ ಅವರ ಉದ್ಯೋಗ ಭದ್ರತೆಗೆ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.

 

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending