ಚೆನ್ನೈ : ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಆಗಸ್ಟ್ 5ರಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಕೆಲ ದಿನಗಳ ಹಿಂದೆ ಚೇತರಿಕೆ ಕಂಡಿದ್ದರು. ಆದರೆ ಇಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಅವರ ಹೆಲ್ತ್ ಬುಲೆಟಿನ್ ನಲ್ಲಿ ಅವರ ಸ್ಥಿತಿ ಕೊಂಚ ಬಿಗಡಾಯಿಸಿದೆ ಎಂದು ತಿಳಿಸಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಅವರ ಚಿಕಿತ್ಸೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆ ತಿಳಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಎಸ್ಪಿಬಿ ಅವರಿಗೆ ಆಗಸ್ಟ್ 5 ರಂದು ಕರೊನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು.