Friday, August 19, 2022

ಕೊರೊನಾ ಗೆದ್ದ ಸ್ವರ ಸಾಮ್ರಾಟ್ ಎಸ್ ಪಿ ಬಾಲಸುಬ್ರಹ್ಮಣ್ಯ

ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಎಸ್‌ಪಿಬಿ ಅವರ ಪುತ್ರ ಎಸ್‌ಪಿ ಚರಣ್ ಅವರು ಈ ಬಗ್ಗೆ ಧೃಡ ಪಡಿಸಿದ್ದು, ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕದಲ್ಲಿ (ಐಸಿಯು) ತಂದೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಕಳೆದ ಆಗಸ್ಟ್ 5 ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು.

ಆದರೆ ಇಂದು ಬೆಳಗ್ಗೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಈಗ ಎಸ್‍ಪಿಬಿಯವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು.


ಎಸ್‍ಪಿಬಿಯವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶಾದ್ಯಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ.  ಎಸ್‍ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್‍ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು...