LATEST NEWS
ಚಂದ್ರನೂರಿಗೆ ಹಾರಿದ ಗಗನ ನೌಕೆ-ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಯಶಸ್ವಿ ಉಡಾವಣೆ..!
ಬಾಹುಬಲಿ ರಾಕೆಟ್ ಎಲ್‌ವಿಎಂ3- ಎಂ4 ಮೂಲಕ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಯಿತು.
ನವದೆಹಲಿ: ಬಾಹುಬಲಿ ರಾಕೆಟ್ ಎಲ್‌ವಿಎಂ3- ಎಂ4 ಮೂಲಕ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಯಿತು.
ಆ ಮೂಲಕ ಇಸ್ರೋಗೆ (ISRO) ಮತ್ತೊಂದು ಗರಿ ಸಿಕ್ಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಚಿಮ್ಮಿತು.
ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿತು.
ಭಾರತದ ಚಂದ್ರಯಾನ-3 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಡೀ ರಾಷ್ಟ್ರದ ಭರವಸೆಯನ್ನು ಹೊತ್ತು ಸಾಗಿದೆ.
ಈ ಕಾರ್ಯಾಚರಣೆಯು ಯಶಸ್ವಿಯಾದರೆ, ರಷ್ಯಾ, ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾದ ನಂತರ ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಿದ ನಾಲ್ಕನೇ ದೇಶವಾಗಿ ಭಾರತ ಹೆಸರಾಗಲಿದೆ.
ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಮಾರ್ಕ್-3 ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಇದೆ.
ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ.
ಆ. 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ.
ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು.
ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ.
ಚಂದ್ರಯಾನ-3, ಮೂರು ಪ್ರಮುಖ ಘಟಕಗಳನ್ನು ಹೊಂದಿರುತ್ತದೆ.
ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಮತ್ತು ರೋವರ್. ಇದು ಚಂದ್ರನ ವಾತಾವರಣದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಚಂದ್ರಯಾನ-2 ರ ಆರ್ಬಿಟರ್ ಅನ್ನು ಬಳಸುತ್ತದೆ.
ಮೊದಲ ಬಾರಿಗೆ ಭಾರತದ ಚಂದ್ರನೌಕೆ ‘ವಿಕ್ರಮ್’ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ.
ಅಲ್ಲಿ ನೀರಿನ ಅಣುಗಳು ಕಂಡುಬಂದಿವೆ.
2008 ರಲ್ಲಿ ಭಾರತದ ಮೊದಲ ಚಂದ್ರಯಾನದ ಸಮಯದಲ್ಲಿ ಕಂಡುಬಂದ ಈ ಸಂಶೋಧನೆಯು ಜಗತ್ತನ್ನು ಬೆಚ್ಚಿ ಬೀಳಿಸಿತ್ತು.
ವಿಕ್ರಮ್ ಸುರಕ್ಷಿತ ಮತ್ತು ಸಾಫ್ಟ್ ಲ್ಯಾಂಡಿಂಗ್ ಆಗುವ ನಿರೀಕ್ಷೆ ಹೊಂದಲಾಗಿದೆ.
ಲ್ಯಾಂಡರ್ ನಂತರ ರೋವರ್ ಪ್ರಜ್ಞಾನ ಅನ್ನು ಬಿಡುಗಡೆ ಮಾಡುತ್ತದೆ.
ಇದು ಒಂದು ಚಂದ್ರನ ದಿನಕ್ಕೆ (ಭೂಮಿಗೆ ಹೋಲಿಸಿದರೆ 14 ದಿನ) ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತದೆ.
ಬಳಿಕ ಚಂದ್ರನ ಮೇಲ್ಮೈನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸುತ್ತದೆ.
ನಾಲ್ಕು ವರ್ಷಗಳ ಹಿಂದೆ ಇಸ್ರೋದ ಚಂದ್ರಯಾನ-2 ಕಾರ್ಯಾಚರಣೆ ಪ್ರಯತ್ನ ವಿಫಲವಾದ ಮುಂದುವರಿದ ಭಾಗ ಚಂದ್ರಯಾನ-3. ಇಸ್ರೋದ ಚಂದ್ರಯಾನ-2 ಉಡಾವಣೆ 2019 ರಲ್ಲಿ ಆಗಿತ್ತು.
ಆದರೆ ಈ ಕಾರ್ಯಾಚರಣೆ ಪ್ರಯತ್ನ ವಿಫಲವಾಗಿತ್ತು.
ಹಿಂದಿನ ವೈಫಲ್ಯಗಳನ್ನು ತಪ್ಪಿಸಲು, ಮುಂಬರುವ ಕಾರ್ಯಾಚರಣೆಯಲ್ಲಿ ಇಸ್ರೋ ಹಲವಾರು ಬದಲಾವಣೆಗಳನ್ನು ಮಾಡಿದೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ