Monday, January 24, 2022

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ

ಚೆನ್ನೈ : ಗಾನ ಗಂಧರ್ವ, ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜಿಎಂ ಆಸ್ಪತ್ರೆಯ ಆಸ್ಪತ್ರೆಯ ಹೆಲ್ತ್ ಬುಲೆಟಿನ್​ನಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ.

ಕೋವಿಡ್-19 ಸೋಂಕಿನಿಂದ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್ ಸಪೋರ್ಟ್​ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಅವರ ಈಗಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ನಮ್ಮ ಕ್ಲಿನಿಕಲ್ ಟೀಮ್​ನಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ಈ ಬಗ್ಗೆ ಅವರ ಪುತ್ರ ಚರಣ್ ಕೂಡ ಮಾಹಿತಿ ನೀಡಿದ್ದಾರೆ. ಆವರಿಗೆ ಎಕ್ಮೊ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.ಅವರ ಆರೋಗ್ಯವನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದರು. ‘ನಾನು ನನ್ನ ತಂದೆಯನ್ನು ನೋಡಲು ಆಸ್ಪತ್ರೆಗೆ ಹೋಗಿದ್ದೆ. ಅವರು ನಿನ್ನೆಗಿಂತ ಇಂದು ಹೆಚ್ಚು ಚುರುಕಾಗಿದ್ದರು. ಅವರು ನನಗೆ ಏನೋ ಹೇಳಲು, ಏನಾದರೂ ಬರೆಯಲು ಪ್ರಯತ್ನಿಸಿದರು. ಆದರೆ ಪೆನ್ನನ್ನು ಸರಿಯಾಗಿ ಹಿಡಿದುಕೊಳ್ಳಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಅವರು ಬರೆಯಲು ಮತ್ತು ಮಾತನಾಡುತ್ತಾರೆಂದು ವಿಶ್ವಾಸವಿದೆ.’ಅಪ್ಪ ಹಾಡುಗಳನ್ನು ಕೇಳುತ್ತಿದ್ದಾರೆ. ಅವರು ಹಾಡಲು ಸಹ ಪ್ರಯತ್ನಿಸುತ್ತಿದ್ದಾರೆ. ಅವರು ಹೇಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇದು ಒಂದು ಒಳ್ಳೆಯ ಉದಾಹರಣೆಯಾಗಿದೆ. ಎಂದು ತಿಳಿಸಿದ್ದಾರೆ.

Hot Topics

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...