Connect with us

LATEST NEWS

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ

Published

on

ಚೆನ್ನೈ : ಗಾನ ಗಂಧರ್ವ, ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜಿಎಂ ಆಸ್ಪತ್ರೆಯ ಆಸ್ಪತ್ರೆಯ ಹೆಲ್ತ್ ಬುಲೆಟಿನ್​ನಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ.

ಕೋವಿಡ್-19 ಸೋಂಕಿನಿಂದ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್ ಸಪೋರ್ಟ್​ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಅವರ ಈಗಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ನಮ್ಮ ಕ್ಲಿನಿಕಲ್ ಟೀಮ್​ನಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ಈ ಬಗ್ಗೆ ಅವರ ಪುತ್ರ ಚರಣ್ ಕೂಡ ಮಾಹಿತಿ ನೀಡಿದ್ದಾರೆ. ಆವರಿಗೆ ಎಕ್ಮೊ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.ಅವರ ಆರೋಗ್ಯವನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದರು. ‘ನಾನು ನನ್ನ ತಂದೆಯನ್ನು ನೋಡಲು ಆಸ್ಪತ್ರೆಗೆ ಹೋಗಿದ್ದೆ. ಅವರು ನಿನ್ನೆಗಿಂತ ಇಂದು ಹೆಚ್ಚು ಚುರುಕಾಗಿದ್ದರು. ಅವರು ನನಗೆ ಏನೋ ಹೇಳಲು, ಏನಾದರೂ ಬರೆಯಲು ಪ್ರಯತ್ನಿಸಿದರು. ಆದರೆ ಪೆನ್ನನ್ನು ಸರಿಯಾಗಿ ಹಿಡಿದುಕೊಳ್ಳಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಅವರು ಬರೆಯಲು ಮತ್ತು ಮಾತನಾಡುತ್ತಾರೆಂದು ವಿಶ್ವಾಸವಿದೆ.’ಅಪ್ಪ ಹಾಡುಗಳನ್ನು ಕೇಳುತ್ತಿದ್ದಾರೆ. ಅವರು ಹಾಡಲು ಸಹ ಪ್ರಯತ್ನಿಸುತ್ತಿದ್ದಾರೆ. ಅವರು ಹೇಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇದು ಒಂದು ಒಳ್ಳೆಯ ಉದಾಹರಣೆಯಾಗಿದೆ. ಎಂದು ತಿಳಿಸಿದ್ದಾರೆ.

LATEST NEWS

ಬಾಲಿವುಡ್‌ ನಟ ಸುದೀಪ್ ಪಾಂಡೆ ವಿಧಿವಶ

Published

on

ಮಂಗಳೂರು/ಮುಂಬಯಿ : ಭೋಜ್‌ಪುರಿ ಚಿತ್ರರಂಗದ ನಟ ಸುದೀಪ್‌ ಪಾಂಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದೀಪ್‌ ಪಾಂಡೆ ತೀವ್ರ ಎದೆನೋವಿನಿಂದ ಬಳಲಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸುದೀಪ್‌ ಪಾಂಡೆ ಭೋಜಪುರಿ ಸಿನಿಮಾರಂಗ ಮಾತ್ರವಲ್ಲದೇ, ಹಿಂದಿ ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ನಟನಾಗಿ, ನಿರ್ದೇಶಕರಾಗಿ ಕೂಡಾ ಕೆಲಸ ಮಾಡಿದ್ದಾರೆ.

ಖೂನಿದಂಗಲ್‌, ಭೋಜ್‌ಪುರಿ ಭಯ್ಯಾ, ಬಹಿನಿಯಾ ಸೇರಿ ಹಲವು ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ಸಿನಿ ರಂಗಕ್ಕೆ ಎಂಟ್ರಿ ನೀಡುವ ಮೊದಲು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.

Continue Reading

LATEST NEWS

ಗುರು ಗೋಪನ್ ಸ್ವಾಮಿಯ ಸಮಾಧಿ ತೆರೆಯಲು ಹೈಕೋರ್ಟ್ ಅಸ್ತು

Published

on

ಮಂಗಳೂರು/ತಿರುವನಂತಪುರ : ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿದೆ.

ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು. ಗೋಪನ್ ಸ್ವಾಮಿಗಳ ಮಕ್ಕಳಾದ ಸನಂದನ್ ಮತ್ತು ರಾಜಸೇನನ್ ಅವರು ಸ್ಥಳೀಯ ಸಮುದಾಯ ಅಥವಾ ಸಂಬಂಧಿಕರಿಗೆ ತಿಳಿಸದೆ ತಮ್ಮ ತಂದೆಯನ್ನು ನೆಯ್ಯಟಿಂಕರಾದ ದೇವಸ್ಥಾನದ ಬಳಿ ಸಮಾಧಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿತ್ತು.

ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ

ಈ ಬಗ್ಗೆ ಗೋಪನ್ ಅವರ ಮಕ್ಕಳು, ‘ತಮ್ಮ ತಂದೆ ಕುಳಿತ ಭಂಗಿಯಲ್ಲಿ ಧ್ಯಾನ ಮಾಡುತ್ತಿದ್ದಾಗ ನಿಧನರಾದರು ಮತ್ತು ಅವರ ಸಾವಿಗೆ ಯಾರಿಗೂ ಕೂಡ ಅವಕಾಶ ನೀಡದಂತೆ ಸೂಚನೆ ನೀಡಿದ್ದರು’ ಎಂದು ಹೇಳಿದ್ದಾರೆ. ನಂತರ ಗೋಪನ್ ಅವರ ಸಮಾಧಿಯ ಕುರಿತ ಪೋಸ್ಟರ್ ಗಳನ್ನು ಕುಟುಂಬದವರು ಹಾಕಿದ್ದರು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.

ಹಾಗಾಗಿ ಕಂದಾಯ ಅಧಿಕಾರಿಯ ಆದೇಶ ಪತ್ರದೊಂದಿಗೆ ಪೊಲೀಸರು ತಪಾಸಣೆಗೆ ಮುಂದದಾಗ ಕುಟುಂಬವು ಆಕ್ಷೇಪ ವ್ಯಕ್ತಪಡಿಸಿತ್ತು. ಕೆಲವು ಹಿಂದೂ ಸಂಘಟನೆಗೆಳೂ ಕುಟುಂಬದ ಪರ ನಿಂತಿದ್ದವು.
ಜತೆಗೆ ಪೊಲೀಸರು ತಪಾಸಣೆಗೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಮಾಧಿ ತೆರೆಯಲು ಪೊಲೀಸರಿಗೆ ಅನುಮತಿ ನೀಡಿದೆ.

Continue Reading

DAKSHINA KANNADA

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಆಮಿಷ; ಇಬ್ಬರು ಆರೋಪಿಗಳ ಸೆರೆ

Published

on

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಬರುತ್ತದೆ ಎಂಬ ಆಮಿಷ ಒಡ್ಡಿ ಸೈಬರ್ ಮೂಲಕ ವಂಚಿಸಿದ ಪ್ರಕರಣವೊಂದನ್ನು ಮಂಗಳೂರು ಸೆನ್‌ ಕ್ರೈಮ್‌ ಪೊಲೀಸರು ಬೇಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಬಂಧಿತ ಆರೋಪಿಗಳು ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯ ಬಹುದು ಎಂಬ ವಾಟ್ಸ್‌ಆ್ಯಪ್ ಸಂದೇಶವನ್ನು ಗಮನಿಸಿದ ಮಂಗಳೂರಿನ ವ್ಯಕ್ತಿಯೊಬ್ಬರು ಹಂತ ಹಂತವಾಗಿ 77,96,322.08 ರೂ.ವನ್ನು ಪಾವತಿಸಿದ್ದರು.

ಆದರೆ ಆರೋಪಿಗಳು ಲಾಭಾಂಶ ನೀಡದೆ ವಂಚಿಸಿದ್ದರು. ಈ ಬಗ್ಗೆ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೆನ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ

ವ್ಯಕ್ತಿಯಿಂದ ಪಾವತಿಯಾಗಿದ್ದ ಹಣದ ವಿವರಕ್ಕೆ ಸಂಬಂಧಿಸಿ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಗೆ 26,27,114.4 ರೂಪಾಯಿ ವರ್ಗಾವಣೆಯಾಗಿರುವುದು ಹಾಗೂ ಬಳಿಕ ಈ ಖಾತೆಯಿಂದ ಉಮರ್ ವಲಿಯ ಪರಂಬತ್ ಎಂಬಾತನ ಬ್ಯಾಂಕ್ ಖಾತೆಗೆ 6 ಲಕ್ಷ ರೂ. ಪಾವತಿಯಾಗಿರುವುದು ಕಂಡು ಬಂತು.

ತನಿಖೆ ಕೈಗೊಂಡಾಗ ರಿಯಾಝ್ ಎಂ.ವಿ. ಎಂಬಾತನು ಹಣವನ್ನು ವರ್ಗಾವಣೆ ಮಾಡಿಸಿದ್ದ. ಹೀಗೆ ಈ ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೆನ್ ಪೊಲೀಸ್‌ ಠಾಣಾಧಿಕಾರಿಯೂ ಆಗಿರುವ ಎಸಿಪಿ ರವೀಶ್ ನಾಯಕ್, ಇನ್ಸ್ ಪೆಕ್ಟರ್‌ ಸತೀಶ್ ಎಂ.ಪಿ., ಸಬ್ ಇನ್ಸ್ ಪೆಕ್ಟರ್‌ ಗುರಪ್ಪಕಾಂತಿ ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು

Continue Reading

LATEST NEWS

Trending

Exit mobile version