ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲು ಪೊಳಲಿ ಕ್ಷೇತ್ರದ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ.!
ಬಂಟ್ವಾಳ : ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಪ್ರಭು ಶ್ರೀರಾಮಚಂದ್ರನ ಮಂದಿರಕ್ಕೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲಿ ಎಂದು ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ,ತಾ.ಪಂ ಸದಸ್ಯ ಯಶವಂತ ಪೊಳಲಿ,ಯುವ ಮೋರ್ಚಾದ ಸುದರ್ಶನ್ ಬಜ,ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್,ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ,ನಂದರಾಮ್ ರೈ,,ಸುಕೇಶ್ ಚೌಟ,ವಾಮನ ಆಚಾರ್ಯ ಉಪಸ್ಥಿತರಿದ್ದರು.