LATEST NEWS
ವೇಲಾಂಕಣಿ ಮಡಗಾಂವ್ ಮಧ್ಯೆ ವಿಶೇಷ ರೈಲು ಓಡಾಟ; ಕೋಟ ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆ
ಉಡುಪಿ: ಕರಾವಳಿ ಕ್ರೈಸ್ತ ಸಮುದಾಯ ಮನವಿ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಕಣ ರೈಲ್ವೇ ನಿಗಮಕ್ಕೆ ನೀಡಿದ ಸೂಚನೆಯಂತೆ ಇದೀಗ ವೇಲಾಂಕಣಿ ಮಡಗಾಂವ್ ಮಧ್ಯೆ ವಿಶೇಷ ರೈಲು ಘೋಷಣೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ವೇಲಾಂಕಣಿ ಹಬ್ಬಕ್ಕಾಗಿ ಕುಂದಾಪುರ ರೈಲು ಸಮಿತಿಗೆ ಸಲ್ಲಿಸಿದ್ದ ಮನವಿಯಲ್ಲಿ ಕುಂದಾಪುರ ಕ್ರೈಸ್ತ ಸಮುದಾಯ ವೇಲಾಂಕಣಿ ವಿಶೇಷ ರೈಲಿನ ಆರಂಭಕ್ಕೆ ಮನವಿ ಮಾಡಿದ್ದರು.
ಈ ಮನವಿಯನ್ನು ಸಂಸದರ ಮುಂದಿಟ್ಟಿದ್ದ ಕುಂದಾಪುರ ರೈಲು ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್ ಮನವಿ ಪರಿಗಣಿಸಲು ಸಂಸದರನ್ನು ಕೋರಿದ್ದರು. ಈ ಬೇಡಿಕೆಯಂತೆ ಕಳೆದ ವಾರ ಕೊಂಕಣ ರೈಲ್ವೆ ನಿಗಮದ ಆಡಳಿತ ನಿರ್ದೇಶಕರ ಜತೆ ನಡೆದ ಸಭೆಯಲ್ಲಿ ಸಂಸದರು ವೇಲಾಂಕಣಿ ವಿಶೇಷ ರೈಲಿಗೆ ಸ್ಪಷ್ಟ ಸೂಚನೆ ನೀಡಿದ್ದರು.
ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ- ಲಕ್ಷ್ಮೀ ಹೆಬ್ಬಾಳ್ಕರ್
ಈ ಸೂಚನೆಯಂತೆ ಕೊಂಕಣ ರೈಲ್ವೆ ವಿಶೇಷ ರೈಲಿನ ಪ್ರಕಟಣೆ ನೀಡಿದ್ದು, ಮಧ್ಯಾಹ್ನ 12ಕ್ಕೆ ಸೆ. 6ರಂದು ಮಡಗಾಂವ್ ಬಿಡುವ ರೈಲು ಸಂಜೆ 4.20 ಕ್ಕೆ ಕುಂದಾಪುರ ತಲುಪಿ ಮರುದಿನ ಮಧ್ಯಾಹ್ನ 12 ಕ್ಕೆ ವೇಲಾಂಕಣಿ ತಲುಪಲಿದೆ. ಅದೇ ದಿನ ರಾತ್ರಿ 11.50ಕ್ಕೆ ಹೊರಟು ಮರುದಿನ ಸಂಜೆ 6.40ಕ್ಕೆ ಕುಂದಾಪುರ ಮೂಲಕ ರಾತ್ರಿ 11 ಕ್ಕೆ ಮಡಗಾಂವ್ ತಲುಪಲಿದೆ. ಈ ರೈಲಿನ ಪ್ರತಿಕ್ರಿಯೆ ನೋಡಿ ಮುಂದೆ ರೆಗ್ಯುಲರ್ ರೈಲಿನ ಘೊಷಣೆ ಇತ್ಯಾದಿ ಸಾಧ್ಯ ವಾಗಲಿದೆ ಎಂದು ಮೂಲಗಳು ಅಭಿಪ್ರಾಯ ಪಟ್ಟಿವೆ.
LATEST NEWS
ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮೃ*ತ್ಯು
ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃ*ತರು ಎಂದು ಗುರುತಿಸಲಾಗಿದೆ.
ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋ ನೋಡಿ:
LATEST NEWS
ಭರ್ಜರಿ ಶಾಕ್ ಕೊಟ್ಟ ಕೇಂದ್ರ ಸರ್ಕಾರ ! ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ !
ಮಂಗಳೂರು/ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.
ವಿಂಡ್ಫಾಲ್ ಟ್ಯಾಕ್ಸ್ ಎಂದರೇನು ?
ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.
ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.
LATEST NEWS
ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ
ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.
ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್‌ಗೆ ಆಟೋಗ್ರಾಫ್‌ನ್ನು ಸಹ ನೀಡಿದರು. ಇದೇ ವೇಳೆ ಅವನಿ ಲೆಖರಾ ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅಲ್ಲದೇ ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಮಂಗಳವಾರ ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ಗಳು, ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ಗೆ ತೆರಳಿತ್ತು.
ಕ್ರೀಡಾಪಟುಗಳ ಜೊತೆ ಮೋದಿ ಮಾತುಕತೆ ನಡೆಸಿದ ವೇಳೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಿಸಿಐ ಅಧ್ಯಕ್ಷ ದೇವೇಂದ್ರ ಜಜಾರಿಯಾ ಇದ್ದರು.
- LATEST NEWS4 days ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- FILM3 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- DAKSHINA KANNADA4 days ago
WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ ‘ಅಪರೇಷನ್ ಹೆಬ್ಬಾವು’; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ
- LATEST NEWS2 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
Pingback: ಹಾಸ್ಟೆಲ್ಗೆ ಅಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ..! ದೂರು ದಾಖಲು - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ಹಳಿ ಮೇಲೆ ಸಿಲಿಂಡರ್ ಇಟ್ಟು ರೈಲು ಸ್ಫೋಟಕ್ಕೆ ಯತ್ನ..! ತಪ್ಪಿದ ಭಾರೀ ದುರಂತ - NAMMAKUDLA NEWS - ನಮ್ಮಕುಡ್ಲ ನ್ಯೂಸ್