Wednesday, May 18, 2022

ಮಂಗಳೂರು: ಫುಟ್‌ಪಾತ್‌ ಮೇಲೆ ಮಲಗಿದ್ದವರ ಮೇಲೆ ಹರಿದ ಕಾರು- ಇಬ್ಬರು ಆಸ್ಪತ್ರೆಗೆ ದಾಖಲು

ಮಂಗಳೂರು: ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರು ಹರಿದ ಘಟನೆ ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಈ ಫುಟ್‌ಪಾತ್‌ನಲ್ಲಿ ಮಲಗಿದ್ದರು.

ಇಂದು ಬೆಳಗ್ಗೆ ಇಲ್ಲಿನ ರಸ್ತೆಯಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆಯಲ್ಲದೆ,

ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...