Monday, May 17, 2021

ಕಡಬ:ಶ್ರೀರಾಮ ಸೇನೆ ಮುಖಂಡನ ಮೇಲೆ ತಲವಾರು ದಾಳಿ: ಗಾಯಾಳು ಆಸ್ಪತ್ರೆಗೆ ದಾಖಲು..!

ಕಡಬ: ಶ್ರೀರಾಮ ಸೇನೆ ಮುಖಂಡ ಗೋಪಾಲ ನಾಯ್ಕ್ ಎಂಬವರ ಮೇಲೆ  ಭಾನುವಾರ  ರಾತ್ರಿ 9.10 ರ ಸುಮಾರಿಗೆ ತಂಡವೊಂದರರಿಂದ ತಲ್ವಾರಿನಿಂದ ದಾಳಿಗೆ ಯತ್ನ ನಡೆದಿದೆ ಎನ್ನಲಾಗಿದೆ. ಗೋಪಾಲ್ ನಾಯ್ಕ್ ಅವರು ಕಡಬದ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ರಾತ್ರಿ ಗೋಪಾಲ್ ನಾಯ್ಕ್ ಕಡಬದಿಂದ ಕೋಡಿಂಬಾಳದಲ್ಲಿರುವ ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಔಷಧಿ ತೆಗೆದುಕೊಂಡು ಹೋಗುತ್ತಿರುವ ವೇಳೆ ಅಜ್ಜಿಕಟ್ಟೆಯ ಬಳಿ ಹಿಂದಿನಿಂದ ಬಂದ ತಂಡವೊಂದು ತನ್ನ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿ,

ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದು ಸದ್ಯ ತಾನು ಕಡಬದ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಗೋಪಾಲ್ ನಾಯ್ಕ್ ಅವರು ತಿಳಿಸಿದ್ದಾರೆ.

ಸದ್ಯ ಈ ಬಗ್ಗೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಪ್ರಸ್ತುತ ಕಡಬ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...