Connect with us

    BELTHANGADY

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿ: ಪ್ರಸಕ್ತ ಸಾಲಿನ ಸೇವೆಯಾಟ ಆರಂಭ

    Published

    on

    ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ಸೇವೆಯಾಟವು ಶ್ರೀ ಮಂಜುನಾಥ ಸ್ವಾಮಿ ಹಾಗೂ ಛತ್ರ ಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ನೆರವೇರಿಸಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮೇಳದ ಯಜಮಾನ ಹರ್ಷೇಂದ್ರ ಕುಮಾರ್‌ ಅವರ ಶುಭಾಶೀರ್ವಾದಗಳೊಂದಿಗೆ ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್‌ ಅವರು ಕಲಾವಿದರಿಗೆ ಗೆಜ್ಜೆ ನೀಡುವ ಮೂಲಕ ಶುಭಾರಂಭಗೊಂಡಿತು.

    ವ್ಯವಸ್ಥಾಪಕ ಗಿರೀಶ್‌ ಹೆಗ್ಡೆ ಮತ್ತು ಸಿಬಂದಿ ಉಪಸ್ಥಿತರಿದ್ದರು. ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ ತಿರುಗಾಟದ ಪ್ರಥಮ ಸೇವೆಯಾಟ ನಡೆಯಿತು.

    BELTHANGADY

    ಬೆಳ್ತಂಗಡಿ : ಯುವಕನೊಂದಿಗೆ ಯುವತಿ ಪರಾರಿ ಶಂಕೆ; ಪ್ರಕರಣ ದಾಖಲು 

    Published

    on

    ಬೆಳ್ತಂಗಡಿ: ಕೆಲಸಕ್ಕೆ ಹೋಗಿ ಬರುವೆನೆಂದು ಹೇಳಿ ಹೋದ ಯುವತಿಯೊಬ್ಬಳು ಕಾಣೆಯಾಗಿರುವ ಘಟನೆ ವೇಣೂರು ಸಮೀಪ ಕರಿಮಣೇಲಿನಲ್ಲಿ ನಡಡೆದಿದೆ.

    ಸಂಧ್ಯಾ (22) ಕಾಣೆಯಾದ ಯವತಿ.

    ನ. 4ರಂದು  ಸಂಧ್ಯಾ ಮನೆಯಿಂದ ಕೆಲಸಕ್ಕೆ ಹೋದವಳು ಸಂಜೆ ತನ್ನ ಸಹೋದರಿಯ ಮೊಬೈಲ್‌ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್‌ ಸಂದೇಶ ಕಳುಹಿಸಿದ್ದಾಳೆ. ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರವನ್ನು ಸಹೋದರಿಗೆ ರವಾನಿಸಿದ್ದು, ಬಳಿಕ ಆಕೆಯ ಮೊಬೈಲ್‌ ಸ್ವಿಚ್ ಆಫ್‌ ಆಗಿದೆ.

    ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರಲಿಲ್ಲ ಎಂಬುವುದು ತಿಳಿದಿತ್ತು. ವೇಣೂರು ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

    Continue Reading

    BELTHANGADY

    ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆ*ತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!!

    Published

    on

    ಬೆಳ್ತಂಗಡಿ : ಇಲಿ ಪಾಷಣ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾ*ವಿಗೆ ಶರಣಾದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ.

    ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪ್ರಿಯಾಂಕಾ ಡಿ’ಸೋಜ(19) ಆ*ತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.

    ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಪ್ರಿಯಾಂಕ ಆ*ತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಗಂ*ಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಇಂದು (ನ.5) ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾಳೆ.

    ವಿಷ ಪದಾರ್ಥ ಸೇವಿಸಲು ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ. ಮೃ*ತ ಪ್ರಿಯಾಂಕ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ(BSC) ಕಲಿಗೆಯ ವಿದ್ಯಾರ್ಥಿನಿಯಾಗಿದ್ದರು. ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿದೆ.

    Continue Reading

    BELTHANGADY

    ಹದಿ ಹರೆಯದ ವಿದ್ಯಾರ್ಥಿಯ ಹನಿಟ್ರ್ಯಾಪ್ ಯತ್ನ ; ಪೊಲೀಸರಿಂದ ತನಿಖೆ !

    Published

    on

    ಬೆಳ್ತಂಗಡಿ : ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಪ್ರಕರಣ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

    ತಕ್ಷಣವೇ ಸೂಕ್ತ ಕ್ರಮ ಕೈಗೊಂಡ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಲಾಗಿದೆ.

    ಬೆಳ್ತಂಗಡಿ ವ್ಯಾಪ್ತಿಯ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ.

    ವೀಡಿಯೋ ವೈರಲ್ ಬೆದರಿಕೆ:

    ಇದಾದ ಬಳಿಕ ವಿದ್ಯಾರ್ಥಿಯ ಮುಖವನ್ನು ಬಳಿಕ ಅಶ್ಲೀಲ ವೀಡಿಯೋ ಕ್ರಿಯೆಟ್ ಮಾಡಲಾಗಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಮತ್ತೊಬ್ಬ ವ್ಯಕ್ತಿ ಕರೆ ಮಾಡಿ ಬೆದರಿಸಿದ್ದಾನೆ. ಅಲ್ಲದೇ, ಈ ವೀಡಿಯೋ ವೈರಲ್ ಆಗಬಾರದೆಂದಾಲ್ಲಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಇದರಿಂದ ಆತಂಕಕ್ಕೊಳಗಾದ ವಿದ್ಯಾರ್ಥಿ, ಈ ವಿಚಾರವನ್ನು ಮಾಧ್ಯಮ ಪ್ರತಿನಿಧಿಯೋರ್ವರ ಗಮನಕ್ಕೆ ತಂದಿದ್ದಾನೆ. ಅವರು ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯ ಹಾಗೂ ಸೈಬರ್ ಕ್ರೈಮ್ ವಿಭಾಗಕ್ಕೆ ತಕ್ಷಣವೇ ಮಾಹಿತಿ ನೀಡುವಂತೆ ಸಲಹೆ ನೀಡಿದ್ದಾರೆ. ಈ ವೇಳೆ ಪೊಲೀಸರು ಸಂಬಂಧಪಟ್ಟ ಖಾತೆಗಳನ್ನು ಬ್ಲಾಕ್  ಮಾಡುವಂತೆ ವಿದ್ಯಾರ್ಥಿಗೆ ತಿಳಿಸಿದ್ದಾರೆ.

    ತಮಗೆ ತಿಳಿಯದಂತೆ ವೀಡಿಯೋ ಕರೆ ಸ್ವೀಕರಿಸಿದ ಮಾತ್ರಕ್ಕೆ ಅವರ ಅಶ್ಲೀಲ ವೀಡಿಯೋವನ್ನು ಸಿದ್ಧ ಪಡಿಸಿ, ಅದನ್ನು  ಮಾನಹಾನಿಗೆ ಬಳಸುವ ಹಾಗೂ ಬೆದರಿಕೆಯೊಡ್ಡುವ ಮೂಲಕ ಹಣಕ್ಕಾಗಿ ಪೀಡಿಸುವ ಜಾಲಗಳು ಸಕ್ರೀಯವಾಗಿದ್ದು, ಈ ಜಾಲಕ್ಕೆ ಸಿಲುಕಿದರೂ ಭಯಪಡದೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ಸಹಾಯ ಸಂಖ್ಯೆ 1930ಕ್ಕೆ ಸಂಪರ್ಕಿಸಿ ಸಹಾಯ ಯಾಚಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ.

    Continue Reading

    LATEST NEWS

    Trending